ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
11-10-26 10:28 pm
HK News Desk
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm