ಬ್ರೇಕಿಂಗ್ ನ್ಯೂಸ್
12-08-21 11:28 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮೂರನೇ ಅಲೆಯ ಮುನ್ಸೂಚನೆಯೋ ಎನ್ನುವಂತೆ, ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಮುನ್ನೂರಕ್ಕೂ ಹೆಚ್ಚು ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಆಗಸ್ಟ್ 1 ರಿಂದ 10ರ ನಡುವೆ 354 ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆ ಆಗಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಪೈಕಿ 187 ಹೆಣ್ಮಕ್ಕಳು ಮತ್ತು 167 ಗಂಡು ಮಕ್ಕಳಾಗಿದ್ದು 18 ವರ್ಷದ ಒಳಗಿನ ಮಕ್ಕಳಿಗೆ ಸೋಂಕು ತಗಲಿರುವುದನ್ನು ಖಚಿತಪಡಿಸಿದ್ದಾರೆ.
ಬೆಂಗಳೂರು ನಗರ ಭಾಗದಲ್ಲಿಯೂ ಆಗಸ್ಟ್ ಮೊದಲ ವಾರದಲ್ಲಿ ಮಕ್ಕಳಿಗೆ ಹೆಚ್ಚು ಸೋಂಕು ತಗಲಿರುವುದು ಪತ್ತೆಯಾಗಿದೆ. ಆದರೆ, ಸೋಂಕು ಪತ್ತೆಯಾದ ಬಹುತೇಕ ಮಕ್ಕಳಿಗೆ ವಿಪರೀತ ತಲೆನೋವು ಕಂಡುಬಂದಿದ್ದು ಅದು ಬಿಟ್ಟರೆ ಬೇರೇನೂ ರೋಗ ಉಲ್ಬಣಿಸಿದ ಬಗ್ಗೆ ಮಾಹಿತಿ ಇಲ್ಲ. ಹಲವು ಮಕ್ಕಳಲ್ಲಿ ಶೀತ, ಜ್ವರದ ಜೊತೆ ಮೈ ಕೈನೋವಿನ ಲಕ್ಷಣಗಳು ಪತ್ತೆಯಾಗಿವೆ. ಹೀಗಾಗಿ ಸದ್ಯ ಮನೆಯಲ್ಲೇ ಸೋಂಕು ಪತ್ತೆಯಾಗಿರುವ ಮಕ್ಕಳಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.
ಕೊರೊನಾ ಮೊದಲ ಅಲೆಯಲ್ಲಿ ದ.ಕ. ಜಿಲ್ಲೆಯಲ್ಲಿ 2200 ಮಂದಿ ಮಕ್ಕಳಿಗೆ ಸೋಂಕು ಕಂಡುಬಂದಿತ್ತು. 2ನೇ ಅಲೆಯಲ್ಲಿ 7000 ಮಕ್ಕಳಿಗೆ ಕೊರೊನಾ ಸೋಂಕು ಆಗಿತ್ತು ಎನ್ನುವ ಮಾಹಿತಿಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ನೀಡಿದ್ದಾರೆ. ಹೀಗಾಗಿ ಮಕ್ಕಳಿಗೆ ಸೋಂಕು ಆಗಿರುವ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ 475 ಮಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಸೋಂಕು ಆಗಿದೆ.
More than 354 children below the age of 19 years have tested positive for Covid-19 in the past ten days in Mangalore, putting the city on alert. This is one of the highest number of cases among children reported in Karnataka so far.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm