ಬ್ರೇಕಿಂಗ್ ನ್ಯೂಸ್
13-08-21 12:40 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 13: ಕರಾವಳಿಯಲ್ಲಿ ಭಯೋತ್ಪಾದಕರ ಹೆಜ್ಜೆ ಗುರುತು ದೃಢಪಟ್ಟಿರುವ ಬೆನ್ನಲ್ಲೇ ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕೆಂಬ ಆಗ್ರಹ ಕೇಳಿಬಂದಿತ್ತು. ಇದೀಗ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ.
ಈ ಬಗ್ಗೆ ಸಿಎಂ ಬೊಮ್ಮಾಯಿ ಅವರಲ್ಲಿ ಕೇಳಿದ ಪ್ರಶ್ನೆಗೆ, ಈಗಾಗ್ಲೇ ಇದರ ಬಗ್ಗೆ ಗೃಹ ಇಲಾಖೆಯಿಂದ ಸಭೆಗಳನ್ನು ನಡೆಸಲಾಗುತ್ತಿದೆ. ಇದಕ್ಕಾಗಿ ರಾಜ್ಯದಲ್ಲಿ ದಕ್ಷ ಗೃಹ ಸಚಿವರಿದ್ದಾರೆ. ಈ ಬಗ್ಗೆ ಎರಡು ಬಾರಿ ಮೀಟಿಂಗ್ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ನೀಡಲಿದ್ದಾರೆ ಎಂದು ಹೇಳಿದರು.
ಎನ್ಐಎ ಕಚೇರಿ ಸ್ಥಾಪನೆ ಬಗ್ಗೆ ಮುಂದೆಯೂ ಪರಿಶೀಲನೆ, ಸಭೆಗಳು ನಡೆಯಲಿದೆ. ಭದ್ರತಾ ವಿಚಾರಗಳ ಬಗ್ಗೆ ನಾವೇನೂ ಹೆಚ್ಚು ಮಾತನಾಡಲು ಆಗಲ್ಲ. ಈ ಬಗ್ಗೆ ನಾವೆಲ್ಲ ಒಟ್ಟಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದರು. ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಕದ್ರಿ ಸರ್ಕಿಟ್ ಹೌಸ್ ಗೆ ಬಂದಿದ್ದ ವೇಳೆ ಕೇಳಿದ ಪ್ರಶ್ನೆಗೆ ಬೊಮ್ಮಾಯಿ ಚುಟುಕಾಗಿ ಉತ್ತರಿಸಿ ನಿರ್ಗಮಿಸಿದ್ದಾರೆ.
ಇತ್ತೀಚೆಗೆ ಎನ್ಐಎ ಅಧಿಕಾರಿಗಳು ಉಳ್ಳಾಲಕ್ಕೆ ದಾಳಿ ನಡೆಸಿ, ಮಾಜಿ ಶಾಸಕರೊಬ್ಬರ ಕುಟುಂಬ ಸದಸ್ಯರನ್ನು ವಿಚಾರಣೆಗೆ ಒಳಪಡಿಸಿದ್ದರು. ಒಬ್ಬ ಯುವಕನನ್ನು ಬಂಧಿಸಿ ಕರೆದೊಯ್ದಿದ್ದರು. ಆನಂತರ ಭಟ್ಕಳದಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು, ಐಸಿಸ್ ಪರವಾಗಿ ಆನ್ಲೈನ್ ಮ್ಯಾಗಜಿನ್ ನಡೆಸುತ್ತಿದ್ದ ಉಗ್ರನನ್ನು ಬಂಧಿಸಿದ್ದರು. ಇದರ ಬೆನ್ನಲ್ಲೇ ಬಜರಂಗದಳ ಕಾರ್ಯಕರ್ತರು ಉಳ್ಳಾಲದಲ್ಲಿ ಪ್ರತಿಭಟನೆ ನಡೆಸಿದ್ದು, ದಾಳಿಗೆ ಒಳಗಾಗಿದ್ದ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
Terror Links with ISIS CM Bommai hints of NIA office soon in Mangalore. Recently The Vishwa Hindu Parishad (VHP) on Wednesday reiterated its demand that a permanent National Investigation Agency (NIA) office and an Army camp be set up in Karnataka’s Mangaluru. The NIA had arrested Ammar Abdul Rahman of Ullal earlier this month in connection with the ISIS module case of Kerala. Referring to the case, VHP Mangaluru division secretary Sharan Pumpwell had on Monday claimed that it proved the anti-nationals were making the coastal region their base.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm