ಬ್ರೇಕಿಂಗ್ ನ್ಯೂಸ್
19-08-21 10:42 am Mangaluru Correspondent ಕರಾವಳಿ
ಸುಬ್ರಹ್ಮಣ್ಯ, ಆಗಸ್ಟ್ 19: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಗಸ್ಟ್ 30ರ ತನಕ ಯಾವುದೇ ಸೇವೆಗಳು ನಡೆಯುವುದಿಲ್ಲ. ಕೇವಲ ದೇವರ ದರ್ಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ಅಲ್ಲದೆ, ದೇವಸ್ಥಾನದಲ್ಲಿ ತೀರ್ಥಪ್ರಸಾದ, ಅನ್ನಸಂತರ್ಪಣೆಯೂ ಇರುವುದಿಲ್ಲ. ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರ್ಶನಕ್ಕೆ ಕೂಡ ಅವಕಾಶ ನಿರ್ಬಂಧಿಸಲಾಗಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಪ್ರಕಟಣೆ ತಿಳಿಸಿದೆ.

ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್-19 ಪ್ರಕರಣಗಳು ಅಧಿಕವಾಗಿರುವುದರಿಂದ ಜಿಲ್ಲಾಧಿಕಾರಿಗಳು ಯಾವುದೇ ಸೇವೆ ನಡೆಸದಂತೆ ಸೂಚನೆ ನೀಡಿದ್ದರು. ಇದರಂತೆ, ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆಯಲ್ಲಿ ಆ.30ರ ತನಕ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆ, ವಿಧಿಗಳು ನಡೆಯುವುದಿಲ್ಲ.

ಬೆಳಗ್ಗೆ 7ರಿಂದ ಮಧ್ಯಾಹ್ನ 11.30ರ ತನಕ, ಮಧ್ಯಾಹ್ನ 12-15- 1.30 ಹಾಗೂ 2.30 ರಿಂದ ಸಂಜೆ ಏಳರ ತನಕ ಭಕ್ತರು ದೇವರ ದರುಶನ ಮಾಡಬಹುದು. ಈ ಸಂದರ್ಭ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ದಿನಗಳಲ್ಲಿ ಕ್ಷೇತ್ರದ ವಸತಿ ಗೃಹದಲ್ಲಿ ತಂಗುವುದಕ್ಕೂ ಅವಕಾಶ ಇಲ್ಲ.
ಅಲ್ಲದೆ, ಇತರ ದಿನಗಳಲ್ಲಿ ಉಳಿದುಕೊಳ್ಳುವ ಭಕ್ತರು 72 ಗಂಟೆಯೊಳಗಿನ ಆರ್ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
Spike in Covid-19 cases kukke subramanya temple to close all its services till August 30th.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm