ಬ್ರೇಕಿಂಗ್ ನ್ಯೂಸ್
21-08-21 10:58 pm Bengaluru Correspondent ಕರಾವಳಿ
ಮಂಗಳೂರು, ಆಗಸ್ಟ್ 21: ಇಂದು ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಅತಿ ಹೆಚ್ಚು ಕೊರೊನಾ ಸೋಂಕು ಪ್ರಕರಣವನ್ನು ದಾಖಲಿಸಿದೆ. 350 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು , 4 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಹಾಸನ, ಮೈಸೂರುಗಳಲ್ಲಿ ಶನಿವಾರ ಕೋವಿಡ್ ಸಂಖ್ಯೆ ನೂರರ ಗಡಿ ದಾಟಿದೆ. ಕೊಡಗು, ತುಮಕೂರು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಐವತ್ತನ್ನು ದಾಟಿಲ್ಲ.
ಬೆಂಗಳೂರು ನಗರದಲ್ಲಿ 260 ಪ್ರಕರಣಗಳು ದಾಖಲಾಗಿವೆ. ಶುಕ್ರವಾರ ಈ ಸಂಖ್ಯೆ 352 ಇತ್ತು. ದಕ್ಷಿಣ ಕನ್ನಡ, ಉಡುಪಿ, ಹಾಸನ ಮತ್ತು ಮೈಸೂರಲ್ಲಿ ಕ್ರಮವಾಗಿ 320, 177, 101 ಮತ್ತು 102 ಇದೆ.
ರಾಜ್ಯದಲ್ಲಿ ಇಂದು ಕೋವಿಡ್ ಕಾರಣದಿಂದ 18 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಮೃತರಾದವರ ಸಂಖ್ಯೆ 17 ಇತ್ತು. ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕು ಖಚಿತ ಪ್ರಕರಣಗಳ ಪ್ರಮಾಣ ಶೇಕಡಾ 1ಕ್ಕಿಂತ ಹೆಚ್ಚಾಗದಿರುವುದು ಕೊಂಚ ನೆಮ್ಮದಿಗೆ ಕಾರಣವಾಗಿದೆ.
ಇಂದು ಕೋವಿಡ್ ಸೋಂಕಿನಿಂದ ಗುಣಮುಖರಾಗಿ 1,648 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 28,79,433ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು ಒಟ್ಟು 1,57,509 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 1,350 ಹೊಸ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 20,845ಕ್ಕೆ ತಲುಪಿದೆ. ಕೋವಿಡ್ 19 ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.33 ಇದೆ. ಇಂದಿನ ವರೆಗೆ ರಾಜ್ಯದಲ್ಲಿ ಒಟ್ಟು 37,123 ಮಂದಿ ಕೋವಿಡ್ 19 ಸೋಂಕಿನಿಂದ ಪ್ರಾಣ ಕಳೆದುಕೊಂಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ 4 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಹಾಸನ, ಕೋಲಾರ, ಶಿವಮೊಗ್ಗದಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ. ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ದಾವಣಗೆರೆ, ಹಾವೇರಿ ಮತ್ತು ಮೈಸೂರಲ್ಲಿ ತಲಾ 1 ಸಾವು ಸಂಭವಿಸಿದೆ.
Dakshina Kannada is Karnataka’s new Covid-19 hotspot. Dakshina Kannada in Karnataka has been witnessing a surge in Covid-19 cases and fatalities for nearly a fortnight, with the district continuing to outnumber the figures being reported from Bengaluru Urban which has otherwise been recording the highest numbers in the state. While Dakshina Kannada reported 3,553 new cases and 52 deaths since August 10, Bengaluru Urban reported 3,374 and 40, respectively, during the same period.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 11:30 am
HK News Staffer
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
12-10-26 04:12 pm
HK News Staffer
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm