ಬ್ರೇಕಿಂಗ್ ನ್ಯೂಸ್
24-08-21 11:50 am Mangaluru Correspondent ಕರಾವಳಿ
ಮಂಗಳೂರು, ಆ.23 : ಕೋವಿಡ್ ಸೋಂಕಿನ ನಿರ್ವಹಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ವಿಳಂಬಕ್ಕೆ ಆಸ್ಪದವಿಲ್ಲದಂತೆ ವೇತನ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಜಿಲ್ಲಾಧಿಕಾರಿಯವರಿಗೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೋವಿಡ್ ನಿಯಂತ್ರಣ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿದೆ. ಕೋವಿಡ್ ನಿರ್ವಹಣೆ, ನಿಯಂತ್ರಣ ಹಾಗೂ ಶುಶ್ರೂಷೆಯಲ್ಲಿ ತೊಡಗಿರುವ ಸಿಬ್ಬಂದಿಗಳಿಗೆ ಕಾಲ ಕಾಲಕ್ಕೆ ವೇತನ ಪಾವತಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಈ ಹಿನ್ನೆಲೆಯಲ್ಲಿ ಲ್ಯಾಬ್ ಟೆಕ್ನಿಷಿಯನ್, ಸ್ಟಾಫ್ ನರ್ಸ್ ಹಾಗೂ ಊಟ ಉಪಾಹಾರ ಒದಗಿಸುವ ಕ್ಯಾಂಟೀನ್‍ಗಳಿಗೆ ಆಯಾ ಸಂದರ್ಭದಲ್ಲಿ ವೇತನ ಪಾವತಿಸಬೇಕು. ಇದರಲ್ಲಿ ವಿಳಂಬ ತೋರುವ ತಹಶೀಲ್ದಾರರು ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕರ್ತವ್ಯ ಲೋಪ ಎಸಗಿದಲ್ಲಿ ಅವರನ್ನು ಅಮಾನತು ಮಾಡುವಂತೆ ಸಚಿವರು ಸೂಚಿಸಿದರು.
ಕೋವಿಡ್ ನಿರ್ವಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ಸಮಸ್ಯೆಗಳಿದ್ದಲ್ಲಿ ಇತ್ಯರ್ಥ ಪಡಿಸಿಕೊಂಡು ಕ್ರಮ ವಹಿಸಲು ಸೂಚಿಸಲಾಗಿದೆ. ಆದಾಗ್ಯೂ ಅಧಿಕಾರಿಗಳ ನಿರ್ಲಕ್ಷ್ಯದ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದರು.


ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಮಾತನಾಡಿ, ವೇತನ ಪಾವತಿ ವಿಚಾರದಲ್ಲಿ ವಿಳಂಬ ತೋರಿದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಎಲ್ಲಾ ತಹಶೀಲ್ದಾರರು ತಿಂಗಳ 5 ತಾರೀಕಿನೊಳಗೆ ಸಂಬಂಧಿಸಿದ ಸಿಬ್ಬಂದಿಗಳಿಗೆ ವೇತನ ಪಾವತಿಸಬೇಕು. ಯಾವುದೇ ಕಾರಣಕ್ಕೂ ಬಾಕಿ ಉಳಿಸಬಾರದು. ಇಲ್ಲದಿದ್ದರೆ ಸಂಬಂಧಿಸಿದ ತಹಶೀಲ್ದಾರರಿಗೆ ನೋಟೀಸ್ ನೀಡಿ, ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಎಲ್ಲ ತಾಲೂಕುಗಳಲ್ಲಿಯೂ ಹೆಚ್ಚಿನ ತಪಾಸಣೆ ನಡೆಸಬೇಕು. ಆದಷ್ಟು ಹೆಚ್ಚಾಗಿ ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಜನ ಯಾವ ಸಂದರ್ಭದಲ್ಲಿ ಹೆಚ್ಚು ಲಭ್ಯವಾಗುತ್ತಾರೋ ಆಗ ಪರೀಕ್ಷೆಗಳನ್ನು ನಡೆಸುವುದು ಉತ್ತಮ ಎಂದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಪ್ರತಿನಿತ್ಯ 11,000 ಪರೀಕ್ಷೆ ಮಾಡಲಾಗುತ್ತಿದೆ. ಅದನ್ನು 15 ಸಾವಿರಕ್ಕೆ ಹೆಚ್ಚಿಸಲಾಗುವುದು, ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದ ಕನಿಷ್ಠ 20 ಮಂದಿಯನ್ನು ತಪಾಸಣೆ ಮಾಡಬೇಕು. ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೂ 180 ರಿಂದ 200 ಮಂದಿಯ ತಪಾಸಣೆ ಆಗಬೇಕು. ಪ್ರತಿ ಲ್ಯಾಬ್ ಟೆಕ್ನಿಷಿಯನ್‍ಗಳು 50 ಸ್ವ್ಯಾಬ್ ಟೆಸ್ಟ್ ಮಾಡಲೇಬೇಕು, ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವಾಹನಗಳನ್ನು ಹಾಗೂ ಅಗತ್ಯ ಸಂಖ್ಯೆಯ ಲ್ಯಾಬ್ ಟೆಕ್ನಿಷಿಯನ್‍ಗಳನ್ನು ಒದಗಿಸಲಾಗಿದೆ ಎಂದರು.
ಸಂಸದರಾದ ನಳೀನ್ ಕುಮಾರ್ ಕಟೀಲ್ ಮಾತನಾಡಿ, ಕೋವಿಡ್ ತಪಾಸಣೆಯನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯವಿರುವ ಕ್ರಮ ಹಾಗೂ ಬೇಕಾದ ಸಿಬ್ಬಂದಿಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.


ಷರತ್ತು ಸಹಿತ ಪಿಯುಸಿ ತರಗತಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿ ಹಾಗೂ ಪಿಯುಸಿ ತರಗತಿಗಳನ್ನು ಈಗಾಗಲೇ ಆರಂಭಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು. ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‍ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯ ಕ್ವಾರಂಟೈನ್ ಇರಬೇಕು. ನಂತರ ಮತ್ತೊಮ್ಮೆ ಆರ್‍ಟಿಪಿಸಿಆರ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ಸಂಜೀವ ಮಠಂದೂರು, ಪ್ರತಾಪಸಿಂಹ ನಾಯಕ್ ಮಾತನಾಡಿದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಾಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಕುಮಾರ್ ವೇದಿಕೆಯಲ್ಲಿದ್ದರು.
ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Fisheries and district in-charge minister Angara directed deputy commissioner (DC) Dr K V Rajendra to take strict action against concerned officers responsible for the payment of salaries of Covid warriors.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm