ಬ್ರೇಕಿಂಗ್ ನ್ಯೂಸ್
27-08-21 03:10 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 27: ಆಹಾರ ತಯಾರಿ ಕೇಂದ್ರಗಳಲ್ಲಿ ಮಿತಿಗಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಕೆ ಮಾಡುವುದು ಪತ್ತೆಯಾದರೆ, ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಸಂಕೀರ್ಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಆಹಾರ ಸುರಕ್ಷತೆ ವಿಚಾರದಲ್ಲಿ ಜಿಲ್ಲಾಧಿಕಾರಿ ಈ ಸೂಚನೆ ನೀಡಿದ್ದಾರೆ. ಗೋಬಿ ಮಂಚೂರಿ ಸೇರಿದಂತೆ ಚೈನೀಸ್ ಐಟಂ ತಯಾರಿ ಕೇಂದ್ರಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿಬಂದಿದೆ. ಇದರಿಂದ ಗ್ರಾಹಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ಎಲ್ಲ ಕಡೆ ದಾಳಿ ನಡೆಸಬೇಕು. ಫುಡ್ ಸ್ಯಾಂಪಲನ್ನು ಪ್ರಯೋಗಾಲಯಕ್ಕೆ ಕಳುಹಿಸಿ, ಗುಣಮಟ್ಟ ಖಾತ್ರಿ ಮಾಡಬೇಕು. ಯಾವುದೇ ರೀತಿಯಲ್ಲಿ ಆಹಾರ ಗುಣಮಟ್ಟದಲ್ಲಿ ಕೊರತೆ ಕಂಡುಬಂದಲ್ಲಿ ಅಂಥವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.



ಅಲ್ಲದೆ, ಟೇಸ್ಟಿಂಗ್ ಪೌಡರನ್ನು ಪರವಾನಗಿ ಇಲ್ಲದೆ ಮಾರಾಟ ಮಾಡುವ ವ್ಯಾಪಾರಸ್ಥರ ಮೇಲೆಯೂ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಬೇಕರಿ ಇನ್ನಿತರ ಆಹಾರ ತಯಾರಿ ಕೇಂದ್ರಗಳಿಗೆ ಪ್ರತಿ ತಿಂಗಳು ದಾಳಿ ನಡೆಸಬೇಕು. ಆಹಾರ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಬೇಕರಿ ತಿಂಡಿ, ತಿನಿಸುಗಳ ಪ್ಯಾಕೆಟ್ ಗಳಲ್ಲಿ ಬಳಕೆಯ ಅವಧಿ ಬಗ್ಗೆ ನಮೂದೆ ಮಾಡಲಾಗಿದೆಯೇ ಎನ್ನುವ ಬಗ್ಗೆ ತಪಾಸಣೆ ನಡೆಸಬೇಕು. ಪ್ರತಿ ತಿಂಗಳು ಬೇಕರಿ ಇನ್ನಿತರ ಆಹಾರ ಸಾಮಗ್ರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸುವ ಕೆಲಸ ಆಗಬೇಕು ಎಂದು ಜಿಲ್ಲಾಧಿಕಾರಿಗಳು ಆಯಾ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹಣ್ಣು, ತರಕಾರಿಗಳ ಕೆಮಿಕಲ್ ಬಳಕೆ ಮಾಡುವ ಬಗ್ಗೆಯೂ ನಿಗಾ ವಹಿಸಬೇಕು. ಬಾಳೆಹಣ್ಣು ಇನ್ನಿತರ ಹಣ್ಣುಗಳ ಹೋಲ್ ಸೇಲ್ ವ್ಯಾಪಾರಿಗಳು ಕೆಮಿಕಲ್ ಬಳಕೆ ಮಾಡುತ್ತಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಬೇಕು. ಅಂಥ ವ್ಯಾಪಾರಿಗಳ ವಿರುದ್ಧ ಕಟ್ಟಿನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದ್ದಾರೆ.
ಸಭೆಯಲ್ಲಿ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಎಎಸ್ಪಿ ಕುಮಾರಚಂದ್ರ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ಉಪಸ್ಥಿತರಿದ್ದರು.
Deputy commissioner (DC) G Jagadeesha warned that a criminal case will be filed against food manufacturers if it is found that they are using excessive amounts of tasting powder in any kind of food manufacture.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm