ಬ್ರೇಕಿಂಗ್ ನ್ಯೂಸ್
27-08-21 09:28 pm Mangaluru Correspondent ಕರಾವಳಿ
ಮಂಗಳೂರು, ಆ.27: ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ ಅನುಷ್ಟಾನಗೊಳ್ಳುತ್ತಿರುವ ಕಾಮಗಾರಿಗಳನ್ನು ಸಹಾಯಕ ಆಯುಕ್ತರು ಪ್ರತಿ ವಾರ ಪ್ರಗತಿ ಪರಿಶೀಲನೆ ನಡೆಸಿ ಕಾಮಗಾರಿಗಳಿಗೆ ಚುರುಕು ಮುಟ್ಟಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ದೇಶನ ನೀಡಿದರು.
ನಗರದ ಸರ್ಕಿಟ್ ಹೌಸ್‍ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಕೈಗೊಳ್ಳಲಾದ ಕಾಮಗಾರಿಗಳ ಮಂಜೂರಾತಿ ಹಾಗೂ ಅವುಗಳ ಪ್ರಗತಿ ಪರಿಶೀಲನೆ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರತಿ ಶಾಸಕರಿಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ದಿಗಾಗಿ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲು 2 ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅತಿಯಾದ ಕಾರ್ಯ ಬಾಹುಳ್ಯದ ಕಾರಣ ಈ ಕಾಮಗಾರಿಗಳ ಮೇಲ್ವಿಚಾರಣೆಯನ್ನು ಕಳೆದ ವರ್ಷದಿಂದ ಸಹಾಯಕ ಆಯುಕ್ತರಿಗೆ ವಹಿಸಲಾಗಿತ್ತು. ಆದಾಗ್ಯೂ ನಿರೀಕ್ಷಿತ ಮಟ್ಟದಲ್ಲಿ ಪ್ರಗತಿಯಾಗುತ್ತಿಲ್ಲ. ಹಾಗಾಗಿ ತಳಮಟ್ಟದಿಂದ ಸಮಸ್ಯೆಗಳನ್ನು ಅರಿತು ಅದರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು. ತಾಂತ್ರಿಕ ಹಾಗೂ ಆಡಳಿತಾತ್ಮಕ ಕಾರಣಗಳಿಂದ ಕಾಮಗಾರಿಗಳು ವಿಳಂಬವಾಗಬಾರದು. ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಕಾಮಗಾರಿಗಳ ಅನುಷ್ಠಾನ ಗಂಭೀರ ವಿಷಯವಾಗಿದ್ದು, ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮ ವಹಿಸಬೇಕು ಎಂದರು.

ಒಂದೇ ಏಜನ್ಸಿಯ ಬದಲು ಹಲವು ಏಜನ್ಸಿಗಳ ಮೂಲಕ ನಿರ್ವಹಿಸುವುದು ಉತ್ತಮ, ಕಾಮಗಾರಿ ಪೂರ್ಣಗೊಂಡ ನಂತರ ಮೂರನೇ ವ್ಯಕ್ತಿ ತಪಾಸಣೆ ಅತೀ ಶೀಘ್ರವಾಗಿ ಆಗಬೇಕು. ನಿರ್ವಹಿಸಲಾದ ಕಾಮಗಾರಿಗಳು, ಅದಕ್ಕೆ ಬಿಡುಗಡೆಯಾದ ವೆಚ್ಚ, ಭರಿಸಲಾದ ಮೊತ್ತದ ವಿವರವನ್ನು ಕಾಲ ಕಾಲಕ್ಕೆ ಸಾಫ್ಟ್ ವೇರ್‍ನಲ್ಲಿ ಅಪ್‍ಡೇಟ್ ಮಾಡಬೇಕು. ನಿರ್ವಹಿಸುವ ಏಜೆನ್ಸಿಗಳು ಚಟುವಟಿಕೆಗಳಿಂದ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಮೂಲಕ ನಿರ್ವಹಿಸಲಾಗುತ್ತಿರುವ ಕಾಮಗಾರಿಗಳಲ್ಲಿ ಅಲ್ಲಿನ ಸಹಾಯಕ ಕಾರ್ಯಪಾಲಕ ಇಂಜಿನಿಯರ್‍ಗಳು ವಹಿಸುತ್ತಿರುವ ಕ್ರಮಗಳನ್ನು ಸಹಾಯಕ ಆಯುಕ್ತರು ನೇರವಾಗಿಯೇ ಮೇಲ್ವಿಚಾರಣೆ ಮಾಡಬಹುದಾಗಿದೆ. ಕಾಮಗಾರಿಗಳನ್ನು ಎಂಟ್ರಿ ಮಾಡುವ ಸಾಫ್ಟ್ ವೇರ್‍ನಲ್ಲಿ ಸಮಸ್ಯೆ ಎದುರಾದಲ್ಲಿ ಕೂಡಲೇ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಲು ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜವಾಬ್ದಾರರಾಗಿರುತ್ತಾರೆ, ರಾಜ್ಯದಲ್ಲಿ ಅಂದಾಜು ಒಂದು ಸಾವಿರ ಕೋಟಿ ರೂ. ಈ ರೀತಿಯ ಕಾಮಗಾರಿಗಳಿಂದಾಗಿ ಬಾಕಿ ಉಳಿದಿದ್ದು, ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಪಿಡಿ ಖಾತೆಗಳಲ್ಲಿವೆ ಎಂದು ಹೇಳಿದರು.

ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಲು ಸೂಚನೆ
ಮುಂಬರುವ ಸೆಪ್ಟೆಂಬರ್ 13 ರಿಂದ 24ರ ವರೆಗೆ ರಾಜ್ಯ ವಿಧಾನಸಭಾ ಅಧಿವೇಶನ ನಡೆಸಲು ಆದೇಶ ಹೊರಡಿಸಲಾಗಿದೆ. 6 ತಿಂಗಳ ನಂತರ ಅಧಿವೇಶನ ನಡೆಯುತ್ತಿದ್ದು, ಅಧಿವೇಶನವನ್ನು 10 ದಿನಗಳ ಕಾಲ ಯಶಸ್ವಿಯಾಗಿ ನಿರ್ವಹಿಸುವ ಉದ್ದೇಶವಿದೆ. ಈ ಅಧಿವೇಶನದಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ಕಡ್ಡಾಯವಾಗಿ ಹಾಜರಿರಬೇಕು. ಯಾರೂ ಕೂಡ ಈ ಅವಧಿಯಲ್ಲಿ ರಜೆ ಕೇಳಬಾರದು. ಎಲ್ಲರೂ ಪೂರ್ಣ ಪ್ರಮಾಣದಲ್ಲಿ ಭಾಗವಹಿಸಬೇಕು. ಇದನ್ನು ಈಗಾಗಲೇ ಪತ್ರ ಮುಖೇನ ಸಂಬಂಧಿಸಿದವರಿಗೆಲ್ಲಾ ತಿಳಿಸಲಾಗಿದೆ. ಅದರಂತೆ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಹಾಜರಿರಬೇಕು ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಭರತ್ ಶೆಟ್ಟಿ, ಹರೀಶ್ ಪೂಂಜ, ರಾಜೇಶ್ ನಾಯ್ಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪ್ರಜ್ಞಾ ಅಮ್ಮೆಂಬಳ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಡಿಯುಡಿಸಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಲೋಕೋಪಯೋಗಿ, ಪಂಚಾಯತ್ ರಾಜ್ ಹಾಗೂ ಎಂಜಿನಿಯರಿಂಗ್ ವಿಭಾಗ, ನಿರ್ಮಿತಿ ಕೇಂದ್ರ, ಮೂಡಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
Vishweshwar Hegde Kageri in Mangalore says Do not skip legislature sessions Karnataka assembly
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm