ಬ್ರೇಕಿಂಗ್ ನ್ಯೂಸ್
29-08-21 03:49 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 29: ವಯಸ್ಸು ಶತಕದ ಹತ್ತಿರ ಇದ್ದರೂ ಟ್ರಾಫಿಕ್ ವಾರ್ಡನ್ ಚೀಫ್ ಆಗಿ ಯುವಕರು ನಾಚಿಸುವ ರೀತಿ ಸಮಾಜ ಸೇವೆಯಲ್ಲಿ ನಿರತರಾಗಿದ್ದ ಜೋಸೆಫ್ ಗೊನ್ಸಾಲ್ವಿಸ್ ತಮ್ಮ 99ರ ಹರೆಯದಲ್ಲಿ ಕೆಲಸ ನಿಲ್ಲಿಸಿದ್ದಾರೆ. ಕೆಲ ದಿನಗಳಿಂದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಗೋನ್ಸಾಲ್ವಿಸ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಜೋ ಗೊನ್ಸಾಲ್ವಿಸ್ ಎಂದೇ ಹೆಸರಾಗಿದ್ದ ಅವರು, ಮಂಗಳೂರು ನಗರದ ಫಳ್ನೀರ್ ನಲ್ಲಿ ವಾಸವಿದ್ದರು. ಮೊದಲಿಗೆ ಬ್ರಿಟಿಷ್ ಮೂಲದ ಜೆಎಲ್ ಮೋರಿಸನ್ ಕಂಪನಿಯಲ್ಲಿ ಮ್ಯಾನೇಜ್ಮೆಂಟ್ ಟ್ರೈನೀ ಆಗಿ ಉದ್ಯೋಗಕ್ಕೆ ಸೇರಿದ್ದ ಜೋ ಬಳಿಕ ಅದೇ ಕಂಪನಿಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿದ್ದರು. ಕೊನೆಗೆ, ಕಂಪನಿಯಲ್ಲಿ ಭಡ್ತಿ ಪಡೆದು ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗೇರಿದ್ದರು. ಆ ಸಂದರ್ಭದಲ್ಲಿ ಲಂಡನ್ ನಗರದಲ್ಲೇ ಜೋ ಗೊನ್ಸಾಲ್ವಿಸ್ ನೆಲೆಯಾಗಿದ್ದರು.

ಕಂಪನಿ ಉದ್ಯೋಗದಿಂದ ನಿವೃತ್ತಿಯಾದ ಬಳಿಕ ಶಿಕ್ಷಣ ಸಂಸ್ಥೆಗಳು ಮತ್ತು ಚಾರಿಟಿ ಸಂಸ್ಥೆಗಳಲ್ಲಿ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದ್ದರು. ಉತ್ತರ ಅಮೆರಿಕಾದಲ್ಲಿ ಮಂಗಳೂರಿನ ಸೈಂಟ್ ಅಲೋಸಿಯಸ್ ಅಲ್ಯುಮ್ನಿ ಅಸೋಸಿಯೇಶನ್ ಹೆಸರಲ್ಲಿ ಸಂಘಟನೆಯ ಸ್ಥಾಪಕರಾಗಿದ್ದರು. ನಿವೃತ್ತಿಯ ಬಳಿಕ ಮಂಗಳೂರಿನಲ್ಲಿದ್ದ ವೇಳೆ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿ, ಟ್ರಾಫಿಕ್ ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದರು. ಅದರಂತೆ, 2015ರಲ್ಲಿ ಟ್ರಾಫಿಕ್ ವಾರ್ಡನ್ ಸೇವೆ ಆರಂಭಿಸಿದ್ದಲ್ಲದೆ ತಮ್ಮ 94ರ ವಯಸ್ಸಿನಲ್ಲಿ ಚೀಫ್ ವಾರ್ಡನ್ ಆಗಿ ಸೇವೆ ಆರಂಭಿಸಿದ್ದರು.
ನಿಯಮಿತ ಯೋಗ ಅಭ್ಯಾಸ ಮಾಡುತ್ತಾ ಬಂದಿದ್ದರಿಂದ ದೈಹಿಕವಾಗಿ ಸದೃಢರಾಗಿದ್ದರು. ವಯಸ್ಸಾದವರು ಯಾವ ರೀತಿ ದೈಹಿಕ ಆರೋಗ್ಯ ಬೆಳೆಸಿಕೊಳ್ಳಬೇಕು ಎನ್ನುವ ಬಗ್ಗೆ ಆಸಕ್ತರಿಗೆ ತರಬೇತಿ ಟಿಪ್ಸ್ ನೀಡುತ್ತಿದ್ದರು. ತನ್ನ ಉತ್ತಮ ಆರೋಗ್ಯದಿಂದಾಗಿ ಕೊನೆಯ ವರೆಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು ಜೋ ಗೊನ್ಸಾಲ್ವಿಸ್ ವಿಶೇಷ.
Well-known traffic warden chief Joseph Gonsalves, who had inspired a generation of Mangalureans with his social work and sense of public duty, passed away on Sunday August 29. He was 99.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm