ಬ್ರೇಕಿಂಗ್ ನ್ಯೂಸ್
30-08-21 04:35 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಕೊರೊನಾ ಕಾರಣಕ್ಕೆ ಹೆಚ್ಚು ಜನರು ಒಂದೇ ಕಡೆ ಸೇರುವುದಕ್ಕೆ ಅವಕಾಶವಿಲ್ಲ. ಆದರೆ, ಒಂದು ಜಾಗದಲ್ಲಿ ಸೇರುವ ಬದಲು ಏಕಕಾಲದಲ್ಲಿ ಜಗತ್ತಿನಾದ್ಯಂತ ಇರುವ ಸಾವಿರಾರು ಆಸಕ್ತರನ್ನು ಒಂದೇ ಕಡೆ ಸೇರಿಸಿ ಸಂವಾದಿಸಬಲ್ಲ ಡಿಜಿಟಲ್ ವೇದಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಅಂಥವುಗಳಲ್ಲಿ ವಾಟ್ಸಪ್, ಫೇಸ್ಬುಕ್ ಬಳಿಕ ಜನರನ್ನು ಹೆಚ್ಚು ಆಕರ್ಷಿಸಿದ್ದು ಕ್ಲಬ್ ಹೌಸ್.
ಹೊಸ ವಿಷ್ಯ ಏನಪ್ಪಾಂದ್ರೆ, ಕರಾವಳಿಯಲ್ಲಿ ಆಗಿಂದಾಗ್ಗೆ ಆಗುತ್ತಿದ್ದ ಹಿಂದು ಸಮಾವೇಶಗಳೂ ಈಗ ಈ ರೀತಿಯ ಡಿಜಿಟಲ್ ಪರದೆಗಳಲ್ಲಿ ಆರಂಭಗೊಂಡಿದೆ. ಮೊಟ್ಟಮೊದಲ ಬಾರಿಗೆ ಆಗಸ್ಟ್ 30ರಂದು ಹೊಸ ರೀತಿಯಲ್ಲಿ ಹಿಂದು ಸಮಾವೇಶ ಆಯೋಜನೆಗೊಂಡಿದ್ದು, ಪ್ರಖರ ಭಾಷಣಕಾರ ಎಂದು ಹೆಸರು ಪಡೆದಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಇಂದು ಸಂಜೆ 7.30ಕ್ಕೆ ಕ್ಲಬ್ ಹೌಸ್ ನ ಹಿಂದುತ್ವ ಎನ್ನುವ ಪೇಜ್ ನಲ್ಲಿ ಹಿಂದು ಸಮಾವೇಶ ನಡೆಯಲಿದ್ದು, ಐದು ಸಾವಿರಕ್ಕೂ ಹೆಚ್ಚು ಜನ ಒಂದೆಡೆ ಸೇರಲಿದ್ದಾರೆ. ಮೊದಲ ಬಾರಿಗೆ ಈ ರೀತಿಯ ವೇದಿಕೆಯಲ್ಲಿ ಹಿಂದು ಸಮಾವೇಶ ನಡೆಯುತ್ತಿದ್ದು, ಕಲ್ಲಡ್ಕ ಪ್ರಭಾಕರ ಭಟ್ಟರ ಜೊತೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಉಪಸ್ಥಿತಿ ಇರಲಿದ್ದಾರೆ. ಕಾರ್ಯಕ್ರಮದ ನಿರೂಪಣೆಯನ್ನು ಲೇಖಕ ರೋಹಿತ್ ಚಕ್ರತೀರ್ಥ ನಡೆಸಲಿದ್ದಾರೆ. ಖ್ಯಾತ ಗಾಯಕಿ ರಮ್ಯ ವಸಿಷ್ಠ ಪ್ರಾರ್ಥನೆ ಮತ್ತು ವಂದೇ ಮಾತರಂ ಹಾಡಲಿದ್ದಾರೆ.
ಅಂದಹಾಗೆ, ಹಿಂದುತ್ವ ಪರ ಘೋಷಣೆಗಳು, ಯುವಜನರ ಹಾರಾಟ ಇಲ್ಲದೆ ತಣ್ಣಗಿನ ರೂಪದಲ್ಲಿ ಕೇಳುಗರಲ್ಲಿ ಹಿಂದುತ್ವದ ಪರ ಅಲೆ ಎಬ್ಬಿಸುವ ಸಮಾವೇಶ ನಡೆಯುತ್ತಿರೋದು ಇದೇ ಮೊದಲು.
Mangalore Hindu Samavesha to be organised in Club house app for the first time where members around the world will be able to watch live.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm