ಬ್ರೇಕಿಂಗ್ ನ್ಯೂಸ್
07-09-20 06:26 pm Mangalore Reporter ಕರಾವಳಿ
ಮಂಗಳೂರು, ಸೆಪ್ಟೆಂಬರ್ 7: ಅಂಗಡಿ ಮಾಲಕ ತಾನು ವ್ಯಾಪಾರ ಮಾಡುತ್ತಿದ್ದ ಅಂಗಡಿಗೆ ತಾನೇ ಬೆಂಕಿ ಹಚ್ಚಿ ಭಸ್ಮ ಮಾಡಿದ ವಿಚಿತ್ರ ಘಟನೆ ದಕ್ಷಿಣ ಕನ್ನಡದ ಪುತ್ತೂರು ಸಮೀಪ ನಡೆದಿದೆ. ಈಶ್ವರಮಂಗಲ ಸಮೀಪದ ಪಂಚೋಡಿ ಮಾವಿನಕಟ್ಟೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು ಈ ಘಟನೆ ಸ್ಥಳೀಯರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಅಂಗಡಿ ಮಾಲಿಕ ತನ್ನ ಅಂಗಡಿಗೆ ತಾನೇ ಬೆಂಕಿ ಇಟ್ಟಿದೇಕೆ ಎಂಬುದು ಮಾತ್ರ ನಿಗೂಢವಾಗಿದೆ.
ಮಾವಿನಕಟ್ಟೆ ನಿವಾಸಿ ಮಹಮ್ಮದ್ ಎಂಬವರು ಕಳೆದ 4 ವರ್ಷಗಳಿಂದ ಗೂಡಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಲಾಕ್ಡೌನ್ ಬಳಿಕ ಕಳೆದ ಎರಡು ತಿಂಗಳಿನಿಂದ ಅಂಗಡಿಯಲ್ಲಿ ವ್ಯಾಪಾರ ಆರಂಭಿಸಿದ್ದರು. ಅಂಗಡಿಯಲ್ಲಿ ಸ್ಟೇಶನರಿ ಸಾಮಾಗ್ರಿ ಮತ್ತು ಚಹಾ ಹೊಂದಿರುವ ಸಣ್ಣ ಕ್ಯಾಂಟೀನ್ ಕೂಡಾ ಅದರೊಳಗಿತ್ತು. ಇಂದು ಬೆಳಗ್ಗೆ ಎಂದಿನಂತೆ ಮಹಮ್ಮದ್ರವರು ಅಂಗಡಿ ಬಾಗಿಲು ತೆರೆದಿದ್ದರು. ಮಧ್ಯಾಹ್ನ ಆಗುತ್ತಲೇ ಅಂಗಡಿಯೊಳಗಿನಿಂದ ಹೊರಗೆ ಬಂದು ತನ್ನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿಯೊಳಗೆ ಬೆಂಕಿ ಹಾಕುತ್ತಿರುವ ದೃಶ್ಯವನ್ನು ಸ್ಥಳೀಯರು ನೋಡಿದ್ದಾರೆ. ತಕ್ಷಣವೇ ಸ್ಥಳೀಯರು ಬೆಂಕಿ ನಂದಿಸಲು ಅಂಗಡಿಯತ್ತ ಧಾವಿಸಿದ್ದು ಆ ವೇಳೆ ಬೆಂಕಿ ನಂದಿಸದಂತೆ ಮಾಲಕ ಮಹಮ್ಮದ್ ತಡೆದಿದ್ದಾರೆ ಎಂದು ಹೇಳಲಾಗಿದೆ.
ತನ್ನ ಅಂಗಡಿಗೆ ಬೆಂಕಿ ಇಟ್ಟ ಮಹಮ್ಮದ್ ನಂತರ ತನ್ನ ಮನೆಯತ್ತ ತೆರಳಿದ್ದಾರೆ. ಆದರೆ ಸ್ಥಳೀಯರು ಮಹಮ್ಮದ್ ಮನೆಗೆ ತೆರಳಿದ ಬಳಿಕ ಅಂಗಡಿಯೊಳಗಿನ ಬೆಂಕಿಯನ್ನು ನಂದಿಸಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಸಂಪ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am