ಬ್ರೇಕಿಂಗ್ ನ್ಯೂಸ್
08-09-20 05:20 pm Mangalore Reporter ಕರಾವಳಿ
ಕಾಸರಗೋಡು, ಸೆಪ್ಟೆಂಬರ್ 8: ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಎಂಬುವರ ಮನೆ ಮೇಲೆ ಸ್ಥಳೀಯ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿದ್ದಾರೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಶಾಸಕ ಕಮರುದ್ದೀನ್ ವಿರುದ್ಧ ಆರ್ಥಿಕ ಅವ್ಯವಹಾರದ ಆರೋಪ ಕೇಳಿ ಬಂದಿತ್ತು. ಚಿನ್ನದ ಮೇಲಿನ ಹೂಡಿಕೆಗೆ ಸಂಬಂಧಿಸಿದ ವ್ಯಾಪಾರದಲ್ಲಿ ಭಾರಿ ವಂಚನೆಯಾಗಿದ್ದು, ಹಲವಾರು ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಮಂಜೇಶ್ವರ ಶಾಸಕ ಎಂ.ಸಿ ಕಮರುದ್ದೀನ್ ಹಾಗೂ ಟಿಕೆ ಪೂಕೊಯಾ ತಂಗಲ್ ಇಬ್ಬರು ನಡೆಸುತ್ತಿದ್ದ ಚಿನ್ನದ ಮೇಲಿನ ಹೂಡಿಕೆ ವ್ಯವಹಾರದಲ್ಲಿ ಸುಮಾರು 100 ಕೋಟಿ ರುಗೂ ಅಧಿಕ ವಂಚನೆಯಾಗಿದೆ ಎಂದು ಗ್ರಾಹಕರ ದೂರುಗಳನ್ನು ಆಧಾರಿಸಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಫ್ಯಾಷನ್ ಗೋಲ್ಡ್ ಇಂಟರ್ ನ್ಯಾಷನಲ್ ಎಂಬ ಹೆಸರಿನ ಚಿನ್ನಾಭರಣ ವ್ಯವಹಾರ ನಡೆಸುತ್ತಿದ್ದರು. ಕಮರುದ್ದೀನ್ ಚೇರ್ಮನ್ ಆಗಿದ್ದರೆ, ಪೂಕೊಯಾ ತಂಗಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ ಎಂದು ಎಸ್ ಎಚ್ ಒ ಪಿ ನಾರಾಯಣನ್ ಹೇಳಿದ್ದಾರೆ.
ಇಬ್ಬರ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಕಾಸರಗೋಡು, ಚಂಡೆರಾ ಸೇರಿದಂತೆ ವಿವಿಧ ಠಾಣೆಗಳಲ್ಲಿ 12ಕ್ಕೂ ಅಧಿಕ ದೂರುಗಳನ್ನು ಕ್ರೈಂ ಬ್ರ್ಯಾಂಚ್ ಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಕಮರುದ್ದೀನ್, ಇದು ರಾಜಕೀಯ ಷಡ್ಯಂತ್ರ, ಗ್ರಾಹಕರಿಗೆ ಹಣ ಹಿಂತಿರುಗಿಸಲು ನಾವು ಬದ್ಧವಾಗಿದ್ದೇವೆ ಎಂದಿದ್ದಾರೆ. ಕರ್ನಾಟಕಕ್ಕೆ ತಾಗಿಕೊಂಡಿರುವ ಕ್ಷೇತ್ರವೂ ಆಗಿರುವ ಮಂಜೇಶ್ವರದಲ್ಲಿ ಶಾಸಕರಾಗಿದ್ದ ಪಿ. ಬಿ ಅಬ್ದುಲ್ ರಝಾಕ್ ನಿಧನದಿಂದ ತೆರವಾಗಿದ್ದ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಸೋಲಿಸಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಕಮರುದ್ದೀನ್ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕೇರಳ ವಿಧಾನಸಭೆಯಲ್ಲಿ ಕನ್ನಡ ಭಾಷೆಯಲ್ಲಿ ಶಾಸಕ ಪ್ರಮಾಣವಚನ ಸ್ವೀಕರಿಸಿ ಸುದ್ದಿಯಾಗಿದ್ದರು.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm