ಬ್ರೇಕಿಂಗ್ ನ್ಯೂಸ್
08-09-20 05:56 pm Mangalore Reporter ಕರಾವಳಿ
ಮಂಗಳೂರು, ಸೆ.8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಂತಿ ಹಬ್ಬ (ತೆನೆ ಹಬ್ಬ) ವನ್ನು ಕೊರೋನ ಹಿನ್ನೆಲೆಯಲ್ಲಿ ಇಂದು ಸರಳತೆಯೊಂದಿಗೆ ಆಚರಿಸಿದರು.
ಹಸಿರು ಹಾಗೂ ಸಮೃದ್ಧಿಯ ಪ್ರತೀಕವಾಗಿ ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ನ್ನು ಮೊಂತಿ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಬಾರಿ ಕೊರೊನ ಹಿನ್ನೆಲೆಯಲ್ಲಿ ಅತ್ಯಂತ ಸರಳ ಹಾಗೂ ಮುಂಜಾಗೃತಾ ಕ್ರಮಗಳೊಂದಿಗೆ ದ.ಕ. ಜಿಲ್ಲೆಯ ಎಲ್ಲಾ ಚರ್ಚ್‌ಗಳಲ್ಲಿ ಬಲಿಪೂಜೆಯೊಂದಿಗೆ ಮೊಂತಿ ಹಬ್ಬವನ್ನು ಆಚರಿಸಲಾಯಿತು.

ಮಂಗಳೂರಿನ ರೊಸೋರಿಯೋ ಕೆಥಡ್ರಲ್‌ನಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ ಬಲಿಪೂಜೆ ನೆರವೇರಿಸಿದರು. ಅವರು ಸಂದೇಶ ನೀಡಿ, ದೇವರು ಸೃಷ್ಟಿ ಹಾಗೂ ಮನುಜ ಕುಲವನ್ನು ವಿಶೇಷಿವಾಗಿ ಪ್ರೀತಿಸುತ್ತಾರೆ. ಇಂತಹ ಸೃಷ್ಟಿಯ ಪೋಷಣೆ ಜತೆಗೆ ಮನುಜ ಕುಲ ಅದರ ಉತ್ತಮ ನಿರ್ವಹಣೆಯನ್ನು ಮಾಡಬೇಕು ಎಂಬ ಸಂದೇಶ ಈ ಹಬ್ಬದ್ದಾಗಿದೆ ಎಂದರು.
ಕ್ರೈಸ್ತ ಸಮುದಾಯ ಪತ್ರಿಕೆ ಓದುವ ವಿಚಾರದಲ್ಲಿ ತೀರಾ ಹಿಂದಿದೆ. ಯಾವುದೇ ಭಾಷೆಯ ಪತ್ರಿಕೆಗಳು ಇರಲಿ ಅದನ್ನು ಓದುವ ಪ್ರವೃತ್ತಿ ಬೆಳೆಸಬೇಕು. ಈ ಮೂಲಕ ಜ್ಞಾನ ಸಂಪಾದನೆ, ಸಮಾಜದಲ್ಲಿ ನಡೆಯುವ ವಿಚಾರಗಳ ಅರಿವು, ಸರಕಾರದ ಯೋಜನೆಗಳ ಮಾಹಿತಿಯನ್ನು ಪಡೆದುಕೊಂಡು ಅದನ್ನು ಸಮುದಾಯದಲ್ಲಿ ಬಳಸಿಕೊಳ್ಳುವ ಕೆಲಸವಾಬೇಕು ಎಂದು ಅವರು ಹೇಳಿದರು.
ಬಲಿಪೂಜೆಯಲ್ಲಿ ರೊಸಾರಿಯೊ ಕೆಥಡ್ರಲ್‌ನ ಪ್ರಧಾನ ಧರ್ಮಗೂರು ಫಾ. ಅಲ್ಪ್ರೆಡ್ ಪಿಂಟೋ, ಸಹಾಯಕ ಧರ್ಮಗುರುಗಳಾದ ಫಾ. ವಿನೋದ್ ಲೋಬೋ, ಫಾ. ವಿಕ್ಟರ್ ಡಿಸೋಜಾ, ಗ್ಲಾಡ್‌ಸಮ್ ಮೈನರ್ ಸೆಮಿನರಿಯ ರೆಕ್ಟರ್ ಫಾ. ಅನಿಲ್ ಐವನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm