ಬ್ರೇಕಿಂಗ್ ನ್ಯೂಸ್
22-09-21 03:23 pm Mangaluru Correspondent ಕರಾವಳಿ
ಮಂಗಳೂರು, ಸೆ.22: ಕರಾವಳಿಯಲ್ಲಿ ಉಗ್ರರ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆ ಏರ್ಪೋರ್ಟ್ ಆವರಣದಲ್ಲಿ ಅಲರ್ಟ್ ಮಾಡಲಾಗಿದೆ. ಡ್ರೋಣ್ ಅಥವಾ ಅನುಮಾನಾಸ್ಪದ ವಸ್ತು ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಏರ್ಪೋರ್ಟ್ ಭದ್ರತಾ ಪಡೆ ಸಿಐಎಸ್ಎಫ್ ಮತ್ತು ಬಜ್ಪೆ ಪೊಲೀಸರು ಪರಿಸರದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ.
ವಿಮಾನ ನಿಲ್ದಾಣ ಆಸುಪಾಸಿನ ಅದ್ಯಪಾಡಿ, ಕೆಂಜಾರು, ಕರಂಬಾರು ಪರಿಸರದಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಯ ಸಿಬಂದಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಪರಿಸರದ ಜನರಲ್ಲಿ ಯಾವುದೇ ರೀತಿ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ವಸ್ತುಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲು ತಿಳಿಸಿದ್ದಾರೆ.


ನಾಲ್ಕು ತಿಂಗಳ ಹಿಂದೆ ಏರ್ಪೋರ್ಟ್ ಆವರಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆಯಾಗಿ ಗೊಂದಲಕ್ಕೆ ಕಾರಣವಾಗಿತ್ತು. ಆನಂತರ, ಏಂಟಿ ಡ್ರೋಣ್ ಸಿಸ್ಟಮ್ ತರಬೇಕು ಎನ್ನುವ ಚಿಂತನೆಯೂ ಪೊಲೀಸ್ ಇಲಾಖೆಯಲ್ಲಿ ನಡೆದಿತ್ತು. ಇದೀಗ ಕರಾವಳಿಯಲ್ಲಿ ಉಗ್ರರ ಹೆಜ್ಜೆ ಗುರುತು ಕಂಡುಬಂದಿದ್ದರಿಂದ ಏರ್ಪೋರ್ಟ್ ಬಗ್ಗೆ ಅಲರ್ಟ್ ಮಾಡಲಾಗಿದೆ.
ಇತ್ತೀಚೆಗಷ್ಟೇ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ ಸಂಪರ್ಕ ಆಗಿರುವುದನ್ನು ಕೇಂದ್ರೀಯ ಗುಪ್ತಚರ ಅಧಿಕಾರಿಗಳು ಪತ್ತೆ ಮಾಡಿ, ಅಲರ್ಟ್ ಇರುವಂತೆ ಸೂಚನೆ ನೀಡಿದ್ದರು. ಅದರ ಬೆನ್ನಲ್ಲೇ ದೆಹಲಿ ಪೊಲೀಸರು ಆರು ಮಂದಿ ಉಗ್ರರನ್ನು ಬಂಧಿಸಿದ್ದಲ್ಲದೆ, ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಸ್ಫೋಟಕ್ಕೆ ಸಂಚು ನಡೆಸಿದ್ದನ್ನು ಭೇದಿಸಿದ್ದರು.
High alert surrounding Mangalore airport CISF train people living nearby to alert on the moment of drones or strange activity.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm