ಬ್ರೇಕಿಂಗ್ ನ್ಯೂಸ್
28-09-21 09:09 am Mangaluru Correspondent ಕರಾವಳಿ
ಮಂಗಳೂರು, ಸೆ.28: ಸುರತ್ಕಲ್ ಹೆದ್ದಾರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿರುವುದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್ ಗೆ ತೆರಳಿ, ವಾಪಸಾಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಯುವಕರ ಗುಂಪು ಮುಗಿಬಿದ್ದಿದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲು ಮುಂದಾಗಿದೆ.
ಬೊಲೆರೋ ವಾಹನದಲ್ಲಿ ದೇರಳಕಟ್ಟೆಯ ಖಾಸಗಿ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಯುವಕ- ಯುವತಿಯರು ಮಲ್ಪೆ ಬೀಚ್ ಗೆ ತೆರಳಿ ಮಂಗಳೂರಿನತ್ತ ಬರುತ್ತಿದ್ದರು. ಈ ವೇಳೆ, ಹಿಂದು ಸಂಘಟನೆಗೆ ಸೇರಿದ ಯುವಕರ ಗುಂಪು ಅಡ್ಡಗಟ್ಟಿದ್ದು ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಲು ಮುಂದಾಗಿದೆ. ಈ ವೇಳೆ, ಸಿವಿಲ್ ಡ್ರೆಸ್ ನಲ್ಲಿದ್ದ ಮಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಯುವಕರನ್ನು ತಡೆದಿದ್ದು ಹೊಡೆಯಬೇಡಿ ಎನ್ನುತ್ತಾ ಯುವಕರನ್ನು ಅಂಗಲಾಚಿದ್ದಾರೆ.




ಆದರೆ, ಯುವಕರು ಪೊಲೀಸ್ ಅಧಿಕಾರಿಯ ಮಾತು ಕೇಳದೆ ಬೊಲೆರೋ ವಾಹನಕ್ಕೆ ಕೈ ತುರುಕಿಸಿ ಹಲ್ಲೆಗೆ ಯತ್ನಿಸಿದ್ದಾರೆ. ಇದರ ವಿಡಿಯೋವನ್ನು ಸ್ಥಳೀಯರು ರೆಕಾರ್ಡ್ ಮಾಡಿದ್ದು ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ವಿಡಿಯೋ ಭಾರೀ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಸುರತ್ಕಲ್ ಪೊಲೀಸರು ಐವರನ್ನ ವಶಕ್ಕೆ ಪಡೆದಿದ್ದಾರೆ.
ಹಲ್ಲೆ ನಡೆಸಿದ್ದ ಐವರು ಯುವಕರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ ಗೇಟ್ ಬಳಿ ಘಟನೆ ನಡೆದಿದ್ದು ಯುವಕರ ಗೂಂಡಾಗಿರಿ ವಿಡಿಯೋದಲ್ಲಿ ಸೆರೆಯಾಗಿದ್ದು ಅದನ್ನು ಆಧರಿಸಿ ಪೊಲೀಸರು ಕ್ರಮ ಜರುಗಿಸಿದ್ದಾರೆ. ವಾಹನದಲ್ಲಿ ಅನ್ಯಕೋಮಿನ ವಿದ್ಯಾರ್ಥಿಗಳು ಇದ್ದರು ಅನ್ನುವ ಮಾಹಿತಿ ಹಿನ್ನೆಲೆ ಹಿಂದೂ ಕಾರ್ಯಕರ್ತರು ಗೂಂಡಾಗಿರಿ ಮೆರೆದಿದ್ದಾರೆ.
Five youths were arrested for Moral policing at surathkal toll Plaza by assaulting Medical Students of different communities inside the car. The incident took place when they were returning back from Beach. The Video of this has gone viral on social media. Surathkal Police have arrested five youths in connection to this case.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm