ಬ್ರೇಕಿಂಗ್ ನ್ಯೂಸ್
29-09-21 11:06 pm Mangaluru Correspondent ಕರಾವಳಿ
ಮಂಗಳೂರು, ಸೆ.29: ರೌಡಿಗಳು, ಪುಂಡು ಪೋಕರಿಗಳ ಅಟ್ಟಹಾಸದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗೌರವಕ್ಕೆ ಧಕ್ಕೆಯಾಗಿದೆ. ಪೊಲೀಸರ ಭಯವಿಲ್ಲದೆ ರೌಡಿಗಳು ಮೆರೆದಾಡುತ್ತಿದ್ದು ಆಡಳಿತ ಪಕ್ಷದ ರಾಜಕೀಯ ಒತ್ತಡದಿಂದ ಪೊಲೀಸ್ ಇಲಾಖೆ ನಿಸ್ಸಹಾಯಕವಾಗಿದೆ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸರು ರಾಜಕೀಯ ವ್ಯಕ್ತಿಗಳಿಗೆ ಗೌರವ ಕೊಡಬೇಕು. ಹಾಗೆಂದು ಕಾನೂನು ಪಾಲನೆಯಲ್ಲಿ ಲೋಪ ಆಗಬಾರದು. ಸಮಾಜದಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದಲ್ಲಿ ಕಠಿಣ ಶಿಕ್ಷೆ ವಿಧಿಸುವುದು ಪೊಲೀಸ್ ಇಲಾಖೆ, ಜಿಲ್ಲಾಡಳಿತದ ಜವಾಬ್ದಾರಿ. ಪೊಲೀಸ್ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳದಿದ್ದಲ್ಲಿ ಅರಾಜಕತೆ ಸೃಷ್ಟಿಯಾಗಲಿದೆ ಎಂದರು.
ಇತ್ತೀಚೆಗೆ ಜಿಲ್ಲೆಯ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳಿದ್ದ ವಾಹನದ ಮೇಲೆ ದಾಳಿ ನಡೆಸಿ ಪೊಲೀಸರ ಮುಂದೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ನಡೆದಿದೆ. ಇದರಿಂದಾಗಿ ಜಿಲ್ಲೆಯ ಕಾನೂನು ಸುವ್ಯವಸ್ಥೆ ಎತ್ತ ಕಡೆ ಹೋಗುತ್ತಿದೆ ಎಂದು ಕೇಳಬೇಕಾಗುತ್ತದೆ. ಪೊಲೀಸ್ ಇಲಾಖೆ ತಮ್ಮ ಲಾಠಿಯನ್ನು ಒಳಗಿಟ್ಟುಕೊಂಡರೆ, ಪ್ರತಿಯೊಬ್ಬರೂ ಲಾಠಿ ಹಿಡಿದೇ ತಿರುಗಾಡಬೇಕಾದ ಸ್ಥಿತಿ ಬರುತ್ತದೆ. ಹಿಂದೆ ಈ ರೀತಿಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಾಗ ಸುಮೋಟೊ ಕೇಸ್ ದಾಖಲಿಸುವ ಸ್ಥಿತಿ ಜಿಲ್ಲೆಯಲ್ಲಿತ್ತು. ಆದರೆ, ಮೊನ್ನೆ ಯಾಕೆ ಈ ಕೆಲಸ ಆಗಿಲ್ಲ? ಯಾರ ಒತ್ತಡ ಇತ್ತು? ಎಂದು ಪ್ರಶ್ನಿಸಿದರು.

ಈ ರೀತಿ ದಾಳಿ ಮಾಡುವವರು ಸಮಾಜಘಾತುಕ ಶಕ್ತಿಗಳು. ನಿಜವಾದ ದೇಶದ್ರೋಹಿಗಳು ಅಂದರೆ, ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡುವವರು. ಪೊಲೀಸ್ ಇಲಾಖೆ ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಅಸಹಾಯಕತೆ ತೋರಿದರೆ ದ.ಕ. ಜಿಲ್ಲೆಯ ಅಭಿವೃದ್ಧಿ ಕುಠಿತವಾಗಲಿದೆ. ಕಾನೂನು ಸುವ್ಯವಸ್ಥೆ ಬಲಗೊಳಿಸಲು ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಈ ಬಗ್ಗೆ ಸಿಎಂ ಹಾಗೂ ರಾಜ್ಯ ಗೃಹ ಸಚಿವರ ಗಮನಕ್ಕೂ ತರಲಾಗುತ್ತದೆ ಎಂದು ಖಾದರ್ ಹೇಳಿದರು.
ಹಾನಗಲ್- ಸಿಂದಗಿ ಎರಡೂ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ
ಹಾನಗಲ್ ಹಾಗೂ ಸಿಂದಗಿ ಎರಡೂ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮೂರ್ಖರನ್ನಾಗಿ ಮಾಡಲು ಈ ರಾಜ್ಯದಲ್ಲಿ ಸಾಧ್ಯವಿಲ್ಲ ಎಂದು ಅಲ್ಲಿನ ಮತದಾರರು ತೋರಿಸಲಿದ್ದಾರೆ. ಇದು ಹಾನಗಲ್ ಹಾಗೂ ಸಿಂದಗಿ ಕ್ಷೇತ್ರದ ಸ್ವಾಭಿಮಾನದ, ಗೌರವದ ಚುನಾವಣೆ ಆಗಲಿದೆ ಎಂದು ಶಾಸಕ ಖಾದರ್ ಹೇಳಿದರು.
Mangalore UT Khader slams Bjp govt over moral policing in Surathkal says police have no power.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm