ಬ್ರೇಕಿಂಗ್ ನ್ಯೂಸ್
30-09-21 02:53 pm Mangaluru Correspondent ಕರಾವಳಿ
ಬೆಳ್ತಂಗಡಿ, ಸೆ.30: ಹತ್ತನೇ ತರಗತಿ ಓದುತ್ತಿದ್ದ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ, ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪರಿಣಾಮ ಆಕೆ ಗರ್ಭಿಣಿಯಾಗಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ ಕೇಸು ದಾಖಲಾಗಿದೆ.
ಹುಡುಗಿ ದೂರಿನ ಪ್ರಕಾರ, ತನ್ನ ಮನೆ ಸಮೀಪದಲ್ಲಿ ಜೆಸಿಬಿ ಕಾಮಗಾರಿ ನಡೆಸುತ್ತಿದ್ದ ಅದರ ಚಾಲಕ ರವೀಂದ್ರ ಎಂಬಾತ ಕಳೆದ ಫೆಬ್ರವರಿಯಲ್ಲಿ ಲಾಕ್ಡೌನ್ ಇದ್ದಾಗ ತನ್ನೊಂದಿಗೆ ಸಲುಗೆಯಿಂದ ವರ್ತಿಸಿದ್ದು, ಎರಡು - ಮೂರು ಬಾರಿ ರಸ್ತೆಯ ಮೋರಿಯಡಿಯಲ್ಲಿ ಬಲಾತ್ಕಾರ ನಡೆಸಿದ್ದಾನೆ. ಇದಲ್ಲದೆ, ಪಕ್ಕದ ಕಾಡಿಗೆ ಒಯ್ದು ದೈಹಿಕ ಸಂಪರ್ಕ ನಡೆಸಿದ್ದಾನೆ. ಇದಕ್ಕೂ ಮುನ್ನ ಸಂಬಂಧಿಕ ಕೊಕ್ರಾಡಿ ನಿವಾಸಿ ಯೋಗೀಶ್ ಎಂಬಾತ 2020ರ ಎಪ್ರಿಲ್ ತಿಂಗಳಲ್ಲಿ ಎರಡು ಬಾರಿ ದೈಹಿಕ ಸಂಪರ್ಕ ನಡೆಸಿದ್ದಾನೆ.
ಲಾಕ್ಡೌನ್ ಬಳಿಕ ಇತ್ತೀಚೆಗೆ ಶಾಲೆಗೆ ತೆರಳಿದ್ದು, ಅಲ್ಲಿಗೆ ಇಂಜೆಕ್ಷನ್ ಕೊಡಲೆಂದು ಬಂದಿದ್ದ ವೈದ್ಯರು ತನ್ನ ದೇಹಸ್ಥಿತಿಯನ್ನು ಗಮನಿಸಿ ಪರೀಕ್ಷೆ ನಡೆಸುವಂತೆ ತಿಳಿಸಿದ್ದರು. ಸೆ.27ರಂದು ವೈದ್ಯರಲ್ಲಿ ಪರೀಕ್ಷೆ ನಡೆಸಿದಾಗ, ಏಳು ತಿಂಗಳ ಗರ್ಭಿಣಿಯಾಗಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿಯ ವೈದ್ಯರು ಸ್ಕ್ಯಾನಿಂಗ್ ನಡೆಸಿ, ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆ. ತನ್ನನ್ನು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ, ಗರ್ಭಿಣಿಯಾಗಲು ಕಾರಣವಾಗಿರುವ ರವೀಂದ್ರ ಮತ್ತು ಯೋಗೀಶ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿನಿ ಬೆಳ್ತಂಗಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
High school girl raped and becomes 7 month pregnant case filed against two in Belthanagady police station. The accused has been identified as Ravindra JCB driver and Yogish.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm