ಬ್ರೇಕಿಂಗ್ ನ್ಯೂಸ್
10-09-20 06:17 pm Udupi Reporter ಕರಾವಳಿ
ಉಡುಪಿ, ಸೆಪ್ಟೆಂಬರ್ 10: ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ವಿಟ್ಲ ಪಿಂಡಿ ಉತ್ಸವ ಅತ್ಯಂತ ಸರಳವಾಗಿ ನಡೆದಿದೆ.
ಪರ್ಯಾಯ ಸ್ವಾಮೀಜಿ ಈಶಪ್ರೀಯ ಶ್ರೀಪಾದರು ಶ್ರೀಕೃಷ್ಣನಿಗೆ ಲಕ್ಷ ತುಳಸಿ ಅರ್ಚನೆ ಮಾಡಿದರು. ಅಲ್ಲದೆ, ವಿಟ್ಲ ಪಿಂಡಿ ಪ್ರಯುಕ್ತ ಶ್ರೀಕೃಷ್ಣನಿಗೆ ಇಂದು ಬಾಲಕೃಷ್ಣನ ಅಲಂಕಾರ ಮಾಡಲಾಗಿತ್ತು. ಕೃಷ್ಣನ ಮೂರ್ತಿಯ ಮುಂದೆ ಚಿನ್ನದ ತೊಟ್ಟಿಲಿಟ್ಟು ಸ್ವಾಮೀಜಿ ಕೃಷ್ಣನನ್ನು ವಿಶೇಷವಾಗಿ ಅಲಂಕರಿಸಿದರು. ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಗಳು ವಿಶೇಷ ಅಲಂಕಾರವನ್ನು ಮಾಡಿದ್ದಾರೆ.



ಅದಮಾರು ಮಠದ ಸ್ವಾಮೀಜಿ ಅಷ್ಟಮಿಯ ವಿಟ್ಲ ಪಿಂಡಿ ಪ್ರಯುಕ್ತ ಮಹಾಪೂಜೆ ನೆರವೇರಿಸಿದರು. ಕೊರೊನಾ ನಿರ್ಬಂಧ ಹಿನ್ನೆಲೆಯಲ್ಲಿ ಉತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿತ್ತು. ಕೃಷ್ಣಮಠದ ಸಿಬಂದಿ, ಅರ್ಚಕರು, ಸ್ವಾಮೀಜಿಗಳ ವಿನಾ ಬೇರೆ ಯಾರಿಗೂ ವಿಟ್ಲ ಪಿಂಡಿ ಉತ್ಸವದಲ್ಲಿ ಪಾಲ್ಗೊಳ್ಳಲು ಅವಕಾಶ ಇರಲಿಲ್ಲ. ಹೊರಭಾಗದಲ್ಲಿ ಹೊರಗಿನ ಜನರು ಬರದಂತೆ ಪೊಲೀಸರು ಭದ್ರತೆ ಏರ್ಪಡಿಸಿದ್ದರು.
ಕೃಷ್ಣಾಷ್ಟಮಿ ಪ್ರಯುಕ್ತ ಸೆ.11ರಂದು ಮಧ್ಯಾಹ್ನ 3ರಿಂದ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದ್ದು, ಜನದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಮಧ್ಯಾಹ್ನ 12.30ರಿಂದ ಸಾಯಂಕಾಲ 5.30ರವರೆಗೆ ರಥಬೀದಿಗೆ ಸಾರ್ವಜನಿಕ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾಗಿ ಕೃಷ್ಣ ಮಠದ ಪ್ರಕಟಣೆ ತಿಳಿಸಿದೆ. ಇನ್ನೊಂದೆಡೆ, ಪರ್ಯಾಯ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿ ಆಶಯದಂತೆ ಕೃಷ್ಣ ಪ್ರಸಾದ ವಿತರಣೆಗಾಗಿ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm