ಬ್ರೇಕಿಂಗ್ ನ್ಯೂಸ್
10-10-21 08:29 pm Mangalore Reporter ಕರಾವಳಿ
ಮಂಗಳೂರು, ಅ.10 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧರ್ಮ, ದೇವರ ಹೆಸರಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ದಿನ ನಿತ್ಯ ನಡೆಸುತ್ತಿರುವ ಅನೈತಿಕ ಗೂಂಡಾಗಿರಿ ಅನ್ನೋದು ಚುನಾವಣಾ ಮುನ್ನೆಲೆಯ ತಯಾರಿ. ಈ ಮಾದರಿಯ ಅನೈತಿಕ ಗೂಂಡಾಗಿರಿಯ ಹಿಂದೆ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಭರತ್ ಶೆಟ್ಟಿ ಕೈವಾಡವಿದೆ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದರು.
ಅನೈತಿಕ ಗೂಂಡಾಗಿರಿ ಖಂಡಿಸಿ ನಗರದ ಕ್ಲಾಕ್ ಟವರ್ ಬಳಿ ಡಿವೈಎಫ್ಐ ಮಂಗಳೂರು ನಗರ ಸಮಿತಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಸಂಘ ಪರಿವಾರ ಅಮಾಯಕ ವಿದ್ಯಾರ್ಥಿ ಯುವಜನರ ಮೇಲೆ ಹಲ್ಲೆ ನಡೆಸುವ ಮೂಲಕ ಗೂಂಡಾಗಿರಿ ನಡೆಸಿ ಜಿಲ್ಲೆಯ ಕೋಮು ಸಾಮರಸ್ಯವನ್ನು ಹಾಳುಗೆಡವಲು ಪ್ರಯತ್ನಿಸುತ್ತಿದೆ. ಜಿಲ್ಲೆಯ ಪೊಲೀಸ್ ಇಲಾಖೆ ಈ ರೀತಿ ಗೂಂಡಾಗಿರಿ ನಡೆಸುವವರ ಮೇಲೆ ಯಾವುದೇ ಕ್ರಮವನ್ನು ಕೈಗೊಳ್ಳದೆ ಸಂಘ ಪರಿವಾರಕ್ಕೆ ಸಂಪೂರ್ಣ ಶರಣಾಗತಿಯಾದಂತೆ ವರ್ತಿಸುತ್ತಿದೆ. ಬಿಜೆಪಿ ಧರ್ಮ, ದೇವರ ಹೆಸರಲ್ಲಿ ಜನರನ್ನು ಭಾವನಾತ್ಮಕವಾಗಿ ಕೆರಳಿಸಿ ಅವರ ಗಮನವನ್ನು ತಮ್ಮನ್ನು ಕಾಡುವ ಮೂಲ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಜಿಲ್ಲೆಯಲ್ಲಿ ಉದ್ಯೋಗದ ಪ್ರಶ್ನೆ, ಆರೋಗ್ಯದ ಪ್ರಶ್ನೆ , ಶಿಕ್ಷಣದ ಹೆಸರಲ್ಲಿ ನಡೆಸುವ ದಂಧೆಗಳ ವಿರುದ್ಧ ಯಾವೊಂದು ವಿಚಾರಗಳನ್ನು ಬಿಜೆಪಿ ಇತ್ಯರ್ಥ ಪಡಿಸಲು ಗಮನಹರಿಸುತ್ತಿಲ್ಲ. ಕೇವಲ ಜನರನ್ನು ಪರಸ್ಪರ ಎತ್ತಿಕಟ್ಟಿ ಸಂಘರ್ಷಕ್ಕೆ , ಕೋಮು ಹಿಂಸೆಗೆ ಪ್ರೇರಣೆ ಮೂಡಿಸಲು, ಆಮೂಲಕ ಪರೋಕ್ಷವಾಗಿ ಸಾಮಾನ್ಯ ಜನರ ಸಾವು, ನೋವನ್ನು ಬಯಸುವ ಪ್ರಯತ್ನದಲ್ಲಿದೆ. ಇಂತಹ ಪ್ರಯತ್ನಗಳಿಗೆ ಜಿಲ್ಲೆಯ ಪ್ರಜ್ಞಾವಂತ ಜನ ಯಾವುದೇ ಕಾರಣಕ್ಕೂ ಅವಕಾಶ ಮಾಡಿಕೊಡಬಾರದು ಎಂದರು.

ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜೆಡಿಎಸ್ ಮಹಿಳಾ ಮುಖಂಡರಾದ ಸುಮತಿ ಎಸ್ ಹೆಗ್ಡೆ, ಮನೋಜ್ ವಾಮಂಜೂರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ವೇಳೆ ಡಿವೈಎಫ್ಐ ಉಳ್ಳಾಲ ವಲಯ ಸಮಿತಿ ಅಧ್ಯಕ್ಷರಾದ ರಫೀಕ್ ಹರೇಕಳ, ಕಾರ್ಯದರ್ಶಿ ಸುನಿಲ್ ತೇವುಲ, ಡಾ.ಕೃಷ್ಣಪ್ಪ ಕೊಂಚಾಡಿ, ಜೇರಾಲ್ಡ್ ಟವರ್, ಯಾದವ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಅಲ್ತಾಫ್ ತುಂಬೆ, ಕೃಷ್ಣ ತಣ್ಣೀರುಬಾವಿ ಮುಂತಾದವರು ಉಪಸ್ಥಿತರಿದ್ದರು.
reason behind moral policing is nalin kumar kateel and bharath shetty says DYFI president muneer kaatipalla
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm