ಬ್ರೇಕಿಂಗ್ ನ್ಯೂಸ್
13-10-21 02:31 pm Mangaluru Correspondent ಕರಾವಳಿ
ಬೆಂಗಳೂರು, ಅ.12: ಶಿವಮೊಗ್ಗ ಸೇರಿದಂತೆ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳ 20ಕ್ಕೂ ಹೆಚ್ಚು ಕಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಉಡುಪಿ ಜಿಲ್ಲೆಯ ಕಾರ್ಕಳ, ಶಿವಮೊಗ್ಗದ ಕೆಲವು ಕಡೆ ಎನ್ಐಎ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ. ಇತ್ತೀಚೆಗೆ ಸ್ಯಾಟಲೈಟ್ ಫೋನ್ ಕರೆ ಪತ್ತೆ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್ ಚಟುವಟಿಕೆ ಸಂಬಂಧ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಸೈಲೆಂಟ್ ದಾಳಿ, ಪರಿಶೀಲನೆ
ಎನ್ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ದಾಳಿ ನಡೆಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು, ಥೇಣಿ, ರಾಮನಾಥಪುರಂ, ಸೇಲಂ, ಕನ್ಯಾಕುಮಾರಿ, ಕೃಷ್ಣಗಿರಿ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಕೇರಳದ ವಯನಾಡ್, ತ್ರಿಶೂರ್ ಮತ್ತು ಕಣ್ಣೂರು ಜಿಲ್ಲೆಗಳಲ್ಲೂ ಪರಿಶೀಲಿಸಿದ್ದಾರೆ.
ಏನಿದು ಪ್ರಕರಣ? ಪರಿಶೀಲನೆಗೇನು ಕಾರಣ?
ನಕ್ಸಲ್ (ಸಿಪಿಐ ಮಾವೋವಾದಿ) ಚಳವಳಿಗೆ ಶಕ್ತಿ ತುಂಬಲು 2016ರ ಸೆಪ್ಟೆಂಬರ್ ಕೊನೆಯಲ್ಲಿ ಕೇರಳ ರಾಜ್ಯದ ಮಲಪುರಂ ಜಿಲ್ಲೆಯ ಎಡಕ್ಕರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತರಬೇತಿ ಶಿಬಿರ ನಡೆಸಲು ಸ್ಥಳ ಗುರುತಿಸಲಾಗಿತ್ತು. ಶಿಬಿರದಲ್ಲಿ ಶಸ್ತ್ರಾಸ್ತ್ರ ಬಳಕೆಯ ತರಬೇತಿ ನೀಡಲು ಚಿಂತಿಸಲಾಗಿತ್ತು. ಈ ಬಗ್ಗೆ ಎಡಕ್ಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿತ್ತು. ಬಳಿಕ ಎನ್ಐಎ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿದ್ದು ಪ್ರತ್ಯೇಕ ಎಫ್ಐಆರ್ ದಾಖಲು ಮಾಡಿದ್ದರು. ಪ್ರಕರಣದಲ್ಲಿ ಇನ್ನೂ 20 ಮಂದಿ ಇರುವುದು ಬೆಳಕಿಗೆ ಬಂದಿತ್ತು. ಕರ್ನಾಟಕ ನಕ್ಸಲ್ ಚಳವಳಿಯ ಮುಂಚೂಣಿ ನಾಯಕರಾದ ಬಿ.ಜಿ. ಕೃಷ್ಣಮೂರ್ತಿ, ವಿಕ್ರಂ ಗೌಡ ಹೆಸರುಗಳು ಈ ಪಟ್ಟಿಯಲ್ಲಿದ್ದವು. ಹಾಗಾಗಿ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಇದಲ್ಲದೆ, ಸ್ಯಾಟಲೈಟ್ ಫೋನ್ ಕರೆಗೂ ನಕ್ಸಲ್ ಚಳವಳಿಗೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ತನಿಖೆ ನಡೆಸಿದ್ದಾರೆ.
Officials of the National Investigation Agency (NIA) launched a series of raids across locations in Tamil Nadu, Kerala and Karnataka on Tuesday, October 12, to unearth suspected training places and hideouts of the outlawed CPI (Maoist) party. The Hindu reported that the raids were triggered by specific intelligence inputs on people being indoctrinated into the party’s ideology through propaganda material. It also said that, according to NIA officials, videos used to train the cadre were also found.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm