ಬ್ರೇಕಿಂಗ್ ನ್ಯೂಸ್
20-10-21 10:10 pm Mangaluru Correspondent ಕರಾವಳಿ
ಮಂಗಳೂರು, ಅ.20: ಅಡ್ಯಾರ್ ಬಳಿಯ ಸಹ್ಯಾದ್ರಿ ಕಾಲೇಜು ಬಳಿ ತಪಾಸಣೆ ನಿರತ ಪೊಲೀಸರ ಮೇಲೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಹಾಯಿಸಲು ಯತ್ನಿಸಿದ ಘಟನೆ ನಡೆದಿದ್ದು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡಿದ್ದಾರೆ. ಸಹ್ಯಾದ್ರಿ ಬಳಿಯ ನೇತ್ರಾವತಿ ನದಿಯ ಮರಳು ದಕ್ಕೆಯಿಂದ ಹೊರ ತೆರಳುತ್ತಿದ್ದ ಟಿಪ್ಪರ್ ಲಾರಿಯನ್ನು ನಿಲ್ಲಿಸಲು ಸೂಚಿಸಿದಾಗ, ಟಿಪ್ಪರ್ ಲಾರಿ ಚಾಲಕ ಪೊಲೀಸರ ಮೇಲೆ ಹಾಯಿಸಲು ಯತ್ನಿಸಿ, ಬ್ಯಾರಿಕೇಡಿಗೆ ಡಿಕ್ಕಿಯಾಗಿ ಮುಂದಕ್ಕೆ ಸಾಗಿದ್ದಾನೆ.

ಆನಂತರ, ಅದರ ಬೆಂಗಾವಲಾಗಿ ಬಂದಿದ್ದ ಆಲ್ಟೋ ಕಾರನ್ನು ಕೂಡ ನಿಲ್ಲಿಸಲು ಸೂಚಿಸಿದಾಗ, ನಿಲ್ಲಿಸದೆ ವೇಗವಾಗಿ ಚಲಾಯಿಸಿಕೊಂಡು ಬಂದಿದ್ದು, ಕಾರಿನ ಚಾಲಕನ ಬಳಿ ಕುಳಿತಿದ್ದ ವ್ಯಕ್ತಿ ಪೊಲೀಸರನ್ನು ಉದ್ದೇಶಿಸಿ, ನಿಮಗೆಷ್ಟು ಧೈರ್ಯ. ನಮ್ಮ ಲಾರಿಯನ್ನು ನಿಲ್ಲಿಸುತ್ತೀರಾ.. ಲೋಫರ್ಸ್ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಾರು ನಿಲ್ಲಿಸದೇ ಪರಂಗಿಪೇಟೆ ಕಡೆಗೆ ಪರಾರಿಯಾಗಿದ್ದರು. ಕಾರಿನ ನಂಬರ್ ಕೆಎ 19 ಎಂಸಿ 2269 ಆಗಿರುತ್ತದೆ. ಈ ಬಗ್ಗೆ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಟಿಪ್ಪರ್ ಲಾರಿ ಚಾಲಕ ಅಬ್ದುಲ್ ಇಸಾಕ್ ಮತ್ತು ಕಾರು ಚಾಲಕ ಮೊಯಿದ್ದೀನ್ ಅಪ್ಸರ್ ನನ್ನು ಸಂಜೆ ವೇಳೆಗೆ ಮಂಗಳೂರು ಪೊಲೀಸರು ಬಂಧಿಸಿದ್ದು ಪರಾರಿಯಾಗಿದ್ದ ಟಿಪ್ಪರ್ ಮತ್ತು ಕಾರನ್ನೂ ವಶಕ್ಕೆ ಪಡೆದಿದ್ದಾರೆ. ಇನ್ನಿತರ ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಡ್ಯಾರ್ ನಲ್ಲಿ ಅಕ್ರಮ ಮರಳು ವಹಿವಾಟು ಎಗ್ಗಿಲ್ಲದೆ ನಡೆಯುತ್ತಿದ್ದು, ಹೆದ್ದಾರಿಯಲ್ಲಿ ತಪಾಸಣೆಗೆ ಮುಂದಾದ ಪೊಲೀಸರ ಮೇಲೆಯೇ ಹಾಯಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.
Mangalore Illegal sand mining Truck driver tries to run over cops who tried to stop, and two arrested for using foul language against the cops who tried to stop the truck.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm