ಬ್ರೇಕಿಂಗ್ ನ್ಯೂಸ್
23-10-21 07:08 pm Headline Karnataka News Network ಕರಾವಳಿ
ಬೆಂಗಳೂರು, ಅ.22: ಸಿಎಎ ಕಾಯ್ದೆ ವಿರೋಧಿಸಿ 2019ರ ಡಿಸೆಬರ್ 19ರಂದು ಮಂಗಳೂರಿನಲ್ಲಿ ನಡೆದ ಗಲಭೆ ಮತ್ತು ಗೋಲಿಬಾರ್ ಘಟನೆಯಲ್ಲಿ ಪೊಲೀಸರ ಕಡೆಯಿಂದ ಯಾವುದೇ ತಪ್ಪು ಆಗಿಲ್ಲ ಎಂದು ರಾಜ್ಯ ಸರಕಾರ ಹೈಕೋರ್ಟಿಗೆ ಹೇಳಿದೆ. ಅಲ್ಲದೆ, ಘಟನೆಯ ಬಗ್ಗೆ ನಡೆಸಿದ ಮ್ಯಾಜಿಸ್ಟೀರಿಯಲ್ ತನಿಖೆಯಲ್ಲಿ ಪೊಲೀಸರಿಗೆ ಕ್ಲೀನ್ ಚಿಟ್ ನೀಡಲಾಗಿದೆ.
ಗೋಲಿಬಾರ್ ಘಟನೆಯ ಬಗ್ಗೆ ವಿಶೇಷ ತನಿಖಾ ತಂಡವನ್ನು ನೇಮಕ ಮಾಡಬೇಕೆಂದು ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಎಚ್.ಎಸ್. ದೊರೆಸ್ವಾಮಿ ಹೈಕೋರ್ಟಿನಲ್ಲಿ ನೀಡಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ದ್ವಿಸದಸ್ಯ ಪೀಠ ರಾಜ್ಯ ಸರಕಾರದ ಬಳಿ ಮಾಹಿತಿ ಕೇಳಿತ್ತು.
ಸರಕಾರದ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹೆಚ್ಚುವರಿ ಅಡ್ವಕೇಟ್ ಜನರಲ್ ಧ್ಯಾನ್ ಚಿನ್ನಪ್ಪ, ಗೋಲಿಬಾರ್ ಘಟನೆಯ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆ ಪೂರ್ಣಗೊಂಡಿದ್ದು, ಅದನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಲಾಗಿದೆ. ಅಲ್ಲದೆ, ಈ ಘಟನೆಯಲ್ಲಿ ಪೊಲೀಸರಿಂದ ಯಾವುದೇ ಲೋಪವಾಗಿಲ್ಲ. ವರದಿಯನ್ನು ಸರಕಾರ ಸ್ವೀಕಾರ ಮಾಡಿದೆ. ಘಟನೆ ಬಗ್ಗೆ ಆರೋಪಿತರು ಮತ್ತು ಆಸ್ತಿಪಾಸ್ತಿ ಹಾನಿ ಮಾಡಿದವರ ಬಗ್ಗೆ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದು, ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮ್ಯಾಜಿಸ್ಟೀರಿಯಲ್ ತನಿಖಾ ವರದಿಯನ್ನು ಸ್ವೀಕರಿಸಿದ ನ್ಯಾಯಪೀಠ, ಸಿಐಡಿ ತನಿಖೆಯ ವರದಿಯನ್ನೂ ಅಫಿಡವಿಟ್ ಮೂಲಕ ಕೋರ್ಟಿಗೆ ಸಲ್ಲಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ಅದಲ್ಲದೆ, ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ವರದಿಯನ್ನು ಪರಿಶೀಲನೆ ಮಾಡಲಾಗುವುದು. ಇದರ ಪ್ರತಿಯನ್ನು ಅಗತ್ಯವಿದ್ದರೆ ಈ ಪ್ರಕರಣದ ಅರ್ಜಿದಾರರ ಪರ ವಕೀಲರು ಪಡೆದುಕೊಳ್ಳಬಹುದು ಎಂದು ಹೇಳಿ, ಮುಂದಿನ ವಿಚಾರಣೆಯನ್ನು ನವೆಂಬರ್ 30ಕ್ಕೆ ಮುಂದೂಡಿದೆ.
ಆದರೆ, ಅರ್ಜಿದಾರರ ಪರವಾಗಿ ಕೋರ್ಟಿಗೆ ಹಾಜರಾಗಿದ್ದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಮ್ಯಾಜಿಸ್ಟೀರಿಯಲ್ ತನಿಖೆಯನ್ನೇ ಆಕ್ಷೇಪಿಸಿದ್ದಾರೆ. ಪೊಲೀಸರ ವಿರುದ್ಧದ ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಪೊಲೀಸ್ ಅಧಿಕಾರಿಯೊಬ್ಬರು ಅದೇ ಇಲಾಖೆಯ ಸುಪರ್ದಿಯಲ್ಲಿದ್ದುಕೊಂಡು ನಡೆಸಿದ್ದಾರೆ ಎನ್ನುವುದೇ ಹಾಸ್ಯಾಸ್ಪದ ಎಂದಿದ್ದಾರೆ. ಹಾಗಿದ್ದರೂ ಪೊಲೀಸರ ವಿರುದ್ಧ ಹತ್ತು ದೂರುಗಳು ಸಲ್ಲಿಕೆಯಾಗಿದ್ದವು. ಆದರೆ, ಅದ್ಯಾವುದೇ ದೂರಿನ ಬಗ್ಗೆ ಎಫ್ಐಆರ್ ದಾಖಲಾಗಿಲ್ಲ. ಅದರ ಬಗ್ಗೆ ತನಿಖೆಯೂ ನಡೆದಿಲ್ಲ ಎಂದು ರವಿವರ್ಮ ಕುಮಾರ್ ತಿಳಿಸಿದ್ದಾರೆ.

ಇದಲ್ಲದೆ, ಪೊಲೀಸರ ವಿರುದ್ಧ ಸಲ್ಲಿಕೆಯಾಗಿದ್ದ ದೂರುಗಳ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಕಳೆದ ಜುಲೈನಲ್ಲಿ ಕೋರ್ಟ್ ನಿರ್ದೇಶನ ನೀಡಿತ್ತು. ಆ ಬಗ್ಗೆ ಈವರೆಗೂ ಸರಕಾರದ ಕಡೆಯಿಂದ ಯಾವುದೇ ಮಾಹಿತಿಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಲಾಗಿಲ್ಲ ಎಂದು ಅರ್ಜಿದಾರ ಪರ ವಕೀಲರು ಹೇಳಿದ್ದಾರೆ. ಮಂಗಳೂರಿನಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸೆಗೆ ತಿರುಗಿ, ಆನಂತರ ನಡೆದಿದ್ದ ಗೋಲಿಬಾರ್ ಘಟನೆಯಲ್ಲಿ ಇಬ್ಬರು ಸಾವು ಕಂಡಿದ್ದರು.
The state government has told the high court that the police were not at fault relating to the firing resorted to by the policemen to quell the anti-citizenship amendment act protest in Mangaluru.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm