ಬ್ರೇಕಿಂಗ್ ನ್ಯೂಸ್
30-10-21 12:56 pm Mangaluru Correspondent ಕರಾವಳಿ
ಮಂಗಳೂರು, ಅ.30: ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ವಕೀಲ ಕೆ.ಎಸ್.ಎನ್ ರಾಜೇಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕಳೆದ ನಾಲ್ಕು ದಿನಗಳಿಂದ ವಾದ - ಪ್ರತಿವಾದ ನಡೆದಿತ್ತು. ಆರೋಪಿ ಪರವಾಗಿ ನಗರದ ಖ್ಯಾತ ಕ್ರಿಮಿನಲ್ ವಕೀಲರಲ್ಲಿ ಒಬ್ಬರಾದ ಅರುಣ್ ಬಂಗೇರ ವಾದ ಮಂಡಿಸಿದ್ದರು. ಮೂರು ದಿನಗಳ ವಾದ ಆಲಿಸಿದ ನ್ಯಾಯಾಲಯ, ಶುಕ್ರವಾರ ತೀರ್ಪು ನೀಡಿದೆ. ವಿದ್ಯಾರ್ಥಿನಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಕಾನೂನು ಕೈಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಪೊಲೀಸರ ಶಿಸ್ತು ಕ್ರಮಕ್ಕೆ ಅಡ್ಡಿ ಬರುವುದು ಸರಿಯಲ್ಲ ಎಂದು ಹೇಳಿ ಬಂಧನವನ್ನು ನಿರಾಕರಿಸುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.
ಪ್ರಕರಣದಲ್ಲಿ ಆರೋಪಿಗಳಾಗಿ ಗುರುತಿಸಲ್ಪಟ್ಟು ಪೊಲೀಸರಿಂದ ಬಂಧಿತರಾಗಿದ್ದ ಧ್ರುವ ಮತ್ತು ಮಹಾಲಕ್ಷ್ಮಿ ಹೆಗ್ಡೆ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೇ ವೇಳೆ, ವಕೀಲ ರಾಜೇಶ್ ತಲೆಮರೆಸಿಕೊಳ್ಳಲು ಸಹಕರಿಸಿ ಬಂಧಿತನಾಗಿದ್ದ ಅನಂತ್ ಭಟ್ ಕೂಡ ಜಾಮೀನಿನಲ್ಲಿ ಬಿಡುಗಡೆಯಾಗಿದ್ದರು. ಆದರೆ, ಪ್ರಮುಖ ಆರೋಪಿ ಕೆಎಸ್ಎನ್ ರಾಜೇಶ್, ಪ್ರಕರಣ ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆಂಬ ಪ್ರತಿವಾದವನ್ನು ಪುರಸ್ಕರಿಸಿದ್ದ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ.
ಕಾನೂನು ವಿದ್ಯಾರ್ಥಿನಿ ಯುವತಿ, ಆರೋಪಿ ವಕೀಲನ ಕರಂಗಲ್ಪಾಡಿ ಕಚೇರಿಯಲ್ಲಿ ಇಂಟರ್ನ್‌ಶಿಪ್‌ಗೆ ಸೇರಿದ್ದರು. ಕಚೇರಿಯಲ್ಲಿದ್ದಾಗ ಸೆ.25 ರಂದು ಸಂಜೆ ಯುವತಿಗೆ ವಕೀಲ ಲೈಂಗಿಕ ಕಿರುಕುಳ ನೀಡಿದ್ದಾನೆಂದು ಆರೋಪಿಸಿ ದೂರು ನೀಡಲಾಗಿತ್ತು. ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ವಿರುದ್ಧ ಅ.18ರಂದು ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ; ಲೋಕಾಯುಕ್ತ ವಿಶೇಷ ಸರಕಾರಿ ಅಭಿಯೋಜಕರ ವಿರುದ್ಧ ಎಫ್ಐಆರ್ !
ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ; ಆರೋಪಿ ವಕೀಲನ ಅಜ್ಞಾತ ಸ್ಥಳಕ್ಕೆ ಬಿಟ್ಟು ಬಂದಿದ್ದ ವ್ಯಕ್ತಿಯ ಬಂಧನ
Sexual Harassment Advocate KSN Rajesh Bail plea rejected. The police have booked advocate and a Special Public Prosecutor for the Lokayukta K.S.N. Rajesh on the charge of sexually harassing a law student in the city.A complaint from the victim has been registered under Sections 376, 376 (2)(f), 376(2)(k), 376(c), 354 (A), 354 (B), 354 (C), 354 (D), 506, 384, 388 and 389 of Indian Penal Code.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm