ಬ್ರೇಕಿಂಗ್ ನ್ಯೂಸ್
06-11-21 02:16 pm Mangaluru Correspondent ಕರಾವಳಿ
ಮಂಗಳೂರು, ನ.6: ಮೀನುಗಾರಿಕೆ ನಡೆಸುತ್ತಿದ್ದ ಬೋಟಿನ ಇಂಜಿನ್ನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ಅಪಾಯಕ್ಕೀಡಾಗಿದ್ದ ಏಳು ಮಂದಿ ಮೀನುಗಾರರನ್ನು ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ. ಕಾರವಾರ ಲೈಟ್ ಹೌಸ್‌ನಿಂದ ಹತ್ತು ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದೆ.
ಅಪಾಯದ ಬಗ್ಗೆ ಮಾಹಿತಿ ಪಡೆದ ನವ ಮಂಗಳೂರು ಬಂದರು ಬಳಿಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದು ಘಟನಾ ಸ್ಥಳಕ್ಕೆ ತೆರಳಿ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿ ಅನಾಹುತವನ್ನು ತಪ್ಪಿಸಿದ್ದಾರೆ. ಕಾರವಾರದಿಂದ ಮೀನುಗಾರಿಕೆಗೆ ತೆರಳಿದ್ದ ವರದಾ ವಿನಾಯಕ ಮೀನುಗಾರಿಕಾ ಬೋಟ್‌ನಲ್ಲಿ ಏಕಾಏಕಿ ಶಾಟ್ ಸರ್ಕ್ಯೂಟ್ ಉಂಟಾಗಿದ್ದು, ಇದರಿಂದ ಇಡೀ ಬೋಟ್‌ಗೆ ಹತ್ತಿಕೊಂಡಿತ್ತು.


ಬೆಂಕಿ ಅವಘಡದ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಮಂಗಳೂರು ಕಚೇರಿಗೆ ರಾತ್ರಿ ಹತ್ತು ಗಂಟೆ ವೇಳೆಗೆ ಮಾಹಿತಿ ನೀಡಲಾಗಿತ್ತು. ಸತತ ಮೂರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ ಸಿಬ್ಬಂದಿ ವರದಾ ವಿನಾಯಕ ಬೋಟ್‌ನಲ್ಲಿದ್ದ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದು ಬೆಂಕಿಯನ್ನು ನಂದಿಸಿದ್ದಾರೆ.
ಅಪಾಯಕ್ಕೀಡಾಗಿದ್ದ ಮೀನುಗಾರರು ಸುರಕ್ಷಿತರಾಗಿದ್ದು ಸೇಫ್ ಆಗಿ ಮರಳಿ ಕಾರವಾರ ಸೇರಿದ್ದಾರೆ. ಇದೇ ವೇಳೆ, ದುರಂತಕ್ಕೀಡಾದ ಬೋಟನ್ನೂ ಕೋಸ್ಟ್ ಗಾರ್ಡ್ ಪಡೆ ಸಮುದ್ರದಲ್ಲಿ ಎಳ್ಕೊಂಡು ಬಂದು ಕಾರವಾರ ತಲುಪಿಸಿದೆ.
he timely and swift action by the Indian Coast Guard had saved the lives of 7 fishermen in distress due to fire engulfed on a fishing boat IFB Varda Vinayaka-I (IND KA 02 MM 4495) due to a short circuit in the wheelhouse. The fishing boat was at a distance of 10 NM from Karwar lighthouse.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm