ಬ್ರೇಕಿಂಗ್ ನ್ಯೂಸ್
07-11-21 08:27 pm Mangaluru Correspondent ಕರಾವಳಿ
ಉಳ್ಳಾಲ, ನ.7: ಹೇಗೆ ತಾಲಿಬಾನ್ ಅಂದರೆ ಇಸ್ಲಾಂ, ಕುರಾನ್ ಅಲ್ಲವೋ ಹಾಗೆಯೇ ಬಿಜೆಪಿ, ಆರ್ ಎಸ್ಎಸ್ ಎಂದರೆ ಹಿಂದು ಧರ್ಮವೂ ಅಲ್ಲ. ಭಗವದ್ಗೀತೆ ಗ್ರಂಥನೂ ಅಲ್ಲವೆಂದು ವಕೀಲ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮರೋಳಿ ಹೇಳಿದರು.
ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ವತಿಯಿಂದ ಇಂದು ಅಂಬಿಕಾ ರೋಡ್ ಗಟ್ಟಿ ಸಮಾಜ ಭವನದಲ್ಲಿ ನಡೆದ ಹಿಂದುಳಿದ ವರ್ಗಗಳ ಸಮಾವೇಶ ಹಾಗೂ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ನೂತನ ಅಧ್ಯಕ್ಷ ದೀಪಕ್ ಪಿಲಾರ್ ಪದಗ್ರಹಣ, ನಿವೃತ್ತ ಯೋಧರು, ಪ್ರತಿಭಾನ್ವಿತ ವಿದ್ಯಾರ್ಥಿಗಳು ಹಾಗೂ ಗುರುವಂದನೆ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಹಿಂದುಳಿದ ವರ್ಗದವರಿಗೆ ಬದುಕುವ ಅವಕಾಶ ಕಲ್ಪಿಸಿಕೊಟ್ಟದ್ದು ಕಾಂಗ್ರೆಸ್. ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರಿಗೆ ರಾಘವೇಂದ್ರ ಸ್ವಾಮಿ ಪಾತ್ರ ಮಾಡುವ ಅವಕಾಶ ಸಿಕ್ಕಾಗ ಅವರು ಪಾತ್ರಕ್ಕೆ ಅರ್ಹವೇ ಎಂಬುದನ್ನು ಚಿತ್ರದ ನಿರ್ಮಾಪಕ, ನಿರ್ದೇಶಕರುಗಳು ಮಂತ್ರಾಲಯದಲ್ಲಿ ನೂರು ಬಾರಿ ಡ್ರಾ ಚೀಟಿ ಎತ್ತುವ ಮೂಲಕ ಆರಿಸುವಂತಹ ದುರದೃಷ್ಟ ಎದುರಾದದ್ದು ಅವರು ಹಿಂದುಳಿದ ವರ್ಗದವರು ಎಂಬ ಏಕೈಕ ಕಾರಣಕ್ಕೆ ಎಂದು ಹೇಳಿದರು. ಹಿಂದುಳಿದ ವರ್ಗದವರ ಕೊಲೆಯಾದಾಗ ಅವರಿಗೆ ನ್ಯಾಯ ಕೊಡದ ಬಿಜೆಪಿ ಮುಖಂಡರಾದ ನಳಿನ್ ಕಟೀಲು, ಶೋಭಾ ಕರಂದ್ಲಾಜೆ ಯಾಕೆ ದೇಶ ಅಧಃಪತನದತ್ತ ಸಾಗುತ್ತಿದ್ದರೂ ಮೌನ ವಹಿಸಿದ್ದೀರಿ? ಪೊಳಲಿ ಅನಂತು, ಶರತ್ ಮಡಿವಾಳ ಮೊದಲಾದವರಿಗೆ ಬಿಜೆಪಿ ಅಫೀಮು ತುಂಬಿದ್ದೇ ಅವರ ಸಾವಿಗೆ ಕಾರಣವಾಯಿತೇ ಹೊರತು ಬೇರೇನೂ ಮಾಡಿಲ್ಲ. ಅಷ್ಟಕ್ಕೂ ಪೊಳಲಿ ಅನಂತು ಅವರು ನ್ಯಾಯಾಲಯಕ್ಕೆ ಬರಲು, ತೆರಳಲು ಬಸ್ ನಲ್ಲೇ ಸಂಚರಿಸುತ್ತಿದ್ದರು. ಕೊಲೆಯಾಗಿ ಅವರ ಪೋಸ್ಟ್ ಮಾರ್ಟಮ್ ಆಗುತ್ತಿದ್ದಾಗ ಅವರ ಜೇಬಿನಲ್ಲಿ ಇದ್ದುದು ಕೇವಲ ಐದು ರೂಪಾಯಿ ಎಂದು ಖೇದ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಯು.ಟಿ. ಖಾದರ್ ಮಾತನಾಡಿ ಶ್ರೀಮಂತರಿಗೆ ಎಲ್ಲ ಸೌಲಭ್ಯಗಳಿದ್ದಾಗ ಬಡವರಿಗೆ ಯಾವುದೇ ವ್ಯವಸ್ಥೆ ಇಲ್ಲದಿರುವ ದಿನಗಳಲ್ಲಿ ಜನಸಾಮಾನ್ಯರ ಧ್ವನಿಯಾಗಬೇಕು ಎಂಬ ನೆಲೆಯಲ್ಲಿ ಹುಟ್ಟಿಕೊಂಡ ಪಕ್ಷ ಕಾಂಗ್ರೆಸ್ ಎಂದು ಹೇಳಿದರು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಶುಭ ಹಾರೈಸಿದರು.
ಚಲನಚಿತ್ರ ನಟ ಟೆನ್ನಿಸ್ ಕೃಷ್ಣ ,ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗ ಜಿಲ್ಲಾಧ್ಯಕ್ಷ ವಿಶ್ವಾಸ್ ದಾಸ್, ಜಿಲ್ಲಾ ಕಾರ್ಯದರ್ಶಿ ಗಣೇಶ್ ಪೂಜಾರಿ, ಮುಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮಮತಾ ಡಿ.ಎಸ್. ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಗುರುವಂದನೆ ಕಾರ್ಯಕ್ರಮದಲ್ಲಿ ಸದಾಶಿವ ಉಳ್ಳಾಲ್, ಡಾ. ರಾಜಾರಾಮ್ ಅವರನ್ನು ಸನ್ಮಾನಿಸಲಾಯಿತು. ಬಳಿಕ ಪದಗ್ರಹಣ ನಡೆಯಿತು.ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷ ದೀಪಕ್ ಪಿಲಾರ್ ಸ್ವಾಗತಿಸಿ, ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಇತ್ತೀಚೆಗೆ ಮೃತಪಟ್ಟ ಕನ್ನಡ ಚಿತ್ರನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ವೇದಿಕೆಯಲ್ಲಿ ಗೌರವ ಸೂಚಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ರಕಲಾವಿದ ದೇವಿಕಿರಣ್ ಗಣೇಶಪುರ ಅವರು ವೇದಿಕೆಯಲ್ಲೇ ಪುನೀತ್ ಅವರ ಚಿತ್ರ ಬಿಡಿಸುವ ಮುಖೇನ ಚಿತ್ರನಟ ಟೆನ್ನಿಸ್ ಕೃಷ್ಣ ಸೇರಿದಂತೆ ವೇದಿಕೆಯಲ್ಲಿದ್ದ ಗಣ್ಯರು ಅಗಲಿದ ದಿವ್ಯಾತ್ಮಕ್ಕೆ ಶ್ರದ್ಧಾಂಜಲಿ ಅರ್ಪಿಸಿದರು.
Taliban is not Islama either RSS is not Hindu Advocate Sudhir Kumar in Ullal.
30-07-25 06:28 pm
Bangalore Correspondent
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
Durgaamba Bus Accident, Shivamogga: ಮಂಗಳೂರಿನಿ...
30-07-25 10:33 am
Kerala Nurse Nimisha Priya: ಕೇರಳ ನರ್ಸ್ ನಿಮಿಷ...
29-07-25 01:31 pm
30-07-25 09:06 am
HK News Desk
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
30-07-25 11:05 pm
Mangalore Correspondent
Dharmasthala Second Day of Exhumation, SIT: ಶ...
30-07-25 03:00 pm
Shirur Landslide, Malayalam Film: ಶಿರೂರು ಗುಡ್...
30-07-25 09:04 am
No Evidence, Dharmasthala Burial, SIT: ಹೆಣ ಹೂ...
29-07-25 09:56 pm
Dharmasthala case, SIT Begins Excavation, Upd...
29-07-25 02:20 pm
30-07-25 10:42 pm
Bangalore Correspondent
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm
Honor Killing in Chitradurga: ತಮ್ಮನಿಗೆ ಎಚ್ಐವ...
29-07-25 07:17 pm