ಬ್ರೇಕಿಂಗ್ ನ್ಯೂಸ್
12-11-21 04:29 pm Mangaluru correspondent ಕರಾವಳಿ
ಮಂಗಳೂರು, ನ.12: ನಿಲ್ಲಿಸಿದ್ದ ಕಾರಿನಲ್ಲಿ ವ್ಯಕ್ತಿಯೊಬ್ಬರು ಕುಳಿತಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ನಗರದ ಕಂಕನಾಡಿಯಲ್ಲಿ ಕಂಡುಬಂದಿದ್ದು ಕದ್ರಿ ಪೊಲೀಸರು ಶವವನ್ನು ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದಾರೆ.
ವ್ಯಕ್ತಿಯನ್ನು ಮಣ್ಣಗುಡ್ಡ ನಿವಾಸಿ ಪ್ರಶಾಂತ್ ಕೊಟ್ಟಾರಿ (44) ಎಂದು ಗುರುತಿಸಲಾಗಿದೆ. ಇವರು ಕಂಕನಾಡಿಯ ಬೈಪಾಸ್ ರಸ್ತೆಯ ಬದಿ ಕಾರು ನಿಲ್ಲಿಸಿ, ಅದರೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಾರ್ವಜನಿಕರು ಕಾರನ್ನು ನೋಡಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ಪ್ರಶಾಂತ್ ಕುಡಿತದ ಚಟ ಹೊಂದಿದ್ದು ದೈಹಿಕ ಅನಾರೋಗ್ಯ ಹೊಂದಿದ್ದರು. ಖಾಸಗಿ ಕಂಪನಿ ಒಂದರಲ್ಲಿ ಅಕೌಂಟೆಂಟ್ ಆಗಿದ್ದ ಪ್ರಶಾಂತ್ ವೈದ್ಯರ ಬಳಿ ತಪಾಸಣೆಗೆ ಹೋಗಿದ್ದರು. ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸಲಹೆ ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಮನೆಯಲ್ಲಿ ಆಸ್ಪತ್ರೆಗೆ ದಾಖಲಾಗುವುದಾಗಿ ಹೇಳಿ 50 ಸಾವಿರ ಹಣದ ಜೊತೆಗೆ ನಿನ್ನೆ ಸಂಜೆ ಕಾರಿನಲ್ಲಿ ತೆರಳಿದ್ದರು. ರಾತ್ರಿ ಮನೆಗೆ ಬಂದಿರಲಿಲ್ಲ.
ಆದರೆ ಇಂದು ತನ್ನ ಇಕೋ ಸ್ಪೋರ್ಟ್ ಕಾರಿನ ಒಳಗೇ ಪ್ರಶಾಂತ್ ಶವವಾಗಿ ಕಂಡುಬಂದಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಅಥವಾ ಹೃದಯಾಘಾತದಿಂದ ಸಾವು ಕಂಡಿದ್ದಾರೆಯೇ ಎನ್ನುವುದು ಗೊತ್ತಾಗಿಲ್ಲ. ಪೋಸ್ಟ್ ಮಾರ್ಟಂ ವರದಿ ಬಂದ ಬಳಿಕವೇ ಸಾವಿನ ಬಗ್ಗೆ ಮಾಹಿತಿ ತಿಳಿಯಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ ಎಸಿ ಹಾಕಿ, ಗ್ಲಾಸ್ ಬಂದ್ ಮಾಡಿ ಮಲಗಿದ್ದ ಬಳಿಕ ಕಾರು ರಾತ್ರಿ ವೇಳೆ ಆಫ್ ಆಗಿದ್ದರೂ ಉಸಿರುಗಟ್ಟಿ ಸಾವು ಸಂಭವಿಸಬಹುದು ಎನ್ನುತ್ತಾರೆ, ಪೊಲೀಸರು.
A 44-year-old man was found dead in car here on Friday November 12 near Kankanady circle in Mangalore.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm