ಬ್ರೇಕಿಂಗ್ ನ್ಯೂಸ್
12-11-21 09:30 pm Mangaluru Correspondent ಕರಾವಳಿ
ಮಂಗಳೂರು, ನ.12; ಮಂಗಳೂರು ಮತ್ತು ಬಂಟ್ವಾಳ ತಾಲೂಕನ್ನು ಸಂಪರ್ಕಿಸುತ್ತಿದ್ದ ಕುಪ್ಪೆಪದವು ಬಳಿಯ ಮುಚ್ಚೂರಿನ ಮುಲ್ಲರಪಟ್ಣ ಸೇತುವೆ ನೋಡ ನೋಡುತ್ತಲೇ ಎದ್ದು ನಿಂತಿದೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮತ್ತು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಇಂದು ಸ್ಥಳೀಯರ ಜೊತೆ ಸೇರಿ ಹೊಸ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದಾರೆ.
ಮುಲ್ಲರಪಟ್ಣದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿದ್ದ ಸೇತುವೆ ತೀವ್ರ ಮರಳುಗಾರಿಕೆಯ ಪರಿಣಾಮ 2018 ರ ಜೂನ್ 25 ರಂದು ಕುಸಿದು ಬಿದ್ದಿತ್ತು. ಒಂದೂವರೆ ವರ್ಷ ಕಳೆದರೂ, ಸೇತುವೆ ಮರು ನಿರ್ಮಾಣ ಕಾರ್ಯ ನಡೆದಿರಲಿಲ್ಲ. ಹೀಗಾಗಿ ಸ್ಥಳೀಯರು ಅತ್ತಿತ್ತ ಹೋಗಲು ಸುತ್ತಿ ಬಳಸಿ ಸಂಚಾರ ಮಾಡಬೇಕಾಗಿತ್ತು. ಜನರು ಹಿಡಿಶಾಪ ಹಾಕುತ್ತಲೇ ಇದ್ದರು. ಆಗ ಸಚಿವರಾಗಿದ್ದ ಯುಟಿ ಖಾದರ್, 15 ಕೋಟಿ ವೆಚ್ಚದಲ್ಲಿ ಹೊಸ ಸೇತುವೆ ಮಾಡುವುದಾಗಿ ಹೇಳುತ್ತಾ ಬಂದಿದ್ದರು.
ಆನಂತರ ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದಿತ್ತು. ಸ್ಥಳೀಯರ ಅಹವಾಲು, ದೂರಿನ ಸರಮಾಲೆ ಉಭಯ ಬಿಜೆಪಿ ಶಾಸಕರ ಮೇಲೆ ತಿರುಗಿತ್ತು. ಸವಾಲಾಗಿ ಸ್ವೀಕರಿಸಿದ ಶಾಸಕರು ಸೇತುವೆ ಕಾಮಗಾರಿ ಗುತ್ತಿಗೆಯನ್ನು ಕಾವೂರಿನ ಮೊಗ್ರೋಡಿ ಕನ್ ಸ್ಟ್ರಕ್ಷನ್ ಸಂಸ್ಥೆಗೆ ವಹಿಸಿದ್ದರು. ಮೊಗ್ರೋಡಿಯವರು ಕೆಲಸ ಹಿಡಿದಿದ್ದೇ ತಡ ಜನರು ನೋಡ ನೋಡುತ್ತಲೇ ಹೊಸ ಸೇತುವೆಯ ಕೆಲಸ ಯಾರೂ ಊಹಿಸದ ರೀತಿ ನಡೆದಿತ್ತು. ಇನ್ನೂರು ಮೀಟರ್ ಉದ್ದದ ಸೇತುವೆ ಕೆಲಸ ಕೇವಲ ಒಂದೂವರೆ ವರ್ಷದಲ್ಲಿ ಪೂರ್ತಿಯಾಗಿದ್ದು ಜನರ ಸಂಚಾರಕ್ಕೆ ತೆರೆದುಕೊಂಡಿದೆ.
ಸ್ಥಳೀಯರ ಸಂಕಷ್ಟ ಅರಿತಿದ್ದ ಶಾಸಕದ್ವಯರು ಸೇತುವೆ ಉದ್ಘಾಟನೆಯನ್ನು ಸದ್ದಿಲ್ಲದೆ ನೆರವೇರಿಸಿದ್ದಾರೆ. ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಮುಚ್ಚೂರು ಮತ್ತು ಅರಳದ ಗ್ರಾಮದ ನಡುವೆ ಸಂಪರ್ಕಿಸುವ ಮುಲ್ಲರಪಟ್ಣ ಸೇತುವೆ ರೂ.13.90 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.
ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯಾವುದೇ ಉದ್ಘಾಟನೆ ಕಾರ್ಯಕ್ರಮ ಮಾಡದೇ ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ನಡೆದು ಸಾಗಿ ಕಾಮಗಾರಿಯನ್ನು ಪರಿಶೀಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ. ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು ಗ್ರಾ.ಪಂ. ಅಧ್ಯಕ್ಷ ಸತೀಶ್ ಬೊಳ್ಳಾಜೆ, ಗಂಜಿಮಠ ಗ್ರಾ.ಪಂ. ಅಧ್ಯಕ್ಷ ನೋಣಯ್ಯ ಕೋಟ್ಯಾನ್, ತೆಂಕ ಎಡಪದವು ಗ್ರಾ.ಪಂ. ಅಧ್ಯಕ್ಷ ಸುಕುಮಾರ್ ದೇವಾಡಿಗ, ತಾ.ಪಂ. ಮಾಜಿ ಸದಸ್ಯ ನಾಗೇಶ್ ಶೆಟ್ಟಿ, ಬಡಗಬೆಳ್ಳೂರು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಆಳ್ವ ಮೊದಲಾದವರಿದ್ದರು.
The Mularpatna bridge which was 50 year old, was acting as a prominent link between Mangaluru and Bantwal taluk Is now all ready for Vechilur moment.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm