ಬ್ರೇಕಿಂಗ್ ನ್ಯೂಸ್
20-11-21 01:49 pm Mangaluru Correspondent ಕರಾವಳಿ
ಮಂಗಳೂರು, ನ.20: ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿ ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ದಿಢೀರ್ ಆಗಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
ನಿನ್ನೆಯಷ್ಟೇ ಸಹಕಾರಿ ಸಚಿವ ಸೋಮಶೇಖರ್, ಡಿಸಿಸಿ ಬ್ಯಾಂಕಿನ ಅಕ್ರಮದ ಬಗ್ಗೆ ಹೇಳಿಕೆ ನೀಡಿದ್ದರು. ರಾಜೇಂದ್ರ ಕುಮಾರ್ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ರಾಜೇಂದ್ರ ಕುಮಾರ್ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿದ ರಾಜೇಂದ್ರ ಕುಮಾರ್, ಸಹಕಾರಿ ಕ್ಷೇತ್ರ ರಾಜಕೀಯ ಮುಕ್ತ ಆಗಿರಬೇಕು ಎನ್ನುವ ನೆಲೆಯಲ್ಲಿ ಸ್ಪರ್ಧೆಯಿಂದ ಹಿಂದೆ ಸರಿಯುತ್ತಿದ್ದೇನೆ. ರಾಜಕೀಯ ಪಕ್ಷದಿಂದಲೇ ಸ್ಪರ್ಧಿಸಬೇಕೆಂಬ ಒತ್ತಡ ಬಂದಿತ್ತು. ಆದರೆ ಯಾವುದೇ ರಾಜಕೀಯ ಪಕ್ಷದಲ್ಲಿ ಸ್ಪರ್ಧಿಸಲು ನಾನು ಬಯಸಿಲ್ಲ. ಹಾಗಾಗಿ ಹಿಂದೆ ಸರಿಯುತ್ತಿದ್ದೇನೆ ಎಂದು ಹೇಳಿದ್ದಾರೆ.
ಎರಡು ದಿನಗಳ ಹಿಂದೆ ನಗರದಲ್ಲಿ ಚುನಾವಣಾ ಕಚೇರಿ ಉದ್ಘಾಟಿಸಿ, ವಿಧಾನ ಪರಿಷತ್ ಚುನಾವಣೆಗೆ ಕಣಕ್ಕಿಳಿಯುವ ಬಗ್ಗೆ ಘೋಷಣೆ ಮಾಡಿದ್ದ ರಾಜೇಂದ್ರ ಕುಮಾರ್ ಇದೀಗ ಸ್ಪರ್ಧೆಯಿಂದಲೇ ಹಿಂಜರಿಯುವ ಮೂಲಕ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎರಡು ದಿನಗಳಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆಯಲು ತೀವ್ರ ಕಸರತ್ತು ನಡೆಸಿದ್ದ ರಾಜೇಂದ್ರ ಕುಮಾರ್ ಗೆ ಟಿಕೆಟ್ ಸಿಗಲ್ಲ ಎನ್ನುವುದು ಖಾತ್ರಿಯಾಗುತ್ತಲೇ ಹಿಂದಕ್ಕೆ ಸರಿದಿದ್ದಾರೆ.
Mangalore SCDCC Rajendra Kumar backs out from contesting MLC elections. Cooperative leader and SCDCC Bank chairman M N Rajendra Kumar had planned to contest from Congress in the MLC poll to be held in December, who presently had decided to contest as an Independent candidate. Couple of days ago a delegation had already met KPCC president D K Shivakumar.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm