ಬ್ರೇಕಿಂಗ್ ನ್ಯೂಸ್
22-11-21 12:10 pm Udupi Correspondent ಕರಾವಳಿ
ಉಡುಪಿ, ನ.22: ಕೃಷಿ ಕಾಯ್ದೆ ಒಳ್ಳೆಯದೇ ಇತ್ತು. ವಿಪಕ್ಷಗಳು ವಿರೋಧಕ್ಕಾಗಿ ವಿರೋಧ ಮಾಡಿದ್ದರಿಂದ ಸಮಸ್ಯೆ ಆಯ್ತು. ಹಾಗಂತ, ಮೋದಿ ಇದನ್ನು ಹಾಗೇ ಬಿಡೋದಿಲ್ಲ. ಮುಂದಕ್ಕೆ ಅದನ್ನು ಕಾರ್ಯರೂಪಕ್ಕೆ ತಂದೇ ತರಲಿದ್ದಾರೆ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷಿ ಕಾಯ್ದೆಯ ಒಳ್ಳೆಯ ಅಂಶಗಳನ್ನು ಜನರಿಗೆ ತಲುಪಿಸಲು ಆಗಲಿಲ್ಲ. ಹಾಗಾಗಿ ಹಿಂದಕ್ಕೆ ಪಡೆಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದು ಉತ್ತಮ ನಿರ್ಧಾರ. ಎರಡು ಮಾತಿಲ್ಲ ಎಂದು ಹೇಳಿದರು.
ವಿರೋಧ ಪಕ್ಷಗಳು, ಪ್ರತಿಭಟನೆ ನಡೆಸುತ್ತಿದ್ದವರು ಈ ಬಗ್ಗೆ ಚರ್ಚೆ ನಡೆಸುವುದಕ್ಕೂ ಸಿದ್ಧರಿರಲಿಲ್ಲ. ಕುಳಿತುಕೊಳ್ಳದೆ ಚರ್ಚೆ ಆಗುತ್ತದೆಯೇ.. ಚರ್ಚೆ ಆದಾಗ ಆ ಕಡೆಯಿಂದ ಮತ್ತು ಈ ಕಡೆಯಿಂದ ಉತ್ತಮ ವಿಚಾರಗಳನ್ನು ಪಡೆದುಕೊಳ್ಳಲು ಅವಕಾಶ ಇರುತ್ತದೆ. ಮೋದಿಯವರು ತಿದ್ದುಪಡಿ ಮಾಡುವುದಕ್ಕೆ ಒಪ್ಪಿಕೊಂಡಿದ್ದರು. ಆದರೆ ಇವರು ಯಾವುದಕ್ಕೂ ಒಪ್ಪಲಿಲ್ಲ.
ಹಿಂದೆ ಸಿಎಎ ವಿಚಾರದಲ್ಲಿಯೂ ಇದೇ ಆಗಿತ್ತು. ಚರ್ಚೆಗೆ ಕರೆದರೆ, ಅದನ್ನು ಮಾಡಲು ವಿಪಕ್ಷಗಳು ತಯಾರಿಲ್ಲ. ಭಾರತದಲ್ಲಿ ವ್ಯವಸ್ಥೆ ಹೀಗೆ ಆಗಿರೋದಕ್ಕೆ ಇದೂ ಕಾರಣ. ಮೋದಿ ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಅಂದರೆ ಎರಡು ಹೆಜ್ಜೆ ಮುಂದಿಟ್ಟಿದ್ದಾರೆ ಎಂದೇ ಅರ್ಥ. ಮುಂದಕ್ಕೆ ಬೇರೆ ರೂಪದಲ್ಲಿ ಈ ಕಾಯ್ದೆ ಜಾರಿಗೆ ಬರಲಿದೆ. ಈ ರೀತಿಯ ನಡೆಯಿಂದಾಗಿ ನೈಜ ರೈತರಿಗೆ, ಸಣ್ಣ ಹಿಡುವಳಿದಾರರಿಗೆ ನಷ್ಟವಾಗಿದೆ. ಈ ವಿಚಾರ ಜನರಿಗೆ ತಲುಪುತ್ತದೆ. ತಲುಪಬೇಕು. ಅದಕ್ಕಾಗಿಯೇ ಮೋದಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಪ್ರಭಾಕರ ಭಟ್ ಹೇಳಿದರು.
RSS leader Kalladka Prabhakar Bhat on Sunday November 21 reacted to the central government's decision to repeal the controversial farm laws and said that the laws will be reintroduced with minor changes.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm