ಬ್ರೇಕಿಂಗ್ ನ್ಯೂಸ್
26-11-21 09:03 pm HK news Desk ಕರಾವಳಿ
ಮಂಗಳೂರು, ನ.26: ಸಹೋದ್ಯೋಗಿ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ಆರೋಪಿತ ಅಧಿಕಾರಿ ಡಾ.ರತ್ನಾಕರ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುಷ್ಠರೋಗ ನಿವಾರಣಾ ಘಟಕದ ಜಿಲ್ಲಾ ಮಟ್ಟದ ಅಧಿಕಾರಿ ಡಾ.ರತ್ನಾಕರ್ ಕಳೆದ ಹಲವಾರು ತಿಂಗಳುಗಳಿಂದ ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಅಲ್ಲಿನ ಸಿಬಂದಿ ಜಿಲ್ಲಾ ಆರೋಗ್ಯಾಧಿಕಾರಿಗೆ ದೂರನ್ನೂ ನೀಡಿದ್ದರು. ಪ್ರಕರಣ ಸಂಬಂಧಿಸಿ ಆಂತರಿಕ ತನಿಖೆ ನಡೆದು ಜಿಲ್ಲಾಧಿಕಾರಿ ಮೂಲಕ ರಾಜ್ಯ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಲಾಗಿತ್ತು. ಕಳೆದ ಆಗಸ್ಟ್ ನಲ್ಲಿ ಸಲ್ಲಿಕೆಯಾಗಿದ್ದ ವರದಿ ಅನುಸರಿಸಿ, ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಲಾಗಿತ್ತು.


ಆದರೆ, ಈ ನಡುವೆ ಆರೋಪಿತ ಅಧಿಕಾರಿ ಮಹಿಳಾ ಸಿಬಂದಿಯ ಜೊತೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ ವಿಡಿಯೋ ಮತ್ತು ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಮಾಧ್ಯಮದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಸಾರ್ವಜನಿಕ ವಲಯದಲ್ಲಿಯೂ ಇಂತಹ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿತ್ತು. ಈ ಬಗ್ಗೆ ಮಹಿಳಾ ಠಾಣೆ ಇನ್ಸ್ ಪೆಕ್ಟರ್, ಸಂತ್ರಸ್ತ ಮಹಿಳಾ ಸಿಬಂದಿಯಲ್ಲಿ ಪೊಲೀಸ್ ದೂರು ನೀಡುವಂತೆ ಕೇಳಿಕೊಂಡಿದ್ದರು. ಆದರೆ, ಮಹಿಳಾ ಸಿಬಂದಿ ದೂರು ನೀಡಲು ಹಿಂಜರಿದಿದ್ದರು.
ಆಬಳಿಕ ಮಹಿಳಾ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸ್ಥಳೀಯ ಮಹಿಳೆಯೊಬ್ಬರು ಈ ಬಗ್ಗೆ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ, ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Mangalore govt Doctor pictures of Romancing goes viral arrested after complaint registered at womans police station. A health officer's addiction to sex has become common knowledge now. It is said that the officer has been having fun with nine women employees of his office. He has now been suspended from service. The officer is reportedly seen indulging in unacceptable activities inside his office even during hours.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm