ಬ್ರೇಕಿಂಗ್ ನ್ಯೂಸ್
28-11-21 05:18 pm Mangaluru correspondent ಕರಾವಳಿ
ಮಂಗಳೂರು, ನ.28: ಓಮಿಕ್ರಾನ್ ಕೊರೊನಾ ರೂಪಾಂತರಿ ವೈರಸ್ ಹರಡುವ ಭಯದಲ್ಲಿ ರಾಜ್ಯ ಸರಕಾರ ಮಹಾರಾಷ್ಟ್ರ ಮತ್ತು ಕೇರಳದಿಂದ ಆಗಮಿಸುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಿದೆ. ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯಕ್ಕೆ ಪ್ರವೇಶ ನೀಡುವಂತೆ ಸೂಚನೆ ನೀಡಲಾಗಿದೆ. ಇದರಂತೆ, ದಕ್ಷಿಣ ಕನ್ನಡ ಜಿಲ್ಲೆಯನ್ನು ಕೇರಳದಿಂದ ಸಂಪರ್ಕಿಸುವ ರಸ್ತೆಗಳಲ್ಲಿ ಕಟ್ಟುನಿಟ್ಟು ಮಾಡಲಾಗಿದೆ.
ತಲಪಾಡಿ ಗಡಿಭಾಗದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೇರಳದಿಂದ ಆಗಮಿಸುವವರನ್ನು ನಿರಂತರ ತಪಾಸಣೆ ನಡೆಸಲಾಗುತ್ತಿದೆ. ಭಾನುವಾರ ಬೆಳಗ್ಗಿನಿಂದಲೇ ಗಡಿಯಲ್ಲಿ ಪೊಲೀಸರು ನಿಂತು ತಪಾಸಣೆ ಕೈಗೊಂಡಿದ್ದಾರೆ. ಆದರೆ, ಆ ಕಡೆಯಿಂದ ಬರುವವರನ್ನು ನೆಗೆಟಿವ್ ರಿಪೋರ್ಟ್ ಬೇಕೆಂದು ಹೇಳಿ ಒಳಗೆ ಬಿಡುತ್ತಿದ್ದಾರೆ. ಸೋಮವಾರದಿಂದ ಯಾವುದೇ ಕಾರಣಕ್ಕೂ ಪ್ರವೇಶ ನೀಡಲಾಗುವುದಿಲ್ಲ ಎಂದು ಹೇಳುತ್ತಿದ್ದಾರೆ.


ಈ ಬಗ್ಗೆ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಬಳಿ ಕೇಳಿದರೆ, ರಾಜ್ಯ ಸರಕಾರದ ಸ್ಪಷ್ಟ ಸೂಚನೆಯಿದ್ದು, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದಲ್ಲಿ ಮಾತ್ರ ಒಳಬಿಡಲಾಗುವುದು. ಸೋಮವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಎಲ್ಲ ಒಳರಸ್ತೆಗಳನ್ನೂ ಬಂದ್ ಮಾಡಲಾಗುವುದು. ಅಲ್ಲದೆ, ಗಡಿಭಾಗದಲ್ಲಿ ಮೂರು ಪಾಳಿಯಲ್ಲಿ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗುವುದು. ಕೇರಳ ಭಾಗದಲ್ಲಿ ಪಾಸಿಟಿವ್ ರೇಟ್ ಹೆಚ್ಚಿರುವುದರಿಂದ ಕೊರೊನಾ ಹರಡುವುದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಾಸಿಟಿವ್ ರೇಟ್ 0.3ಯಲ್ಲಿದ್ದು ಶನಿವಾರ ನಾಲ್ಕೂವರೆ ಸಾವಿರ ಟೆಸ್ಟಿಂಗ್ ನಲ್ಲಿ 13 ಮಂದಿ ಪಾಸಿಟಿವ್ ಆಗಿದ್ದರು. ಆದರೆ, ಒಟ್ಟು ಪಾಸಿಟಿವ್ ಆಗಿರುವ ಸಕ್ರಿಯ ಸೋಂಕಿತರ ಸಂಖ್ಯೆ 120 ಆಗಿದ್ದು, ಆ ಪೈಕಿ 32 ಮಂದಿ ವಿದ್ಯಾರ್ಥಿಗಳು. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಲ್ಲಿಯೇ ಪಾಸಿಟಿವ್ ಹೆಚ್ಚಿರುವುದು ಕಂಡುಬಂದಿದೆ. ಈಗ ಕೇರಳದಿಂದ ಬಂದು ಹಾಸ್ಟೆಲ್ ನಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳನ್ನು ಮತ್ತೆ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ. ಅದಲ್ಲದೆ, ವಿದೇಶದಿಂದ ಕಳೆದ 15 ದಿನಗಳಲ್ಲಿ ಆಗಮಿಸಿರುವ ಮಂದಿಯನ್ನು ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Mangalore Omicron variant Kerala and Maha border strictly monitored by Police. As a precautionary measure, the authorities in Karnataka have made Covid test compulsory for all passengers arriving from Kerala and Maharashtra, officials said on Saturday. An official said awareness, along with vaccination, is necessary amid fears of the new Omicron variant, as well as Covid outbreak at a medical college in Dharwad, Mysuru and Bengaluru institutions.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm