ಬ್ರೇಕಿಂಗ್ ನ್ಯೂಸ್
07-12-21 02:12 pm HK Desk news ಕರಾವಳಿ
ಮಂಗಳೂರು, ಡಿ.7: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರನ್ನು ಬಿಜೆಪಿಗೆ ಸೇರಿಸುವ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ನಳಿನ್ ಕುಮಾರ್ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದು ಒಳ್ಳೆಯದು. ಈ ಹಿಂದೆ ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿದವರು ನಳಿನ್ ಕುಮಾರ್ ಕಟೀಲ್. ಎನ್ಎಸ್ ಯುಐ ನಲ್ಲಿದ್ದಾಗ ವಿನಯ್ ಕುಮಾರ್ ಸೊರಕೆ ಪರ ನಳಿನ್ ಕುಮಾರ್ ಕಟೀಲ್ ಕೆಲಸ ಮಾಡಿದ್ದರು.
ಹಿಂದಿನದು ನಳಿನ್ ಗೆ ಈಗ ನೆನಪಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಬದ್ಧತೆ ಹಾಗು ಶಕ್ತಿ ನಳಿನ್ ಗೆ ಗೊತ್ತಿದೆ. ಹಾಗಾಗಿ ಈ ಮಾತು ಹೇಳುತ್ತಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಸೇರಿದವರ ಚರಿತ್ರೆಯನ್ನು ಒಮ್ಮೆ ನೋಡಿಕೊಳ್ಳಲಿ. ಬಿಜೆಪಿಯಲ್ಲಿ ಅವರ ಸ್ಥಿತಿ ಏನಾಗಿದೆ ಎಂಬುದನ್ನು ಯೋಚಿಸಿ ಎಂದು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಖಾದರ್, ಪಂಚಾಯತ್ ರಾಜ್ ವ್ಯವಸ್ಥೆಗೆ ಬಿಜೆಪಿ ಸರ್ಕಾರ ಮಾರಕ. ಈ ವ್ಯವಸ್ಥೆಯನ್ನೇ ಮುಗಿಸಿ ಹಾಕಲು ಬಿಜೆಪಿ ಸರಕಾರ ಯತ್ನಿಸುತ್ತಿದೆ. ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಬಿಜೆಪಿ ವಿರುದ್ದ ಮತ ಚಲಾಯಿಸಲಿದ್ದಾರೆ. ಬಿಜೆಪಿ ವಿರುದ್ದ ಗ್ರಾಮ ಪಂಚಾಯತ್ ಸದಸ್ಯರು ಸ್ವಾಭಿಮಾನದ ಮತ ಚಲಾಯಿಸಬೇಕು. ಬಿಜೆಪಿ ವಿರುದ್ದ ಮತ ಚಲಾಯಿಸಿ ಬಿಜೆಪಿ ಸರಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಬೇಕು ಎಂದು ಕರೆ ನೀಡಿದರು.
ಪಂಚಾಯತ್ ರಾಜ್ ವ್ಯವಸ್ಥೆಯನ್ನು ಶಿಥಿಲಗೊಳಿಸುವ ಎಲ್ಲಾ ವ್ಯವಸ್ಥೆಯನ್ನು ಬಿಜೆಪಿ ಮಾಡಿದೆ. ಆದರೆ ಕಾಂಗ್ರೆಸ್ ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಲು ಪೂರಕ ಕೆಲಸ ಮಾಡಿದೆ. ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿತ್ತು. ಈ ಬಾರಿ ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಕಾಂಗ್ರೆಸ್ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಪಂಚಾಯತ್ ರಾಜ್ ವಿಷಯದಲ್ಲಿ ಪಿಎಚ್ ಡಿ ಮಾಡಿರುವ ಮಂಜುನಾಥ ಭಂಡಾರಿಯವರನ್ನು ಕಣಕ್ಕಿಳಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಶತ ಸಿದ್ದ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ.
Everyone should cast their vote against the BJP government in order to upkeep their self-respect. If the gram panchayat members do not send warning messages about the pathetic state of the panchayat raj system, it will deteriorate,” said MLA U T Khader. He was speaking at the press meet that was held at Congress Bhavan on Tuesday December 7. He further said, “Under the rule of BJP, instead of decentralization of power, attempts are made to centralize. When Congress was in power, the honorary amount of president and vice president was increased. Now, in the 15th finance commission it is reduced by BJP.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm