ಬ್ರೇಕಿಂಗ್ ನ್ಯೂಸ್
18-12-21 07:04 pm HK Desk news ಕರಾವಳಿ
ಮಂಗಳೂರು, ಡಿ.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಐದು ಮಂದಿಗೆ ಒಂದೇ ದಿನದಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಓಮಿಕ್ರಾನ್ ಪೀಡಿತರ ಸಂಖ್ಯೆ 13ಕ್ಕೇರಿದೆ.
ಮಂಗಳೂರು ಹೊರವಲಯದ ವಸತಿ ಶಾಲೆಯ ನಾಲ್ವರು ಮಕ್ಕಳಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿರುವ ಬಗ್ಗೆ ಆರೋಗ್ಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಇನ್ನೊಬ್ಬ ಕೇರಳ ಮೂಲದ ಮೆಡಿಕಲ್ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಆಕೆ ಮಂಗಳೂರಿನಲ್ಲಿ ನರ್ಸಿಂಗ್ ವಿದ್ಯಾರ್ಥಿಯಾಗಿದ್ದಳು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಆದವರನ್ನು ಪ್ರತಿ ದಿನವೂ ಓಮಿಕ್ರಾನ್ ವೈರಸ್ ಪತ್ತೆಗಾಗಿ ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ನಡೆಸಲಾಗುತ್ತಿದ್ದು, ಪ್ರತಿ ದಿನವೂ ಸೋಂಕಿತರ ಗಂಟಲ ದ್ರವದ ಮಾದರಿಯನ್ನು ಅಲ್ಲಿಗೆ ಕಳಿಸಿಕೊಡಲಾಗುತ್ತದೆ. ಹೀಗೆ ಕಳಿಸಿಕೊಟ್ಟಿದ್ದ ಐವರು ಸೋಂಕಿತರಲ್ಲಿ ಓಮಿಕ್ರಾನ್ ವೈರಸ್ ಇರುವುದು ಪತ್ತೆಯಾಗಿದೆ.
ವಸತಿ ಶಾಲೆಯ 14 ಮಂದಿ ವಿದ್ಯಾರ್ಥಿಗಳನ್ನು ಡಿ.10ರಂದು ಟೆಸ್ಟ್ ಮಾಡಿದ್ದಾಗ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಅವರಲ್ಲಿ ನಾಲ್ವರಲ್ಲಿ ಓಮಿಕ್ರಾನ್ ಇರುವುದು ಕಂಡುಬಂದಿದೆ. ಆದರೆ, ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದಿರುವುದು ಸೋಂಕು ಹೇಗೆ ಕಂಡುಬಂದಿದೆ ಅನ್ನುವ ಬಗ್ಗೆ ಆರೋಗ್ಯಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ. ಮಕ್ಕಳು ಮಾತ್ರ ಆರೋಗ್ಯದಿಂದಿದ್ದಾರೆ ಅನ್ನುವ ಮಾಹಿತಿಯನ್ನು ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ಓಮಿಕ್ರಾನ್ ಹೈರಿಸ್ಕ್ ಇರುವ ಘಾನಾ ದೇಶದಿಂದ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆ ವ್ಯಕ್ತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗಂಟಲ ದ್ರವದ ಮಾದರಿಯನ್ನು ಬೆಂಗಳೂರಿಗೆ ಕಳಿಸಿಕೊಡಲಾಗಿತ್ತು.
Five Omicron cases detected in Mangalore, four in high school students.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm