ಬ್ರೇಕಿಂಗ್ ನ್ಯೂಸ್
19-12-21 01:51 pm Mangaluru Correspondent ಕರಾವಳಿ
ಕಾರವಾರ, ಡಿ.19: ಮಂಗಳೂರಿನಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಅಲರ್ಟ್ ಮಾಡಲಾಗಿದ್ದು ಟ್ರಾವೆಲ್ ಹಿಸ್ಟರಿ ಇಲ್ಲದೆ ಹೊಸ ವೈರಸ್ ಸೋಂಕು ಹೇಗೆ ಪತ್ತೆಯಾಯ್ತು ಅನ್ನೋದ್ರ ಬಗ್ಗೆ ತಪಾಸಣೆ ನಡೆಸಲು ಆರೋಗ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಹೇಳಿದ್ದಾರೆ.
ಬೆಳಗಾವಿಯತ್ತ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಕಾರವಾರದಲ್ಲಿ ಮಾಧ್ಯಮಕ್ಕೆ ಜಿಲ್ಲಾಧಿಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ನರ್ಸಿಂಗ್ ಕಾಲೇಜಿನ ಸೋಂಕಿತರಲ್ಲಿ ಒಬ್ಬರಿಗೆ ಒಮಿಕ್ರಾನ್ ಪತ್ತೆಯಾಗಿದೆ. ಎಲ್ಲಾ ಸೋಂಕಿತರನ್ನ ಕ್ವಾರೆಂಟೈನ್‌ನಲ್ಲಿ ಇಡಲಾಗಿದೆ. ಶಾಲೆ, ಕಾಲೇಜು ಕ್ಯಾಂಪಸ್ಗಳಲ್ಲಿ ಇರುವ ಎಲ್ಲರ ಸ್ವಾಬ್ ಟೆಸ್ಟ್ ಮಾಡಲಾಗಿದೆ. ಅಲ್ಲದೆ, ಎಲ್ಲರ ಹಿಸ್ಟರಿ ಕಲೆಕ್ಟ್ ಮಾಡಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಪ್ರೋಟೋಕಾಲ್ ಪ್ರಕಾರ ಏನೇನು ಟೆಸ್ಟ್ ಮಾಡಬೇಕೋ, ಅದನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಪತ್ತೆಯಾಗಿರುವ ಒಮಿಕ್ರಾನ್ ಸೋಂಕಿತರು ಹೊರ ರಾಜ್ಯ, ಹೊರ ದೇಶಗಳಿಗೆ ಹೋಗಿಲ್ಲ. ಒಬ್ಬಾಕೆ ಮಂಗಳೂರಿನಲ್ಲಿ ಕಲಿಯುತ್ತಿರುವ ಹೊರ ರಾಜ್ಯದ ವಿದ್ಯಾರ್ಥಿನಿ. ಹಾಗಿದ್ದರೂ ಓಮಿಕ್ರಾನ್ ಪ್ರಕರಣ ಪತ್ತೆಯಾಗಿರುವುದು ಅಚ್ಚರಿ ಮೂಡಿಸಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಮಧ್ಯೆ ಅವಿನಾಭಾವ ಸಂಬಂಧ ಇದೆ. ಕೇರಳದ ಕಾಸರಗೋಡು, ಕಣ್ಣೂರು ಭಾಗದವರು ಮಂಗಳೂರನ್ನ ಹೆಚ್ಚಾಗಿ ನಂಬಿಕೊಂಡಿದ್ದಾರೆ. ಆರೋಗ್ಯ ಸೌಲಭ್ಯ, ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಹೆಚ್ಚು ಬರುತ್ತಾರೆ.

ಕೇರಳದಲ್ಲಿ ಸದ್ಯ 8-9 ಶೇ. ಕೋವಿಡ್ ಪಾಸಿಟಿವಿಟಿ ರೇಟ್ ಇದೆ. ದಕ್ಷಿಣ ಕನ್ನಡ ಜಿಲ್ಲೆ ಕೇರಳದ ಜೊತೆಗೆ 40 ಕಿಮೀ ಉದ್ದಕ್ಕೆ ಗಡಿಭಾಗ ಹೊಂದಿದ್ದು ಮಂಗಳೂರು ಹತ್ತು ಕಿಮೀ ಅಂತರದಲ್ಲಿದೆ. ಜಿಲ್ಲೆಯ ಪ್ರವೇಶಕ್ಕೆ 70ಕ್ಕಿಂತ ಹೆಚ್ಚು ಪ್ರವೇಶ ಮಾರ್ಗ ಇದೆ. ಎಲ್ಲಾ ಮಾರ್ಗದಲ್ಲೂ ನಿಗಾ ಇಟ್ಟಿದ್ದು ತಪಾಸಣೆ ಮಾಡುತ್ತಿದ್ದೇವೆ.
ಪ್ರತಿದಿನ ಓಡಾಡುವವರು, ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಗೆ ಆರೋಗ್ಯ ಇಲಾಖೆಯಿಂದ ಟೆಸ್ಟ್ ಮಾಡಲಾಗುತ್ತಿದೆ. ಗಡಿ ಪ್ರವೇಶಿಸುವವರಿಗೆ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಎರಡು ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿದ್ದರೂ ಕೇರಳದಿಂದ ಬಂದ ಕಾರ್ಮಿಕರು, ವಿದ್ಯಾರ್ಥಿಗಳು ಪ್ರಯಾಣದ ಬಗ್ಗೆ ಮಾಹಿತಿ ನೀಡಬೇಕು. ಈ ಬಗ್ಗೆ ಸ್ಪಷ್ಟ ಸೂಚನೆ ಇದೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ.
Omicron cases in Mangalore non had international travel history DC orders for clear examination. Five new cases of Omicron were confirmed in the district on Saturday December 18. Five of these cases are from two cluster outbreaks of Covid in two different educational institutions in Dakshina Kannada region, tweeted Health minister K Sudhakar tweeted. He also said that a traveller from the UK is also tested positive for Omicron. Deputy commissioner (DC) Dr K V Rajendra said these are old clusters, and the reports of the samples sent for genomic studies have come on Saturday December 18.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm