ಬ್ರೇಕಿಂಗ್ ನ್ಯೂಸ್
27-12-21 08:44 pm Mangalore Correspondent ಕರಾವಳಿ
ಉಳ್ಳಾಲ, ಡಿ.27 : ಕೋಟೆಕಾರು ಪಟ್ಟಣ ಪಂಚಾಯತ್ ಸ್ಥಳೀಯಾಡಳಿತಕ್ಕೆ ಶಾಂತಿಯುತ ಚುನಾವಣೆ ನಡೆದಿದ್ದು ಶೇ.66.16 ರಷ್ಟು ಮತದಾನವಾಗಿದೆ. ನೂತನ ವಧು ಸೇರಿ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿ ಹಕ್ಕು ಚಲಾಯಿಸಿದ್ದಾರೆ.
ಉಳ್ಳಾಲ ಕೋಟೆಕಾರ್ ಪಟ್ಟಣ ಪಂಚಾಯತ್ ಗೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ.66.16 ಮತದಾನ ಆಗಿದೆ. ಪಂಚಾಯತ್ ವ್ಯಾಪ್ತಿಯಲ್ಲಿ 7,710 ಪುರುಷ ಹಾಗೂ 8,354 ಮಹಿಳಾ ಮತದಾರರು ಇದ್ದು, ಈ ಪೈಕಿ 5002 ಪುರುಷರು ಹಾಗೂ 5626 ಮಹಿಳಾ ಮತದಾರರು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸಿದ್ದಾರೆ. ಮುಂಜಾನೆ ಮಂದಗತಿಯಲ್ಲಿ ಆರಂಭಗೊಂಡ ಕೋಟೆಕಾರ್ ಪಟ್ಟಣ ಪಂಚಾಯಿತಿ ಚುನಾವಣೆ 11 ಗಂಟೆಯ ಬಳಿಕ ಬಿರುಸಿನಿಂದ ಸಾಗಿತ್ತು.
ಪುರುಷರಿಗಿಂತ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ದಾಖಲೆ ಸೃಷ್ಟಿಸಿದ್ದಾರೆ. 8ನೇ ವಾರ್ಡಿನ ಕೋಟೆಕಾರು ಸರಕಾರಿ ಪ್ರೌಢಶಾಲೆಯ ಮತಗಟ್ಟೆಯಲ್ಲಿ ಇಂದು ಅಡ್ಕ ಭಗವತಿ ಸಭಾಂಗಣದಲ್ಲಿ ನಾಗೇಶ್ ಅವರೊಂದಿಗೆ ಹಸೆಮಣೆ ಏರಿದ ನೂತನ ವಧು ಶ್ರದ್ಧಾ ಅವರು ಮದುವೆ ಮಂಟಪದಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸಿ ಗಮನಸೆಳೆದರು. ಮಾಡೂರು, ಉಚ್ಚಿಲ, ಅಜ್ಜಿನಡ್ಕ, ಪಾನೀರ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಮತಗಟ್ಟೆ ಗಳಲ್ಲಿ ಹಿರಿಯ ನಾಗರಿಕರು ಹೆಚ್ಚು ಮತ ಚಲಾವಣೆ ಮಾಡಿದ್ದಾರೆ. ಹಿರಿಯ ನಾಗರಿಕರಿಗಾಗಿ ವಾಹನ ಹಾಗೂ ಗಾಲಿ ಕುರ್ಚಿ ವ್ಯವಸ್ಥೆ ಮಾಡಲಾಗಿತ್ತು.
6 ಮತ್ತು 12 ನೇ ವಾರ್ಡಿನಲ್ಲಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು ಇದಕ್ಕೆ ಸ್ಥಳೀಯರ ತೀವ್ರ ವಿರೋಧ ವ್ಯಕ್ತವಾಗಿತ್ತು. ಇಲ್ಲಿನ ಮತಗಟ್ಟೆಗಳಲ್ಲಿ ಗೊಂದಲ ಉಂಟಾಗುವ ನಿಟ್ಟಿನಲ್ಲಿ ಹೆಚ್ಚಿನ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ವಿರೋಧ ಕೇಳಿಬಂದ ಕಾರಣಕ್ಕೆ ವೈದ್ಯಕೀಯ ವಿದ್ಯಾರ್ಥಿಗಳು ಮತದಾನದಲ್ಲಿ ಪಾಲ್ಗೊಂಡಿಲ್ಲವೆಂದು ತಿಳಿದುಬಂದಿದೆ.
17 ವಾರ್ಡ್ ಗಳ ಚುನಾವಣೆಗೆ 18 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಎಲ್ಲೆಡೆ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆದ ಬಗೆ ವರದಿ ಆಗಿಲ್ಲ.
ಕೋಟೆಕಾರ್ ಪಟ್ಟಣ ಪಂಚಾಯಿತಿಯಲ್ಲಿರುವ 17 ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ 45 ಮಂದಿ ಸ್ಪರ್ಧಿಸಿದ್ದರು. ಇವುಗಳಲ್ಲಿ ಗೆಲ್ಲುವ ಕುದುರೆ ಯಾವುದು ಎನ್ನುವುದನ್ನು ಮತದಾರರು ನಿರ್ಧರಿಸಿದ್ದಾರೆ. ಅಭ್ಯರ್ಥಿಗಳ ಅದೃಷ್ಟ ಮತ ಪೆಟ್ಟಿಗೆಯಲ್ಲಿ ಭದ್ರವಾಗಿದ್ದು, ಡಿ.30 ರಂದು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.
Mangalore 66.16 of voting in kotekar panchayat today. Newly married couple directly came to the voting centre to cast their votes.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
12-09-25 11:07 pm
Mangalore Correspondent
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm