ಬ್ರೇಕಿಂಗ್ ನ್ಯೂಸ್
28-12-21 09:36 pm HK Desk news ಕರಾವಳಿ
ಉಡುಪಿ, ಡಿ.28 : ಇತ್ತೀಚಿಗೆ ಜೈಭೀಮ್ ಅನ್ನೋ ಸಿನಿಮಾ ಸೂಪರ್ ಹಿಟ್ ಆಗಿತ್ತು. ಸಿನಿಮಾದಲ್ಲಿ ದಲಿತ ವರ್ಗವನ್ನು ತುಳಿಯುವ, ಪೊಲೀಸರು ಶೋಷಣೆ ಮಾಡುವ ನೈಜ ಘಟನೆ ಆಧರಿಸಿದ ಕತೆಯಿತ್ತು. ಅದೇ ಸಿನಿಮಾದ ಅಣಕು ಪ್ರದರ್ಶನದ ರೀತಿಯಲ್ಲಿ ಉಡುಪಿ ಜಿಲ್ಲೆಯ ಕೋಟತಟ್ಟು ಗ್ರಾಮದಲ್ಲಿ ಬುಡಕಟ್ಟು ಜನಾಂಗ ಕೊರಗ ಸಮುದಾಯದ ಜನರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ ಘಟನೆ ನಡೆದಿದೆ.
ಕೊರಗ ಜನಾಂಗದ ಮನೆಯೊಂದರಲ್ಲಿ ಮದುವೆಯ ಮೆಹಂದಿ ಕಾರ್ಯಕ್ರಮಕ್ಕೆ ಪೊಲೀಸರು ದಾಳಿ ಮಾಡಿ ಮದುಮಗ ಸೇರಿದಂತೆ ಮಹಿಳೆಯರು, ಮುದುಕರ ಮೇಲೆ ಹಲ್ಲೆ ನಡೆಸಿದ್ದಾರೆ. ವಿನಾಕಾರಣ ಲಾಠಿ ಬೀಸಿದ ಪೊಲೀಸರ ಮೇಲೆ ವ್ಯಾಪಕ ಆಕ್ರೋಶ ಭುಗಿಲೆದ್ದಿದೆ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿರುವ ರಾಜೇಶ್ ಕೊರಗ ಎಂಬವರಿಗೆ ಬುಧವಾರ ಮದುವೆ ಇದ್ದುದರಿಂದ ಸೋಮವಾರ ರಾತ್ರಿ ಮೆಹಂದಿ ಕಾರ್ಯಕ್ರಮಕ್ಕೆ ಡಿಜೆ ಅಳವಡಿಸಲಾಗಿತ್ತು. ಈ ಬಗ್ಗೆ ಪೊಲೀಸರಿಂದ ಅನುಮತಿ ಪಡೆದಿದ್ದು ರಾತ್ರಿ 11 ಗಂಟೆಯ ವರೆಗೆ ಮೆಹಂದಿ ನಡೆಸಲು ಅನುಮತಿ ಪಡೆದಿದ್ದರು ಎನ್ನಲಾಗಿದೆ. ಆದರೆ ಪೊಲೀಸರಿಗೆ ಯಾರೋ ದೂರು ನೀಡಿದ್ದಾರೆ ಎಂಬ ಕಾರಣಕ್ಕೆ ಕೋಟ ಠಾಣಾ ಎಸೈ ಸಂತೋಷ್ ಮದುವೆ ಮನೆಗೆ ದಾಳಿ ಇಟ್ಟಿದ್ದಾರೆ. ಅಲ್ಲಿ ನೆರೆದಿದ್ದ ಜನರಿಗೆ ಊಟವನ್ನು ಮಾಡಲು ಬಿಡದೆ ಹಲ್ಲೆ ನಡೆಸಿದ್ದು ಮದುಮಗ ಮಾತ್ರವಲ್ಲ ಅಲ್ಲಿದ್ದ ವೃದ್ಧರು ಮಹಿಳೆಯರ ಮೇಲೆ ಲಾಠಿ ಬೀಸಿದ್ದಾರೆ.
ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಷ್ಟೇ ಅಲ್ಲ, ರಾಜ್ಯದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನೆ ಇರುವ ಊರಿನಲ್ಲೇ ಘಟನೆ ನಡೆದಿದೆ. ಘಟನೆಯ ಬಗ್ಗೆ ಆಕ್ರೋಶ ಹೊರಬರುತ್ತಿದ್ದಂತೆ, ಡಿವೈಎಸ್ಪಿ ನೇತೃತ್ವದಲ್ಲಿ ತಂಡ ತೆರಳಿ ಕೊರಗ ಸಮುದಾಯದವರಿಂದ ಮಾಹಿತಿ ಪಡೆದಿದ್ದಾರೆ.
ನೈಟ್ ಕರ್ಫ್ಯೂ ಜಾರಿಯಲ್ಲಿ ಇಲ್ಲದಿದ್ದರೂ, ಜಿಲ್ಲೆಯ ಪೊಲೀಸರು ಮದುವೆ ಮನೆಗೆ ನುಗ್ಗಿ ಲಾಠಿ ಬೀಸಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆ ಬಗ್ಗೆ ಸಮಗ್ರ ತನಿಖೆಗೆ ಸಮಾಜ ಕಲ್ಯಾಣ ಸಚಿವ ಶ್ರೀನಿವಾಸ ಪೂಜಾರಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.
Kota police reportedly created ruckus in the house of a person belonging to Koraga community where Mehendi function was in progress on Monday December 27 night. It has been alleged that they wielded lathis on the people present in the programme. The police took this extreme step as DJ music was being played at the Mehendi function at Koraga colony which falls under Kotathattu gram panchayat.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm