ಬ್ರೇಕಿಂಗ್ ನ್ಯೂಸ್
02-01-22 02:00 pm Mangalore Correspondent ಕರಾವಳಿ
ಪುತ್ತೂರು, ಜ.2 : ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಚಾಲಕ ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಗುಂಡ್ಯ ಬಳಿ ಇಂದು ಬೆಳಗ್ಗೆ ನಡೆದಿದೆ.
ಕಿನ್ನಿಗೋಳಿಯ ಪಾವಂಜೆ ನಿವಾಸಿ ಸುರೇಶ ನಾವಡ (43) ಮೃತರು. ಇವರು ಬೆಂಗಳೂರಿನಲ್ಲಿ ಐಬಿಎಂ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು ಕಳೆದ ಡಿ.23 ರಂದು ಪತ್ನಿ , ಮಕ್ಕಳೊಂದಿಗೆ ಊರಿಗೆ ಬಂದಿದ್ದರು. ತಾಯಿ ಮನೆಯಾದ ಪಾವಂಜೆಯಲ್ಲಿ ಮಕ್ಕಳೊಂದಿಗೆ ರಜೆ ಕಳೆದು ಇಂದು ಬೆಳಗ್ಗೆ ಕಾರಿನಲ್ಲಿ ಬೆಂಗಳೂರಿಗೆ ಹೊರಟಿದ್ದರು. ಈ ವೇಳೆ, ಶಿರಾಡಿ ಘಾಟ್ ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಏನೋ ಶಬ್ದ ಬಂತೆಂದು ಕಾರನ್ನು ರಸ್ತೆ ಬದಿ ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಅಡ್ಡಹೊಳೆ ತಿರುವಿನ ಬಳಿ ಕಾರನ್ನು ನಿಲ್ಲಿಸಿ ಪರಿಶೀಲಿಸುತ್ತಿದ್ದಾಗಲೇ ಕಾರಿನ ಮೇಲೆ ರಸ್ತೆ ಬದಿಯಿದ್ದ ಮರ ಉರುಳಿ ಬಿದ್ದಿದೆ. ಕಾರನ್ನು ಪರಿಶೀಲನೆ ನಡೆಸುತ್ತಿದ್ದ ಸುರೇಶ್ ನಾವಡ ಮತ್ತು ಕಾರಿನ ಮೇಲೆ ಮರ ಬಿದ್ದಿದ್ದು ಸುರೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಐ ಟ್ವೆಂಟಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನ ಒಳಗಿದ್ದ ಪತ್ನಿ ರಶ್ಮಿ ಸಿಕ್ವೇರಾ ಮತ್ತು ಇಬ್ಬರು ಮಕ್ಕಳಿಗೆ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
A software engineer by professional died on the soot in Shiradi Ghat in Mangalore after a huge tree fell on him while he had parked his car to repair it. The deceased has been identified as Suresh Navada (43). Wife and two children were also said to be inside the car who are unhurt.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm