ಬ್ರೇಕಿಂಗ್ ನ್ಯೂಸ್
05-01-22 11:27 am Mangalore Correspondent ಕರಾವಳಿ
ಮಂಗಳೂರು, ಜ.5 : ಕಳ್ಳತನ ಪ್ರಕರಣದಲ್ಲಿ ಆರೋಪಿಯ ಪತ್ತೆಗೆ ತೆರಳಿದ್ದ ವೇಳೆ ಮೂಡುಬಿದ್ರೆ ಠಾಣೆಯ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಹೆಡ್ ಕಾನ್ಸ್ ಟೇಬಲ್ ಸಂತೋಷ್ (36) ಮೃತರು. ಪ್ರಕರಣದಲ್ಲಿ ಕಾರ್ಯಾಚರಣೆ ನಿಮಿತ್ತ ಪೊಲೀಸ್ ತಂಡದ ಜೊತೆ ತೀರ್ಥಹಳ್ಳಿಗೆ ತೆರಳಿದ್ದರು. ತಂಡದ ಜೊತೆಗಿದ್ದ ವೇಳೆ ಮಂಗಳವಾರ ರಾತ್ರಿ 11 ಗಂಟೆ ವೇಳೆಗೆ ಸಂತೋಷ್ ಗೆ ಹೃದಯಾಘಾತ ಆಗಿದ್ದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ.
ಸಂತೋಷ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸೊರಬ ನಿವಾಸಿಯಾಗಿದ್ದು 12 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿದ್ದರು. ಈ ಹಿಂದೆ ಬಜ್ಪೆ ಠಾಣೆಯಲ್ಲಿ ಕರ್ತವ್ಯದಲ್ಲಿದ್ದರು. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಎರಡು ವರ್ಷದ ಮಗು ಹೊಂದಿದ್ದರು.
ಕಳವು ಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಪೊಲೀಸರ ತಂಡ ಕಾರ್ಯಾಚರಣೆ ನಿರತರಾಗಿದ್ದರು. ತಂಡದಲ್ಲಿ ಇತರ ಇಬ್ಬರು ಸಿಬಂದಿ ಕೂಡ ಇದ್ದರು. ಆರೋಪಿಯನ್ನು ಬಂಧಿಸಲೆಂದು ಮಂಗಳವಾರ ರಾತ್ರಿ ವೇಳೆ ರಸ್ತೆ ಮಧ್ಯೆ ಹೊಂಚು ಹಾಕಿದ್ದಾಗಲೇ ಹೃದಯಾಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ ತಂಡಕ್ಕೆ ಹಿಂತಿರುಗಿ ಬರುವಂತೆ ಸೂಚನೆ ನೀಡಲಾಗಿತ್ತು. ಅದಕ್ಕೂ ಮೊದಲೇ ಪೊಲೀಸ್ ತಂಡಕ್ಕೆ ಆಘಾತ ಎದುರಾಗಿದೆ.
Santhosh, who was working as a head constable in a police station at Moodbidri Police station died of a heart attack while on duty to arrest a criminal on Tuesday January 4. Santhosh had been to Thirthahalli. He suffered cardiac arrest on Tuesday night.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm