ಬ್ರೇಕಿಂಗ್ ನ್ಯೂಸ್
05-01-22 08:38 pm HK Desk news ಕರಾವಳಿ
ಸುಬ್ರಹ್ಮಣ್ಯ, ಜ.5 : ಓಮಿಕ್ರಾನ್ ವೈರಸ್ ಭೀತಿ ಹಿನ್ನೆಲೆಯಲ್ಲಿ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯ ಸೂಚನೆಯಂತೆ ಎಲ್ಲ ರೀತಿಯ ಸೇವೆಗಳನ್ನು ರದ್ದುಪಡಿಸಲಾಗಿದೆ. ಜ.6 ರಿಂದಲೇ ಈ ಆದೇಶ ಜಾರಿಗೆ ಬರಲಿದ್ದು ಭಕ್ತರಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರುತ್ತದೆ ಎಂದು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಭಾನುವಾರ ದರುಶನವೂ ಇಲ್ಲ !
ಇದಲ್ಲದೆ, ದೇವರ ದರ್ಶನಕ್ಕೆ ಒಂದು ಬಾರಿಗೆ 50 ಮಂದಿಗೆ ಮಾತ್ರ ಅವಕಾಶವಿರುತ್ತದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆ ತನಕ ವಾರಾಂತ್ಯದ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರಗಳಂದು ದೇವರ ದರ್ಶನಕ್ಕೂ ಅವಕಾಶ ಇರುವುದಿಲ್ಲ. ಉಳಿದ ದಿನಗಳಲ್ಲಿ ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ಭಕ್ತಾದಿಗಳಿಗೆ ಮಾತ್ರ ಶ್ರೀ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಶ್ರೀ ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮೊದಲಾದ ಕೋವಿಡ್ 19 ನಿಯಂತ್ರಣದ ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ದೇವರ ದರ್ಶನ ಪಡೆಯಬಹುದು. ಶ್ರೀ ದೇವಳದಲ್ಲಿ ಸಂಬಂಧಪಟ್ಟ ಅರ್ಚಕರುಗಳಿಂದ ಸಾಂಪ್ರದಾಯಿಕ ನಿತ್ಯ ಪೂಜೆ ಎಂದಿನಂತೆ ನಡೆಯುವುದು ಎಂದು ಮೋಹನರಾಂ ಸುಳ್ಳಿ ತಿಳಿಸಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಸಹಕರಿಸಿ
ದೇಗುಲದ ಒಳಾಂಗಣ ಮತ್ತು ಹೊರಾಂಗಣಗಳನ್ನು ಆಗಾಗ ಸ್ಯಾನಿಟೈಸ್ ಮಾಡಿ ಶುಚಿಗೊಳಿಸುವ ಕಾರ್ಯ ನಡೆಸಲಾಗುವುದು. ಭಕ್ತಾದಿಗಳು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಅನುಸರಿಸುವಂತೆ ದೇವಳದ ಹೊರಾಂಗಣದಲ್ಲಿ ಧ್ವನಿವರ್ಧಕದ ಮೂಲಕ ಭಕ್ತರಿಗೆ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಲಾಗಿದೆ. ಭಕ್ತಾದಿಗಳು ಸರಕಾರ ಮತ್ತು ಜಿಲ್ಲಾಡಳಿತ ರೂಪಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಸಹಕರಿಸಬೇಕು ಎಂದವರು ವಿನಂತಿಸಿದ್ದಾರೆ.
Mangalore Rise in Omicron cases all services at Kukke Shri Subramanya Temple to be closed, only entry for darshan for devotees allowed.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
12-10-26 10:01 pm
HK News Staffer
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
Mahesh Shetty Thimarodi, Sowjanya Case: ಸೌಜನ್...
10-10-26 09:27 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm