ಬ್ರೇಕಿಂಗ್ ನ್ಯೂಸ್
17-01-22 03:12 pm Mangaluru Correspondent ಕರಾವಳಿ
ಮಂಗಳೂರು, ಜ.17: ರಾಜ್ಯ ಸರಕಾರ ಓಮಿಕ್ರಾನ್ ಹೆಸರಲ್ಲಿ ಜನರನ್ನು ಭಯಪಡಿಸುತ್ತಿದ್ದು, ನೈಜ ವಿಚಾರ ಮರೆಮಾಚಿ ಕಳ್ಳಾಟ ಆಡುತ್ತಿದೆ. ಆಮೂಲಕ ರಾಜ್ಯದ ಜನರ ಮೇಲೆ ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡುತ್ತಿದೆ. ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿನಿಂದ ಎಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಷ್ಟು ಮಂದಿ ಈ ಸೋಂಕಿನಿಂದ ಸತ್ತಿದ್ದಾರೆ ಎಂಬ ನೈಜ ಮಾಹಿತಿ ನೀಡಬೇಕು. ಯಾರು ಕೂಡ ಈ ಸೋಕಿನಿಂದ ಐಸಿಯುಗೆ ದಾಖಲಾಗಿಲ್ಲ ಎನ್ನುವ ಮಾಹಿತಿಯಿದೆ. ಹಾಗಾಗಿ ತಕ್ಷಣವೇ ವೀಕೆಂಡ್ ಕರ್ಫ್ಯೂ ಜಾರಿ ಆದೇಶವನ್ನು ರದ್ದು ಮಾಡಬೇಕೆಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಖಾದರ್, ಓಮಿಕ್ರಾನ್ ವೈರಸ್ ನಿಂದ ಯಾವುದೇ ಅಪಾಯ ಇಲ್ಲವೆಂದು ರಾಜ್ಯ ಸರಕಾರಕ್ಕೂ ತಿಳಿದಿದೆ. ಈ ಬಾರಿ ಸೋಂಕಿಗೆ ತುತ್ತಾಗಿ ಯಾರು ಕೂಡ ಸತ್ತಿಲ್ಲ ಎಂಬುದು ಅಧಿಕಾರಸ್ಥರಿಗೆ ತಿಳಿದಿದೆ. ರಾಜ್ಯ ಸರಕಾರ ಜನರ ಒಳಿತಿಗಾಗಿ ವೀಕೆಂಡ್ ಕರ್ಫ್ಯೂ ಹೇರಿಕೆ ಮಾಡಿಲ್ಲ. ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಹತ್ತಿಕ್ಕುವ ಉದ್ದೇಶದಿಂದ ತರಾತುರಿಯಲ್ಲಿ ಕರ್ಫ್ಯೂ ಜಾರಿ ಮಾಡಿತ್ತು ಎಂದು ಟೀಕಿಸಿದರು.
ವೀಕೆಂಡ್ ಕರ್ಫ್ಯೂನಿಂದಾಗಿ ಸಮಾಜದ ಹಲವು ಸ್ತರದ ಜನರು ತೀವ್ರ ಕಂಗೆಟ್ಟಿದ್ದಾರೆ. ವ್ಯಾಪಾರಿಗಳು, ದಿನಕೂಲಿ ಕಾರ್ಮಿಕರು, ಬಟ್ಟೆ ಅಂಗಡಿ ಇನ್ನಿತರ ವರ್ತಕರು ತ್ರಾಸಕ್ಕೆ ಒಳಗಾಗಿದ್ದಾರೆ. ಕಚೇರಿ ಬಂದ್ ಆಗಿರುವುದರಿಂದ ಹಲವರು ತಮ್ಮ ಉದ್ಯೋಗ ಕಳಕೊಳ್ಳುವ ಭೀತಿಯಲ್ಲಿದ್ದಾರೆ. ರಾಜ್ಯ ಸರಕಾರ ಜನರಲ್ಲಿ ಭಯ ಮೂಡಿಸುವುದರ ಬದಲು ಸೋಂಕಿನ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು. ಜಿಲ್ಲಾಸ್ಪತ್ರೆ ವೆನ್ಲಾಕ್ ನಲ್ಲಿ ಸಿಬಂದಿ ಕೊರತೆಯಿಂದ ತೀವ್ರ ಸಂಕಷ್ಟ ಎದುರಾಗಿದೆ. ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ತಾಂತ್ರಿಕ ಸಿಬಂದಿಯೇ ಇಲ್ಲ. ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಖಾದರ್ ಹೇಳಿದರು.
ಕೇಂದ್ರ ಸರಕಾರ ಗಣರಾಜ್ಯ ದಿನಕ್ಕೆ ನಾರಾಯಣ ಗುರುಗಳ ಟ್ಯಾಬ್ಲೋ ಹಾಕಲು ನಿರಾಕರಣೆ ಮಾಡಿರುವ ಕ್ರಮವನ್ನು ಖಂಡಿಸಿದ ಯುಟಿ ಖಾದರ್, ಕೇಂದ್ರ ಸರಕಾರ ಈಮೂಲಕ ನಾರಾಯಣ ಗುರುಗಳ ಚಿಂತನೆ, ಸಂದೇಶಗಳನ್ನು ನಿರಾಕರಿಸಿದೆ ಎನ್ನುವಂತಾಗಿದೆ. ಈ ಬಗ್ಗೆ ಸಂಸದ ನಳಿನ್ ಕುಮಾರ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
LA U T Khader demanded the state government to withdraw the weekend curfew. Addressing media here on Monday January 17, Khader said, “The state government is playing hide and seek with the people and instilling fear among public over Omicron. It is well aware that people do not have any risk from the virus and so far not a single death has taken place due to Omicron. The state government took the decision over weekend curfew not to safeguard the public. It was a politically motivated decision to derail Mekedatu padayatra.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm