ಬ್ರೇಕಿಂಗ್ ನ್ಯೂಸ್
23-01-22 08:27 pm Mangalore Correspondent ಕರಾವಳಿ
ಮಂಗಳೂರು, ಜ.23 ಕಮ್ಯುನಿಸ್ಟರ ಕುತಂತ್ರದಿಂದಾಗಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ದಚಿತ್ರಕ್ಕೆ ದೆಹಲಿಯಲ್ಲಿ ಅವಕಾಶ ಸಿಗದಿರುವುದಕ್ಕೆ ಎಲ್ಲ ಹಿಂದೂಗಳ ಮನಸಿಗೆ ನೋವುಂಟಾಗಿದೆ. ಈ ಹಿನ್ನೆಲೆಯಲ್ಲಿ ಹಿರಿಯರಾದ ಜನಾರ್ದನ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣಗುರುಗಳ ಸ್ತಬ್ಧಚಿತ್ರದ ಮೆರವಣಿಗೆಯನ್ನ ಜನವರಿ 26 ರಂದು ಆಯೋಜಿಸಿದ್ದು ಜಾತಿ ಭೇದ ಮರೆತು ಕಾರ್ಯಕ್ರಮದಲ್ಲಿ ಭಾಗವಹಿಸಲು ಕರೆ ನೀಡಿದ್ದಾರೆ, ಅವರ ಹೇಳಿಕೆಗೆ ವಿಶ್ವ ಹಿಂದು ಪರಿಷತ್ ಸ್ವಾಗತಿಸುತ್ತದೆ. ಅಲ್ಲದೆ, ನಾರಾಯಣ ಗುರುಗಳ ಸ್ತಬ್ಧಚಿತ್ರ ಮೆರವಣಿಗೆಗೆ ವಿಶ್ವ ಹಿಂದು ಪರಿಷತ್ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಶರಣ್ ಪಂಪ್ವೆಲ್, ಅಸಮಾನತೆಯ ವಿರುದ್ಧ ಹೋರಾಟ ಮಾಡಿದ, ದೇಶ ಕಂಡ ಮಹಾನ್ ಸಂತ ಪೂಜನೀಯ ಬ್ರಹ್ಮಶ್ರೀ ನಾರಾಯಣ ಗುರುಗಳು, ಸಮಾಜದಲ್ಲಿ ಅಸ್ಪೃಶ್ಯತೆ ನಿವಾರಣೆಗೋಸ್ಕರ, ಸಮಾಜದಲ್ಲಿನ ಮೇಲ್ಜಾತಿ ಕೀಳ್ಜಾತಿ ಭೇದ ಭಾವವನ್ನು ದೂರಮಾಡಲು ಹೋರಾಟ ಮಾಡಿದ ಮಹಾನ್ ಯೋಗಿ.

ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಪ್ರಾತಃ ಸ್ಮರಣೆಯಲ್ಲಿ ಶ್ರೀ ಗುರುಗಳನ್ನು ನಿತ್ಯ ಸ್ಮರಣೆ ಮಾಡುತ್ತೇವೆ. 2017 ರಲ್ಲಿ ನಡೆದ ಸಾವಿರಾರು ಸಾಧು ಸಂತರು ಸೇರಿ ಇತಿಹಾಸ ನಿರ್ಮಿಸಿದ ಉಡುಪಿಯ ಧರ್ಮಸಂಸದ್ ಕಾರ್ಯಕ್ರಮದ ವೇದಿಕೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಇಡಲಾಗಿತ್ತು. ಗಣರಾಜ್ಯ ದಿನದಂದು ನಡೆಯಲಿರುವ ಸ್ತಬ್ಧಚಿತ್ರದ ಮೆರವಣಿಗೆ ಕಾರ್ಯಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಬೆಂಬಲ ಸೂಚಿಸುತ್ತದೆ. ಮತ್ತು ಸಂಘಟನೆಯ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿಸುತ್ತದೆ ಎಂದು ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Mangalore Narayana Guru Tableau themed on traditional handicrafts VHP to supports Janardhana Poojary procession.
13-10-26 03:38 pm
HK News Staffer
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm