ಬ್ರೇಕಿಂಗ್ ನ್ಯೂಸ್
25-01-22 04:35 pm Mangalore Correspondent ಕರಾವಳಿ
Photo credits : Headline Karnataka
ಮಂಗಳೂರು, ಜ.25 : ಒಂದೇ ಜಾತಿ, ಒಂದೇ ಮತ, ಹಾಗೂ ಒಂದೇ ದೇವರು ಎಂದು ಬೋಧಿಸಿದ ಶ್ರೀ ನಾರಾಯಣ ಗುರುಗಳ ಹೆಸರನ್ನು ಮುಂದಿಟ್ಟುಕೊಂಡು, ರಾಜಕೀಯ ಉದ್ದೇಶಕ್ಕಾಗಿ ಕೆಲವು ಪಕ್ಷಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಕೇರಳದ ಕಮ್ಯುನಿಸ್ಟ್ ಸರಕಾರದ ಕಾರಣ ಸ್ತಬ್ಧಚಿತ್ರ ನಿರಾಕರಣೆ ಆಗಿದೆಯೇ ವಿನಾ ಕೇಂದ್ರ ಸರಕಾರದ ನಿಲುವಿನಿಂದಾಗಿ ರದ್ದಾಗಿಲ್ಲ ಎಂದು ಮಂಗಳೂರಿನ ಬಿರುವೆರ್ ಕುಡ್ಲ ಹೇಳಿದೆ.
ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿರುವೆರ್ ಕುಡ್ಲ ಸಂಘಟನೆಯ ಲಕ್ಷ್ಮೀಶ ಸುವರ್ಣ, ಸಹನಾ ಕುಂದರ್ ಮತ್ತಿತರರು ನಾರಾಯಣ ಗುರುಗಳು ಸಮಾಜದಲ್ಲಿ ಅಸ್ಪೃಶ್ಯತೆ, ಅಸಮಾನತೆ ವಿರುದ್ಧ ಹೋರಾಟ ನಡೆಸಿದವರು. ತಾರತಮ್ಯಗಳನ್ನು ನಿವಾರಿಸುವ ಜೊತೆಗೆ ಸಮಾಜದಲ್ಲಿ ಧರ್ಮ, ಅಧ್ಯಾತ್ಮ ಜಾಗೃತಿಯನ್ನೂ ಮೂಡಿಸಿದ ಮಹಾತ್ಮರು. ಗಣರಾಜ್ಯೋತ್ಸವಕ್ಕಾಗಿ ಕೇರಳ ಸರಕಾರ ಕಳುಹಿಸಿದ ಇವರ ಸ್ತಬ್ಧಚಿತ್ರವನ್ನು ಕೇಂದ್ರ ಸರಕಾರ ಕಡೆಗಣಿಸಿದೆ ಎಂಬ ಆರೋಪದ ಮೂಲಕ ವಿವಾದ ಸೃಷ್ಟಿಸಿ ಹೇಗಾದರೂ ಮಾಡಿ ಅಧಿಕಾರ ಪಡೆಯಬೇಕೆಂಬ ಉದ್ದೇಶದಿಂದ ಇರುವ ಪಕ್ಷಗಳು ಜನರ ಮನಸ್ಸಿನಲ್ಲಿ ಗೊಂದಲ ಉಂಟು ಮಾಡಲೆತ್ನಿಸುತ್ತಿರುವುದು ಖಂಡನೀಯ. ಸುಳ್ಳು ಪ್ರಚಾರದ ಮೂಲಕ ಜನರ ನಡುವೆ ಒಡಕುಂಟು ಮಾಡಲು ಮುಂದಾಗಿರುವುದು ಖೇದಕರ ಎಂದು ಹೇಳಿಕೆಯಲ್ಲಿ ತಿಳಿಸಿದ್ದು, ಇಂತಹ ಹುನ್ನಾರಗಳ ವಿರುದ್ಧ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದ್ದಾರೆ.

ಗಣರಾಜ್ಯೋತ್ಸವ ದಿನದಂದು ದಿಲ್ಲಿಯ ರಾಜಪಥದಲ್ಲಿ ಸಾಗುವ ಟ್ಯಾಬ್ಲೋಗಳ ಆಯ್ಕೆಗಾಗಿ ಕೆಲವು ಮಾರ್ಗದರ್ಶಿ ಸೂತ್ರಗಳಿವೆ. ಕೇಂದ್ರ ಸರಕಾರ ಕಳುಹಿಸಿದ ಮಾರ್ಗದರ್ಶಿ ಸೂತ್ರಗಳನ್ನು ಕೇರಳ ಸರಕಾರ ನಿರ್ಲಕ್ಷ್ಯ ಮಾಡಿದೆ. ಕೇರಳ ಸರಕಾರದ ಧೋರಣೆಯಿಂದ ರದ್ದಾಗಿದೆ ವಿನಾ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರ ಎನ್ನುವ ಕಾರಣಕ್ಕೆ ಕೇಂದ್ರ ಸರಕಾರ ರದ್ದು ಮಾಡಿಲ್ಲ ಎಂಬುದು ವಾಸ್ತವ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ನಾರಾಯಣ ಗುರುಗಳ ವಾಕ್ಯವನ್ನು ಪರಿಪಾಲಿಸುವ ನಾಯಕರಾಗಿದ್ದಾರೆ.
ಗಣರಾಜ್ಯೋತ್ಸವದಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ತಬ್ಧಚಿತ್ರದ ಮೆರವಣಿಗೆಗೆ ನಮ್ಮೆಲ್ಲರ ಬೆಂಬಲವಿದೆ. ಹಾಗೆಂದು ಇದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಬಿರುವೆರ್ ಕುಡ್ಲ ಸಂಘಟನೆಯ ವಿದ್ಯಾ ರಾಕೇಶ್, ರಾಕೇಶ್ ಸಾಲ್ಯಾನ್, ಕಿಶೋರ್ ಬಾಬು, ಪ್ರಾಣೇಶ್ ಬಂಗೇರ, ಕಿರಣ್, ರಕ್ಷಿತ್ ಸುವರ್ಣ ಇದ್ದರು.
Biruver Kudla organization has lamented the fact that some parties have been trying to mislead people in the name of Brahmashree Narayana Guru, who devoted himself to the ideals of one caste, one religion and one god, with an eye on reaping political benefits.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm