ಬ್ರೇಕಿಂಗ್ ನ್ಯೂಸ್
26-01-22 05:43 pm Mangalore correspondence ಕರಾವಳಿ
ಮಂಗಳೂರು, ಜ.26 : ಕಮ್ಯುನಿಸ್ಟ್ ಮತ್ತು ಕಾಂಗ್ರೆಸಿಗರು ಬ್ರಹ್ಮಶ್ರೀ ನಾರಾಯಣ ಗುರು ಹೆಸರಲ್ಲಿ ರಾಜಕೀಯ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿದ್ದಾರೆ. ನಾರಾಯಣ ಗುರುಗಳ ಹೆಸರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದು ತಪ್ಪು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಗಣರಾಜ್ಯೋತ್ಸವ ಸಮಾರಂಭದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸುನಿಲ್ ಕುಮಾರ್, ನಾರಾಯಣ ಗುರುಗಳು ಒಂದು ಸಮುದಾಯಕ್ಕೆ, ಒಂದು ಜಾತಿಗೆ, ಒಂದು ಧರ್ಮಕ್ಕೆ ಸೀಮಿತರಾದ ವ್ಯಕ್ತಿಯಲ್ಲ. ಅವೆಲ್ಲದಕ್ಕಿಂತಲೂ ಮಿಗಿಲಾದ ವ್ಯಕ್ತಿತ್ವ ಅವರದ್ದು. ಆದರೆ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಗುರುಗಳ ಹೆಸರನ್ನು ತಮ್ಮ ಏಳಿಗೆಗಾಗಿ, ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದಾರೆ. ಈ ರೀತಿಯ ವರ್ತನೆಯಿಂದ ಸಮಾಜದಲ್ಲಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇವರು ಕಳೆದ ಬಾರಿ ಮಂಗಳೂರಿನ ಲೇಡಿಹಿಲ್ ಸರ್ಕಲ್ ಗೆ ನಾರಾಯಣ ಗುರುಗಳ ಹೆಸರಿಡುವ ಪ್ರಸ್ತಾಪ ಬಂದಾಗ ವಿರೋಧ ಮಾಡಿದ್ದರು. ಕಾಂಗ್ರೆಸ್ ನಾಯಕರು ಅದಕ್ಕೆ ವಿರೋಧಿಸಿದ್ದು ನಾರಾಯಣ ಗುರುಗಳಿಗೆ ಮಾಡಿದ ಅವಮಾನ ಅಲ್ಲವೇ ಎಂದು ಪ್ರಶ್ನೆ ಮಾಡಿದರು.
ನಾರಾಯಣ ಗುರುಗಳ ಸ್ತಬ್ಧಚಿತ್ರದ ಹೆಸರಲ್ಲಿ ಕೇರಳ ಸರಕಾರ ಹುಟ್ಟುಹಾಕಿರುವ ವಿವಾದಕ್ಕೆ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಬೆಂಕಿ ಕೊಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ನಾಯಕರು ತಮ್ಮ ಪಕ್ಷಕ್ಕೆ ಬಿಜೆಪಿ ಶಾಸಕರು ಬರಲಿದ್ದಾರೆ ಎಂಬ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಸುನಿಲ್, ಕಾಂಗ್ರೆಸ್ ನಾಯಕರು ಅಭದ್ರತೆಯ ಭಾವನೆಯಿದೆ. ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಎಲ್ಲಿ ಮುಟ್ಟಿದೆ ಎನ್ನುವುದು ಎಲ್ಲರಿಗೂ ಗೊತ್ತು. ಇಂಥ ಅಭದ್ರ ಭಾವದ ಸ್ಥಿತಿಯಲ್ಲಿ ಏನೇನೊ ಹೇಳುತ್ತಿದ್ದಾರೆ. ಮುಂದಿನ ಬಿಬಿಎಂಪಿ ಮತ್ತು ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಥಿತಿ ತಿಳಿಯಲಿದೆ. ಒಡೆದ ಮನೆಯಾಗಿರುವ ರಾಜ್ಯದ ಕಾಂಗ್ರೆಸ್, ಇನ್ನಷ್ಟು ಅಧೋಗತಿಗೆ ಹೋಗಲಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಹೃದಯ ಪೂರ್ವಕವಾಗಿ ನನಗೆ ವಹಿಸಿದ ಜವಾಬ್ದಾರಿಯನ್ನು ಸ್ವಾಗತಿಸುತ್ತೇನೆ. ಇಲ್ಲಿನ ಶಾಸಕರ ಜೊತೆಗೆ ಜಿಲ್ಲೆಯ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.
District in-charge minister Sunil Kumar on Wednesday January 26 slammed the Communists and Congress and accused them of misusing Bahmashree Narayana Guru’s name for political gain. Speaking to media after the Republic Day celebration at Nehru Maidan, he said, “Narayana Guru is not limited to a caste or system, he is above all. Congress and Communists are misusing Narayana Guru’s name for politics.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm