ಬ್ರೇಕಿಂಗ್ ನ್ಯೂಸ್
28-01-22 02:24 pm HK Desk news ಕರಾವಳಿ
ಉಡುಪಿ, ಜ.28 : ಯಕ್ಷಗಾನದ ನಡೆಯುತ್ತಿದ್ದಾಗ ವೇಷಧಾರಿಗೆ, ಮೈಮೇಲೆ ದೈವದ ಆವೇಶ ಬಂದು ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಸಮೀಪದ ಬೆಪ್ದೆ ಎಂಬಲ್ಲಿ ಗುರುವಾರ ರಾತ್ರಿ ಮಡಾಮಕ್ಕಿ ಮೇಳದವರಿಂದ ಮಡಾಮಕ್ಕಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ನಡೆಯುತ್ತಿತ್ತು. ಮೇಳದ ಕಲಾವಿದ ವೀರಭದ್ರ ಸ್ವಾಮಿ ಎಂಬವರು ಕೋಟೆರಾಯನ ವೇಷ ಧರಿಸಿ, ರಂಗಸ್ಥಳ ಪ್ರವೇಶ ಆಗುತ್ತಿದ್ದಂತೆ, ದೈವದ ಆವೇಶ ಆಗಿದೆ. ಐದು ನಿಮಿಷದ ವರೆಗೆ ಪ್ರೇಕ್ಷಕರು ಪಾತ್ರಧಾರಿಯನ್ನು ಹಿಡಿದುಕೊಂಡರೂ ಆವೇಶ ನಿಲ್ಲಲಿಲ್ಲ. ಕೈಯಲ್ಲಿದ್ದ ದೀವಟಿಗೆ ಹಿಡಿದುಕೊಂಡು ಆವೇಶ ತೋರಿದ ಪ್ರಸಂಗ ನಡೆದಿದೆ.


ಕೊನೆಗೆ ಚೌಕಿಯಿಂದ ದೇವರ ತೀರ್ಥ ತಂದು ಪ್ರೋಕ್ಷಣೆ ಮಾಡಿದಾಗ ಕಲಾವಿದ ಕೈಯಲ್ಲಿದ್ದ ದೀವಟಿಗೆಯ ಮೇಲಿನ ಹಿಡಿತ ಸಡಿಲಿಸಿದ್ದಾನೆ. ಆನಂತರ ಹಿಡಿತ ಕೈಬಿಟ್ಟು ನೆಲಕ್ಕೆ ಒರಗಿದ್ದಾರೆ. ಸಾಮಾನ್ಯವಾಗಿ ದೈವದ ಆವೇಶ ಬಂದವರ ರೀತಿಯಲ್ಲೇ ಯಕ್ಷಗಾನ ಪಾತ್ರಧಾರಿ ವರ್ತಿಸಿದ್ದಾರೆ. ಘಟನೆಯನ್ನು ಅಲ್ಲಿದ್ದ ಪ್ರೇಕ್ಷಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Video, Udupi Daiva arrives upon yakshagana artist during play at Udupi. The video of this has gone viral on Social Media.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm