ಬ್ರೇಕಿಂಗ್ ನ್ಯೂಸ್
13-02-22 03:01 pm HK Desk news ಕರಾವಳಿ
ಉಡುಪಿ, ಫೆ 13: ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸಮರಕ್ಕೆ ಕಡಿವಾಣ ಹಾಕಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆ ಎಲ್ಲಾ ಪ್ರೌಢ ಶಾಲಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಆದೇಶಿಸಿದ್ದಾರೆ.
ಈ ಆದೇಶ ಫೆ. 14 ಬೆಳಗ್ಗೆ 6 ಗಂಟೆಯಿಂದ ಫೆ. 19 ರ ಸಂಜೆ 6 ಗಂಟೆವರೆಗೆ ಜಾರಿಯಲ್ಲಿರಲಿದೆ ಎಂದು ಹೇಳಿದ್ದಾರೆ. ಹಿಜಾಬ್ ವಿವಾದ ಹಿನ್ನೆಲೆ ಶಾಲೆಗಳಿಗೆ ರಜೆ ನೀಡಲಾಗಿತ್ತು. ಸದ್ಯ ಈಗ ರಾಜ್ಯದಲ್ಲಿ ನಾಳೆಯಿಂದ ಪ್ರೌಢಶಾಲೆ ಪುನಾರಂಭಗೊಳ್ಳಲಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ, ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ. ಯಾವುದೇ ವ್ಯಕ್ತಿ, ಜಾತಿ ಧರ್ಮದ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಉಡುಪಿ ಜಿಲ್ಲೆಯ ಮೂವರು ಉಪವಿಭಾಗಾಧಿಕಾರಿಗಳ ಮನವಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಸಿ ಕೂರ್ಮಾರಾವ್ ತಿಳಿಸಿದ್ದಾರೆ. ಉಡುಪಿ ಎಸ್ಪಿ ವಿಷ್ಣುವರ್ಧನ್ ಫೆಬ್ರವರಿ 11 ರಂದು ಡಿಸಿಗೆ ಪತ್ರ ಬರೆದು ಶಾಲಾ ಆವರಣದಲ್ಲಿ ಶಾಂತಿಯುತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ನಿಷೇಧಾಜ್ಞೆ ಜಾರಿಗೊಳಿಸಬೇಕು ಎಂದು ತಿಳಿಸಿದ್ದರು.
A mid the hijab row, prohibitory orders under Section 144 have been imposed around all high schools in Karnataka's Udupi district. The prohibitory orders will come into effect at 6 am on Monday, February 14, and remain enforced till 6 pm on Saturday, February 19.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm