ಬ್ರೇಕಿಂಗ್ ನ್ಯೂಸ್
15-02-22 04:01 pm Mangalore Correspondent ಕರಾವಳಿ
ಮಂಗಳೂರು, ಫೆ.15 : ಸಾಮಾಜಿಕ ಜಾಲತಾಣ ಸೇರಿದಂತೆ ಕೆಲವು ಮಾಧ್ಯಮಗಳಲ್ಲಿ ಹಿಜಾಬ್ ಪರ ಹೈಕೋರ್ಟಿನಲ್ಲಿ ವಾದಿಸುತ್ತಿರುವ ದೇವದತ್ತ ಕಾಮತ್ ಅವರನ್ನು ರಾಮಕೃಷ್ಣ ಮಠ ಸಮರ್ಥಿಸಿಕೊಂಡಿದೆ ಎಂಬ ಸುದ್ದಿ ಹರಿದಾಡುತ್ತಿರುವುದು ಸತ್ಯಕ್ಕೆ ದೂರವಾದದ್ದು. ಕಾರವಾರದಲ್ಲಿ ಇರುವ ರಾಮಕೃಷ್ಣ ಆಶ್ರಮ ಎಂಬ ಸಂಸ್ಥೆಗೂ ಅಧಿಕೃತವಾಗಿ ವಿವೇಕಾನಂದರು ಸ್ಥಾಪಿಸಿದ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಗೂ ಯಾವುದೇ ರೀತಿಯಲ್ಲಿಯೂ ಸಂಬಂಧ ಇರುವುದಿಲ್ಲ ಎಂದು ಮಂಗಳೂರಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಸ್ಪಷ್ಟನೆ ನೀಡಿದ್ದಾರೆ.
ಕಾರವಾರದಲ್ಲಿ ರಾಮಕೃಷ್ಣ ಆಶ್ರಮ ಸ್ವತಂತ್ರ ಮತ್ತು ಖಾಸಗಿಯಾಗಿ ಕಾರ್ಯ ನಿರ್ವಹಿಸುವ ಸಂಸ್ಥೆಯಾಗಿದ್ದು ಅಲ್ಲಿನ ಅಧ್ಯಕ್ಷ ಸ್ವಾಮಿ ಭವೇಶಾನಂದಜಿ ಹೇಳಿಕೆ ಅವರ ಖಾಸಗಿ ಆಶ್ರಮದ ಹಾಗೂ ವೈಯಕ್ತಿಕ ಹೇಳಿಕೆಯೇ ಹೊರತು ರಾಮಕೃಷ್ಣ ಮಠ ಮತ್ತು ಮಿಷನ್ನಿನ ಹೇಳಿಕೆಯೆಂದು ಭಾವಿಸಬಾರದು.
ಹಿಜಾಬ್ ವಿಷಯ ಈಗಾಗಲೇ ಉಚ್ಚ ನ್ಯಾಯಾಲಯದಲ್ಲಿ ಇರುವುದರಿಂದ ಈ ತೆರನಾದ ಹೇಳಿಕೆ ಹಾಗೂ ಸುದ್ದಿಗಳು ಅನಗತ್ಯ. ಸಾಮಾನ್ಯವಾಗಿ ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಇಂತಹ ವಿಷಯಗಳಿಂದ ಅಂತರ ಕಾಯ್ದುಕೊಂಡು, ಯಾವುದೇ ಜನರ ಭಾವನೆಗಳಿಗೆ ಧಕ್ಕೆ ಬಾರದಂತೆ ನಡೆದುಕೊಳ್ಳುವ ಒಂದು ಜವಾಬ್ದಾರಿಯುತ ಸಂಸ್ಥೆಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದೆ.
ಈ ಹಿನ್ನಲೆಯಲ್ಲಿ ಕಾರವಾರದಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಭವೇಶಾನಂದಜಿ ವ್ಯಕ್ತ ಮಾಡಿರುವ ಅಭಿಪ್ರಾಯಗಳು ಅವರ ವೈಯಕ್ತಿಕ. ಅದನ್ನು ರಾಮಕೃಷ್ಣ ಮಠದ ನಿಲುವು ಅಥವಾ ಹೇಳಿಕೆ ಎಂದು ಯಾರೂ ಪರಿಗಣಿಸಬಾರದೆಂದು ಕೋರಲಾಗಿದೆ ಕೊಲ್ಕತ್ತಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ರಾಮಕೃಷ್ಣ ಮಠದ ಅಂಗಸಂಸ್ಥೆ ಮಂಗಳೂರಿನ ರಾಮಕೃಷ್ಣ ಮಠದ ವತಿಯಿಂದ ಸ್ಪಷ್ಟನೆ ನೀಡಲಾಗಿದೆ.
There is No support to Hijab Students advocate Devadatt Kamat from Ramkrishna Math, clarifies Mangalore Ramkrishna Math swami in a media release. Advocate Devadatt Kamat, who has been representing the female Muslim students in both the Karnataka High Court and the Supreme Court in the ongoing hijab row, has been subject to criticism for the same. According to sources, apart from comments and messages online, some members of the Gaud Saraswat Brahmin (GSB) community, to which Devadatt belongs, had asked for him to be excommunicated.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm