ಬ್ರೇಕಿಂಗ್ ನ್ಯೂಸ್
16-02-22 02:22 pm HK Desk news ಕರಾವಳಿ
ಉಡುಪಿ, ಫೆ.16 : ಹಿಜಾಬ್ ವಿಚಾರದಲ್ಲಿ ಮೊದಲ ಬಾರಿಗೆ ರಾಜ್ಯದ ಗಮನ ಸೆಳೆದು ಕೋರ್ಟ್ ಮೆಟ್ಟಿಲೇರಿದ್ದ ಉಡುಪಿಯ ಸರಕಾರಿ ಹೆಮ್ಮಕ್ಕಳ ಕಾಲೇಜಿನಲ್ಲಿ ಆರು ಮಂದಿ ವಿದ್ಯಾರ್ಥಿನಿಯರು ತರಗತಿಗೆ ಗೈರಾಗಿದ್ದಾರೆ. ಕಾಲೇಜಿನತ್ತ ಸುಳಿಯದೇ ಹಿಜಾಬ್ ಗಲಾಟೆಯೇ ಬೇಡವೆಂದು ದೂರ ಉಳಿದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಲೇಜಿನ ಪ್ರಾಂಶುಪಾಲ ರುದ್ರೇಗೌಡ, ವಿವಾದ ಎಬ್ಬಿಸಿದ್ದ ಆರು ಜನ ಕಾಲೇಜಿಗೆ ಬಂದಿಲ್ಲ. ಇತರ 80ಕ್ಕೂ ಹೆಚ್ಚು ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿದ್ದು ಹಿಂದಿನ ರೀತಿಯಲ್ಲೇ ತರಗತಿಗೆ ಹಿಜಾಬ್ ತೆಗೆದು ಹಾಜರಾಗಿದ್ದಾರೆ. ಎಂದಿನಂತೆ ಕ್ಲಾಸ್ ಆರಂಭಗೊಂಡಿದ್ದು ಯಾವುದೇ ಗಲಾಟೆ ನಡೆದಿಲ್ಲ ಎಂದಿದ್ದಾರೆ.

ಉಡುಪಿ ಬಳಿಕ ಹಿಜಾಬ್ ವಿವಾದ ಕಾಣಿಸಿಕೊಂಡಿದ್ದ ಕುಂದಾಪುರದ ಸರಕಾರಿ ಕಾಲೇಜಿನಲ್ಲಿ ಗೇಟ್ ಬಳಿ ನಿಂತು ಪ್ರತಿಭಟನೆ ನಡೆಸಿದ್ದ 23 ವಿದ್ಯಾರ್ಥಿನಿಯರು ಕಾಲೇಜಿಗೆ ಬಂದಿಲ್ಲ. ಕಳೆದ ಬಾರಿ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ವ್ಯವಸ್ಥೆ ಮಾಡಲಾಗಿತ್ತು. ಈಗ ಆ 23 ಮಂದಿ ಕಾಲೇಜಿಗೇ ಬರದೆ ದೂರ ಉಳಿದಿದ್ದಾರೆ. ಇತರ ಮುಸ್ಲಿಂ ವಿದ್ಯಾರ್ಥಿನಿಯರು ಎಂದಿನಂತೆ ಕಾಲೇಜಿಗೆ ಬಂದಿದ್ದು ಬುರ್ಖಾ, ಹಿಜಾಬ್ ತೆಗೆದು ತರಗತಿಗೆ ಹಾಜರಾಗಿದ್ದಾರೆ.

ಉಡುಪಿಯ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿಯೂ ಗೊಂದಲ ಉಂಟಾಗಿದೆ. ಈ ಹಿಂದೆ ಹಿಜಾಬ್ ಧರಿಸಿಯೇ ವಿದ್ಯಾರ್ಥಿನಿಯರು ಕಾಲೇಜಿಗೆ ಬರುತ್ತಿದ್ದರು ಎನ್ನಲಾಗಿದೆ. ಈಗ ಉಪನ್ಯಾಸಕರು ಹಿಜಾಬ್ ತೆಗೆಯಲು ಸೂಚಿಸಿದ್ದಕ್ಕೆ 15 ಮಂದಿ ಆಕ್ಷೇಪಿಸಿದ್ದಾರೆ. ಬಳಿಕ ಪ್ರಾಂಶುಪಾಲರ ಕೊಠಡಿಯಲ್ಲಿ ಅವರನ್ನು ಮನವೊಲಿಸುವ ಯತ್ನ ನಡೆದಿದೆ.

ಎಂಜಿಎಂ ಕಾಲೇಜಿನಲ್ಲಿ ಪಿಯುಗೆ ಅನಿರ್ದಿಷ್ಟ ರಜೆ !
ಕಳೆದ ವಾರ ಹಿಜಾಬ್ ವಿಚಾರದಲ್ಲಿ ತೀವ್ರ ಗಲಾಟೆಗೆ ಕಾರಣವಾಗಿದ್ದ ಉಡುಪಿಯ ಎಂಜಿಎಂ ಪಿಯು ಕಾಲೇಜಿಗೆ ರಜೆ ನೀಡಲಾಗಿದೆ. ಪಿಯು ಕಾಲೇಜನ್ನು ಹೈಕೋರ್ಟ್ ಆದೇಶ ಬರೋ ವರೆಗೂ ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ತರಗತಿ ಮುಂದುವರಿಸಲಾಗಿದೆ. ನಿಗದಿತ ಪರೀಕ್ಷೆಗಳನ್ನು ಬರೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ. ಗೊಂದಲ, ಜಟಾಪಟಿಗೆ ಅವಕಾಶ ಕೊಡದಿರಲು ಎಂಜಿಎಂ ಕಾಲೇಜಿನ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಫೆಬ್ರವರಿ 7ರಂದು ಕಾಲೇಜಿನಲ್ಲಿ ಬುರ್ಖಾ, ಹಿಜಾಬ್ ಮತ್ತು ಕೇಸರಿ ಶಾಲು ಹಾಕಿದ ವಿದ್ಯಾರ್ಥಿಗಳ ನಡುವೆ ತೀವ್ರ ಜಟಾಪಟಿ ನಡೆದಿತ್ತು. ಹೀಗಾಗಿ ಪಿಯು ಕಾಲೇಜಿಗೆ ಅನಿರ್ದಿಷ್ಟಾವಧಿ ರಜೆಯನ್ನು ಘೋಷಿಸಲಾಗಿದೆ. ಇದೇ ವೇಳೆ, ಕಾಲೇಜಿವ ಪದವಿ ವಿಭಾಗಕ್ಕೂ ಎರಡು ದಿನ ರಜೆ ನೀಡಿದ್ದು ಶುಕ್ರವಾರದಿಂದ ಕಾಲೇಜು ಆರಂಭಗೊಳ್ಳುವ ಸಾಧ್ಯತೆಯಿದೆ.
Hijab Row, Udupi Kundapur Hijab students absent as college starts today. As the verdict is yet to come form the high court the Hijab students weren't present at the college.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm