ಬ್ರೇಕಿಂಗ್ ನ್ಯೂಸ್
20-09-20 10:06 am Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 21: ಉಡಪಿ ಜಿಲ್ಲೆಯಲ್ಲಿ ಮಳೆರಾಯನ ಆರ್ಭಟಕ್ಕೆ ಜನಜೀವನ ಸ್ತಬ್ಧವಾಗುವ ಲಕ್ಷಣ ಗೋಚರಿಸಿದೆ. ಉಡುಪಿ ಪೇಟೆ ಆಸುಪಾಸಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಂಡುಕೇಳರಿಯದ ರೀತಿ ನೆರೆ ಕಾಣಿಸಿಕೊಂಡಿದ್ದು ಉಡುಪಿ - ಮಣಿಪಾಲ ಸಂಪರ್ಕಿಸುವ ಹೆದ್ದಾರಿ ಹೊಳೆಯ ರೂಪ ಪಡೆದು ಪ್ರವಾಹ ಕಾಣಿಸಿದೆ. ಹೆದ್ದಾರಿಯಲ್ಲಿ ನೀರು ತುಂಬಿದ್ದರಿಂದ ಸಂಪರ್ಕ ಕಡಿತಗೊಂಡಿದೆ.
ಶನಿವಾರ ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದ್ದು ಉಡುಪಿ ನಗರದ ಪ್ರಮುಖ ಬೀದಿಗಳು ಜಲಾವೃತವಾಗಿವೆ. ಉಡುಪಿ- ಮಣಿಪಾಲ ಸಂಪರ್ಕದ ಹೆದ್ದಾರಿಯಲ್ಲಿ ನಿನ್ನೆ ರಾತ್ರಿಯಿಂದಲೇ ನೀರು ತುಂಬಿ ಹೊಳೆಯಂತೆ ಹರಿಯುತ್ತಿದೆ. ಕೃಷ್ಣಮಠ ಪರಿಸರದ ಕಲ್ಸಂಕ ಬೈಲಕೆರೆ ಆಸುಪಾಸಿನಲ್ಲಿ ಭಾರೀ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ನೀರಿನಲ್ಲಿ ಮುಳುಗಿವೆ.
ಬನ್ನಂಜೆ ಕೊಡವೂರು ಪಾಡಿಗಾರು ಗುಂಡಿಬೈಲಿನ ತಗ್ಗು ಪ್ರದೇಶಗಳೆಲ್ಲ ಜಲಾವೃತಗೊಂಡಿವೆ. ಪೆರ್ಡೂರಿನ ಪುತ್ತಿಗೆ ಮಠದ ಪರಿಸರದಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ. ನೆರೆಯಿಂದಾಗಿ ಮಲ್ಪೆ- ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು ತುಂಬಿದ್ದು ಸಂಚಾರ ವ್ಯತ್ಯಯಗೊಂಡಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ ಸೇತುವೆ ಪರಿಸರವೂ ಮುಳುಗಡೆಯಾಗಿದ್ದು ಈ ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಿದೆ.
ಸ್ವರ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಆಸುಪಾಸಿನಲ್ಲಿ ನೆರೆ ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ಮಳೆನೀರು ಹರಿಯಲು ಜಾಗ ಇಲ್ಲದೆ ಉಡುಪಿ ಪೇಟೆಯ ವಿವಿಧೆಡೆ ಮುಳುಗಡೆಯಾಗಿದೆ. ಮಾಣೈ ಪರಿಸರದಲ್ಲಿ ನೀರು ಪ್ರವಾಹದ ರೂಪದಲ್ಲಿ ಹರಿಯುತ್ತಿದ್ದು ಆ ಭಾಗದ ಸುಮಾರು ಇಪ್ಪತ್ತು ಮನೆಗಳು ಮುಳುಗಡೆಯಾಗಿವೆ. ಸ್ಥಳೀಯ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗುತ್ತಿದೆ.
ಉಡುಪಿ- ಮಣಿಪಾಲ ಹೆದ್ದಾರಿ ಬಂದ್ ಆಗಿರುವುದರಿಂದ ಉಡುಪಿ- ಆಗುಂಬೆ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಚಾರವೂ ಸ್ಥಗಿತವಾಗಿದೆ.
ಪುತ್ತಿಗೆ ವಿದ್ಯಾಪೀಠಕ್ಕೆ ನುಗ್ಗಿದ ನೀರು !
ಇನ್ನು ಹಿರಿಯಡ್ಕ ಪರಿಸರದಲ್ಲಿ ಸ್ವರ್ಣಾ ನದಿಯ ನೆರೆಯಿಂದಾಗಿ ಪುತ್ತಿಗೆ ಶ್ರೀಗಳ ಮೂಲಮಠಕ್ಕೆ ನೀರು ನುಗ್ಗಿದೆ. ಮಠದ ಗೋಶಾಲೆಯೂ ಜಲಾವೃತಗೊಂಡಿದ್ದು ಸ್ಥಳೀಯರ ನೆರವಿನೊಂದಿಗೆ ಗೋವುಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm