ಬ್ರೇಕಿಂಗ್ ನ್ಯೂಸ್
03-03-22 10:42 am Mangalore Correspondent ಕರಾವಳಿ
ಮಂಗಳೂರು, ಮಾ. 3: ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆ ವಿರುದ್ಧ ಮತ್ತು ರಾಜ್ಯದಲ್ಲಿ ಕ್ರೈಸ್ತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರ ಸೇರಿ ಜಿಲ್ಲೆಯಾದ್ಯಂತ ಕ್ರಿಸ್ತಿಯನ್ನರು ಚರ್ಚ್ ಗಳ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಕೆಥೋಲಿಕ್ ಸಭಾ ಮಂಗಳೂರು ಸಮಿತಿ ಹಾಗೂ ದ.ಕ. ಜಿಲ್ಲೆಯ ಎಲ್ಲ ಕಡೆಯ ಕೆಥೋಲಿಕ್ ಸಭಾ ಘಟಕಗಳ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಚರ್ಚುಗಳ ಮುಂದಿನ ರಸ್ತೆ , ಹೆದ್ದಾರಿಗಳಲ್ಲಿ ಏಕಕಾಲದಲ್ಲಿ ಮೊಂಬತ್ತಿ ಮೆರವಣಿಗೆ, ಪ್ರತಿಭಟನಾ ಧರಣಿ ನಡೆಸಲಾಗಿದೆ. ರಾಜ್ಯ ಸರಕಾರದ ಮತಾಂತರ ನಿಷೇಧ ಕಾಯ್ದೆ ವಿರುದ್ಧ ಅಭಿಯಾನ ರೂಪದಲ್ಲಿ ರಸ್ತೆ ಬದಿ ಜನರು ಭಿತ್ತಿಪತ್ರಗಳನ್ನು ಹಿಡಿದು ಧರಣಿ ನಡೆಸಿದರು. ಇತ್ತೀಚೆಗೆ ಕಾವೂರಿನ ಪಂಜಿಮೊಗರಿನಲ್ಲಿ 40 ವರ್ಷಗಳ ಹಿಂದಿನ ಕ್ರೈಸ್ತ ಪ್ರಾರ್ಥನಾ ಮಂದಿರದ ಧ್ವಂಸ, ಬೆಂಗಳೂರಿನ ಬೆಟ್ಟವೊಂದರ ಮೇಲಿದ್ದ ಯೇಸುಕ್ರಿಸ್ತರ ಮೂರ್ತಿಯ ಧ್ವಂಸ ಇತ್ಯಾದಿ ವಿರುದ್ಧ ಸಾವಿರಾರು ಕ್ರೈಸ್ತರು ಭಿತ್ತಿಪತ್ರ ಪ್ರದರ್ಶಿಸಿ, ಮೊಂಬತ್ತಿ ಉರಿಸಿ ವೌನ ಪ್ರತಿಭಟನೆ ನಡೆಸಿದರು.







ಪ್ರತಿಭಟನೆಯಲ್ಲಿ ಸೇರಿದ್ದವರು ಮಾನವ ಸರಪಳಿ ರಚಿಸಿ, ಒಗ್ಗಟ್ಟು ಪ್ರದರ್ಶಿಸಿದರು. ಮಂಗಳೂರಿನ ಬೆಂದೂರು, ಬಿಜೈ, ಮಿಲಾಗ್ರಿಸ್, ಬೋಂದೆಲ್ ಸೇರಿ ಎಲ್ಲ ಚರ್ಚ್ ಗಳ ಮುಂದಿನ ರಸ್ತೆಗಳಲ್ಲಿ ಪ್ರತಿಭಟನೆ ನಡೆದಿದ್ದು ಆಯಾ ಭಾಗದ ಕ್ರೈಸ್ತ ಧರ್ಮಗುರುಗಳು, ಭಗಿನಿಯರು ಮೊಂಬತ್ತಿ ಮೆರವಣಿಗೆಯಲ್ಲಿ ಪಾಲ್ಗೊಂಡರು.







ಬಿಷಪ್ ಪೀಟರ್ ಪೌಲ್ ಸಲ್ದಾನಾ ಪಾಲ್ಗೊಂಡಿದ್ದರು. ಕೆಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಅಧ್ಯಕ್ಷ ಸ್ಟ್ಯಾನ್ಲಿ ಲೋಬೋ ಮತ್ತು ಮಂಗಳೂರು ಧರ್ಮಪ್ರಾಂತದ ಪಿಆರ್ಓ ರಾಯ್ ಕ್ಯಾಸ್ಟಲಿನೋ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಸಂಜೆ 6ರಿಂದ 7ರ ವರೆಗೆ ಪ್ರತಿಭಟನಾ ಧರಣಿ ನಡೆಸಲಾಗಿದ್ದು ರಾಜ್ಯ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ನಡೆದಿದೆ.
The Catholic Sabha, along with all its local branches in the district, held a candle light human chain on the roads and highways outside all the churches throughout Dakshina Kannada district on Wednesday, March 2 as a mark of peaceful protest against the Anti Conversion Bill proposed by the government of Karnataka. The protest began at 6 PM simultaneously in all the parishes including Rosario, Milagres, Bejai, Bendoor, Bondel and Neermarga.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm