ಬ್ರೇಕಿಂಗ್ ನ್ಯೂಸ್
03-03-22 12:00 pm Mangalore Correspondent ಕರಾವಳಿ
ಮಂಗಳೂರು, ಮಾ.3: ಉಕ್ರೇನಿನ ಯುದ್ಧಪೀಡಿತ ಪ್ರದೇಶ ಖಾರ್ಕಿವ್ ನಗರದಲ್ಲಿ ರಷ್ಯಾ ಬಾಂಬ್ ದಾಳಿಯಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ವೈದ್ಯ ವಿದ್ಯಾರ್ಥಿ ನವೀನ್ ಇದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿನಿಯೂ ಸಿಕ್ಕಿಬಿದ್ದಿದ್ದಿದ್ದು ಸದ್ಯಕ್ಕೆ ರಾಯಭಾರ ಕಚೇರಿ ಸೂಚನೆ ಮೇರೆಗೆ ಆಕೆಯನ್ನು ಕರೆತರುವ ಕೆಲಸ ನಡೆದಿದೆ.
ಮಂಗಳವಾರ ಬೆಳಗ್ಗೆ ರಷ್ಯಾ ಬಾಂಬ್ ದಾಳಿ ವೇಳೆ, ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ವೈದ್ಯ ವಿದ್ಯಾರ್ಥಿನಿ ಹೀನಾ ಫಾತಿಮಾ ಅವರೂ ಅಲ್ಲಿಯೇ ಸನಿಹದ ಬಂಕರ್ ನಲ್ಲಿ ಅಡಗಿಕೊಂಡಿದ್ದು ಅಪಾಯದ ಸ್ಥಿತಿಯಲ್ಲಿದ್ದರು. ಉಜಿರೆಯ ಟಿ.ಬಿ ಕ್ರಾಸ್ ನಿವಾಸಿ ದಿ. ಯಾಸೀನ್ ಮತ್ತು ಶಹನಾ ದಂಪತಿ ಪುತ್ರಿ ಹೀನಾ ಫಾತಿಮಾ ಉಕ್ರೇನ್ ನಾಡಿನಲ್ಲಿ ದಾವಿನ ದವಡೆಗೆ ಸಿಲುಕಿದ್ದವರು. ದ್ವಿತೀಯ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಹೀನಾ ಬಾಂಬ್ ದಾಳಿಗೆ ಸಾವನ್ನಪ್ಪಿದ ನವೀನ್ ಅವರ ಬ್ಯಾಚ್ ನಲ್ಲೇ ಕಲಿಯುತ್ತಿದ್ದರು ಎಂದು ಅವರ ಮಾವ ಆಬಿದ್ ಅಲಿ ಮಾಹಿತಿ ನೀಡಿದ್ದಾರೆ.

ನವೀನ್ ಸಾವಿಗೆ ಕಾರಣವಾದ ರಷ್ಯಾ ನಡೆಸಿದ ಬಾಂಬ್ ದಾಳಿ ಹೀನಾ ಇದ್ದ ಕಟ್ಟಡಕ್ಕಿಂತ ಕೇವಲ 100 ಮೀ. ಅಂತರದಲ್ಲಿ ನಡೆದಿತ್ತು. ಕಟ್ಟಡದ ತಳಹಂತದ ಬಂಕರ್ನಲ್ಲಿ ಹೀನಾ ಫಾತಿಮಾ ಸೇರಿದಂತೆ ಒಟ್ಟು 7 ಮಂದಿ ಕನ್ನಡಿಗ ವಿದ್ಯಾರ್ಥಿಗಳು ತಮ್ಮನ್ನು ರಕ್ಷಿಸಿಕೊಂಡಿದ್ದರು. ಇದೀಗ ಭಾರತದ ವಿದೇಶಾಂಗ ಇಲಾಖೆ ವಿದ್ಯಾರ್ಥಿಗಳ ಜೊತೆ ಸಂಪರ್ಕ ಸಾಧಿಸಿದ್ದು, ಧೈರ್ಯ ತುಂಬುವ ಕಾರ್ಯ ಮಾಡುತ್ತಿದೆ. ಬುಧವಾರ ಕೂಡಲೇ ಹಿಂತಿರುಗುವಂತೆ ಅವರಿಗೆ ನಿರ್ದೇಶನ ನೀಡಿದ್ದು, ರೈಲಿನ ಮೂಲಕ 1000 ಕಿ.ಮೀ. ದೂರದಲ್ಲಿರುವ ಲಿವಿನ್ ಎಂಬ ಗಡಿ ಪ್ರದೇಶಕ್ಕೆ ಬರಲು ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಒಂದು ದಿನ ಪ್ರಯಾಣ ನಡೆಸಿ ಗಡಿ ಸೇರಿದರೆ ಅಲ್ಲಿಂದ ವಿಮಾನದ ಮೂಲಕ ಅವರನ್ನು ಭಾರತಕ್ಕೆ ಕರೆತರುವ ಬಗ್ಗೆ ರಾಯಭಾರ ಕಚೇರಿ ಯೋಜನೆ ರೂಪಿಸಿದೆ. ಹೀನಾ ಫಾತಿಮಾ ಅವರ ಜೊತೆ ಚಿಕ್ಕಮಗಳೂರು, ಬೆಂಗಳೂರಿನ ಇತರ ಆರು ಮಂದಿ ಇದ್ದಾರೆ ಎನ್ನಲಾಗುತ್ತಿದೆ.
Two Ujre students of Mangalore stranded in Ukraine where Naveen of Haveri lost his life. The two students are doing their second year medicine in Ukraine.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 08:41 pm
HK News Desk
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm